Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್‌: ಪೊಲೀಸ್‌ ಆಯುಕ್ತರ...

ಸುರತ್ಕಲ್‌: ಪೊಲೀಸ್‌ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

ʼಕಮಿಷನರ್‌ ಅನುಪಮ್‌ ಅಗರ್ವಾಲ್‌ ಹಟಾವೊʼ ಘೋಷಣೆ ಕೂಗಿದ ಪ್ರತಿಭಟನಾಕಾರರು

ವಾರ್ತಾಭಾರತಿವಾರ್ತಾಭಾರತಿ30 Nov 2024 9:59 PM IST
share
ಸುರತ್ಕಲ್‌: ಪೊಲೀಸ್‌ ಆಯುಕ್ತರ ವರ್ಗಾವಣೆಗೆ ಒತ್ತಾಯಿಸಿ ಪ್ರತಿಭಟನೆ

ಸುರತ್ಕಲ್:‌ ಜನಪರ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿ, ಪ್ರಜಾಪ್ರಭುತ್ವ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ಪೊಲೀಸ್‌ ಆಯುಕ್ತರನ್ನು ವರ್ಗಾಯಿಸಬೇಕೆಂದು ಆಗ್ರಹಿಸಿ ಡಿವೈಎಫ್‌ಐ ಸುರತ್ಕಲ್‌ ಶಾಖೆ ಮತ್ತು ಟೋಲ್‌ ಗೇಟ್‌ ಹೋರಾಟ ಸಮಿತಿಯ ಜಂಟಿ ಆಶ್ರಯದಲ್ಲಿ ಸುರತ್ಕಲ್‌ ಪೇಟೆಯಲ್ಲಿ ಶನಿವಾರ ನಡೆಸಿದ ಪ್ರತಿಭಟನೆಯನ್ನು ಪೊಲೀಸರು ಅರ್ಧದಲ್ಲೇ ಮೊಟಕುಗೊಳಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದುಕೊಂಡ ಘಟನೆ ವರದಿಯಾಗಿದೆ.

ಪ್ರತಿಭಟನೆಯನ್ನುದ್ದೇಶಿಸಿ ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್‌ ಮಾತನಾಡುತ್ತಿದ್ದರು. ಈ ವೇಳೆ ಪ್ರತಿಭಟನಾ ನಿರತರ ಮೇಲೆ ಏಕಾಏಕಿ ಮುತ್ತಿಗೆ ಹಾಕಿದ ಪಣಂಬೂರು ಎಸಿಪಿ ಶ್ರೀಕಾಂತ್‌ ನೇತೃತ್ವದ ಪೊಲೀಸರ ತಂಡ ಸುಮಾರು 25 ಮಂದಿ ಹೋರಾಟಗಾರರನ್ನು ವಶಕ್ಕೆ ಪಡೆದುಕೊಂಡಿತು. ಈ ವೇಳೆ ಪ್ರತಿಭಟನಾನಿರತರು ಪೊಲೀಸ್‌ ಆಯುಕ್ತರ ವಿರುದ್ಧ ಸೂಕ್ತ ಕಾನೂನು ಕ್ರಮಗಳನ್ನು ಕೈಗೊಳ್ಳಬೇಕು. ಅವರನ್ನು ಮಂಗಳೂರಿನಿಂದ ವರ್ಗಾಯಿಸಬೇಕು. ಜನಪರ ಕಾಳಜಿಯ ಅಧಿಕಾರಿಯನ್ನು ಮಂಗಳೂರಿಗೆ ನಿಯೋಜಿಸಬೇಕೆಂದು. "ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಹಟಾವೊʼ ಘೋಷಣೆಗಳನ್ನು ಕೂಗಿದರು. ಎರಡು ಬಸ್‌ಗಳಲ್ಲಿ ಹೋರಾಟಗಾರರನ್ನು ತುಂಬಿಕೊಂಡ ಪೊಲೀಸರು ಸುರತ್ಕಲ್‌ ಪೊಲೀಸ್‌ ಠಾಣೆಯ ಪಕ್ಕದಲ್ಲಿರುವ ಶ್ರೀನಿವಾಸ ಮಲ್ಯ ಸಭಾಭವನದಲ್ಲಿ ಇರಿಸಿದ್ದರು. ಅಲ್ಲಿ ಹೋರಾಟಗಾರರ ಹೆಸರು, ವಿಳಾಸ, ಫೋನ್‌ ನಂಬರ್‌ ಇತ್ಯಾದಿಗಳನ್ನು ಪಡೆದುಕೊಂಡು ಬಳಿಕ ಬಿಡುಗಡೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಬಿಡುಗಡೆಯ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್‌, ಜನಪರ ಪ್ರತಿಭಟನೆಗಳಿಗೆ ಅವಕಾಶ ನಿರಾಕರಿಸಿ, ಪ್ರಜಾಪ್ರಭುತ್ವ ಹಕ್ಕುಗಳನ್ನು ದಮನಿಸುತ್ತಿರುವ ಮಂಗಳೂರು ಪೊಲೀಸ್‌ ಆಯುಕ್ತರನ್ನು ವರ್ಗಾಯಿಸಬೇಕೆಂದು ಆಗ್ರಹಿಸಿ ಡಿವೈಎಫ್‌ಐ ಸುರತ್ಕಲ್‌ ಶಾಖೆ ಮತ್ತು ಟೋಲ್‌ ಗೇಟ್‌ ಹೋರಾಟ ಸಮಿತಿಯ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ನಡೆಸಲು ಸುರತ್ಕಲ್‌ ಪೊಲೀಸ್‌ ಠಾಣೆಯಲ್ಲಿ ಅನುಮತಿ ಕೇಳಿದ್ದರೂ ನೀಡದೇ ನಿರಾಕರಿಸಿದ್ದರು. ಸುರತ್ಕಲ್‌ ಪೇಟೆಯಲ್ಲಿ ರಸ್ತೆ ತಡೆಮಾಡದೇ, ಜನ ಸಾಮಾನ್ಯರಿಗೆ ಯಾವುದೇ ರೀತಿಯಲ್ಲೂ ತೊಂದರೆ ಯಾಗದಂತೆ ಪ್ರಜಾಪ್ರಭುತ್ವ ಜನರಿಗೆ ನೀಡಿರುವ ಹಕ್ಕುಗಳ ಪಾಲನೆಮಾಡಿಕೊಂಡು ಪ್ರತಿಭಟನೆ ಮಾಡುತ್ತಿದ್ದ ಸಂದರ್ಭ ಅರ್ಧದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸುವ ಮೂಲಕ ಪ್ರತಿಭಟನೆಯನ್ನು ಮತ್ತೆ ಹತ್ತಿಕ್ಕಿ ಪೊಲೀಸ್‌ ಆಯುಕ್ತರು ಪೊಲೀಸ್‌ ರಾಜ್‌ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ದೂರಿದರು.

ನಮ್ಮ ಪ್ರತಿಭಟನೆಗಳನ್ನು ಹತ್ತಿಕ್ಕಿದರೂ, ನಮ್ಮ ಮೇಲೆ ಸಾವಿರಾರು ಕೇಸುಗಳನ್ನು ಹಾಕಿದರೂ ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಅವರನ್ನು ಮಂಗಳೂರಿನಿಂದ ಎತ್ತಂಗಡಿ ಮಾಡುವ ವರೆಗೂ ಹೋರಾಟ, ಪ್ರತಿಭಟನೆಗಳು ಮುಂದುವರಿಯುತ್ತಲೇ ಇರುತ್ತವೆ. ಈ ಹೋರಾಟದ ಮೂಲಕ ರಾಜ್ಯ ಸರಕಾರಾಕ್ಕೆ ಮತ್ತೆ ಎಚ್ಚರಿಕೆಯನ್ನು ನೀಡುತ್ತಿದ್ದು, ನಮಗೆ ಜನರಲ್‌ ಡಯರ್‌ ಕಮಿಷನರ್‌ ಬೇಡವೇ ಬೇಡ. ನಮ್ಮ ಬೇಡಿಕೆಗಳು ಈಡೇರದಿದ್ದಪಕ್ಷದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವಾಗ ಕಪ್ಪುಪಟ್ಟಿ ಪ್ರದರ್ಶಿಸಿ ಅವರ ವಿರುದ್ಧವೂ ಪ್ರತಿಭಟನೆಗಳನ್ನು ನಡೆಸಲಿದ್ದೇವೆ ಎಂದು ಬಿ.ಕೆ. ಇಮ್ತಿಯಾಝ್‌ ಸರಕಾರಕ್ಕೆ ಎಚ್ಚರಿಕೆ ನೀಡಿದರು.‌

ಪ್ರತಿಭಟನೆಯಲ್ಲಿ ದಲಿತ ಸಂಘರ್ಷ ಸಮಿತಿ (ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಸಂಚಾಲಕರಾದ ರಘು ಎಕ್ಕಾರ್, ಕೃಷ್ಣ ತಣ್ಣೀರು ಬಾವಿ, ಜೋಕಟ್ಟೆ ಪಂಚಾಯತ್ ಸದಸ್ಯರಾದ ಅಬೂಬಕ್ಕರ್ ಬಾವ, ಡಿವೈಎಫ್ಐ ಜಿಲ್ಲಾ ಮುಖಂಡರಾದ ರಿಝ್ವಾನ್ ಖಂಡಿಗ, ಅಶ್ರಫ್ ಹರೇಕಳ, ಬಿಕೆ ಮಕ್ಸೂದ್, ಶ್ರೀನಾಥ್ ಕುಲಾಲ್, ಸಲೀಂ ಶಾಡೋ, ಸೈಫರ್ ಆಲಿ ಚೊಕ್ಕಬೆಟ್ಟು, ನವಾಝ್ ಕುಳಾಯಿ, ಜೋಯ್ ಡಿಸೋಜ,‌ ಸಾದಿಕ್ ಕಿಲ್ಪಾಡಿ, ಐ.ಮುಹಮ್ಮದ್, ಖಾಲಿದ್ ಕೃಷ್ಣಾಪುರ, ಕಾದರ್ ಅದ್ಯಪಾಡಿ, ಅನಿಲ್ ಪಂಜಿಮೊಗರು, ಮುಸ್ತಫಾ ಅಂಗರಗುಂಡಿ, ಮಹಿಳಾ ಮುಖಂಡರಾದ ಪ್ರಮೀಳಾ ಕಾವೂರು, ಅಸುಂತ ಡಿಸೋಜ, ಆಶಾ ಬೈಕಂಪಾಡಿ, ಯೋಗೀತಾ, ಸರಿತಾ ತಣ್ಣೀರುಬಾವಿ ಮೊದಲಾದವರು ಉಪಸ್ಥಿತರಿದ್ದರು.

ಜನರ ಧ್ವನಿಗೆ ಧ್ವನಿಗೂಡಿಸಬೇಕಿದ್ದ ವಿಧಾನ ಸಭೆಯ ಅಧ್ಯಕ್ಷ ಯು.ಟಿ. ಖಾದರ್‌ ಅವರು ಜನವಿರೋಧಿ ಕಮಿಷನರ್‌ ಪರವಾಗಿ ನಿಂತಿರುವುದು ಜಿಲ್ಲೆಯ ಜನರ ದುರಾದೃಷ್ಟ. ಜನ ವಿರೋಧಿ ಕಮಿಷನರ್‌ ಪರವಾಗಿ ನೀಡಿರುವ ಅವರ ಹೇಳಿಕೆ ಅತ್ಯಂತ ಖೇದಕರ ಮತ್ತು ಅಜ್ಞಾನದಿಂದ ಕೂಡಿರುವಂತದ್ದು. ಹಾಗಾಗಿ ಅವರ ಹೇಳಿಕೆಯನ್ನೂ ವಿರೋಧಿಸುತ್ತೇವೆ. ಸಾಂವಿಧಾನಿಕ ಜವಾಬ್ದಾರಿಗಳನ್ನು ಮರೆತು ಸಭಾಧ್ಯಕ್ಷರು ಮಾತನಾಡಿದ್ದಾರೆ. ಅವರ ಮಾತುಗಳು ಅತ್ಯಂತ ಖಂಡನೀಯ ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್‌ ಅವರು ಯು.ಟಿ. ಖಾದರ್‌ ಅವರ ನಡೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.

"ಬಿಜೆಪಿ ಆಡಳಿತದ ಕಾಲದಲ್ಲಿ ನೇಮಕವಾಗಿದ್ದ ಸಂಘಿ ಮನಸ್ಥಿತಿಯ ಕಮಿಷನರ್ ಬದಲಾವಣೆ ಮಾಡದೆ ಬಿಜೆಪಿಯ ರಾಜಕೀಯಕ್ಕೆ ಪೂರಕವಾಗಿ ಕೆಲಸ ಮಾಡುತ್ತಿರುವ ಕಮಿಷನರ್ ಅವರನ್ನು ಉಳಿಸಿಕೊಂಡಿರುವುದು ಜಿಲ್ಲಾಡಳಿತ ಬಿಜೆಪಿಯ ಕಪಿಮುಷ್ಟಿಯಲ್ಲಿದೆ ಎನ್ನುವುದನ್ನು ಸಾಬೀತು ಪಡಿಸುತ್ತಿದೆ".

-‌ ಬಿ.ಕೆ. ಇಮ್ತಿಯಾಝ್ ‌, ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ‌



share
ವಾರ್ತಾಭಾರತಿ
ವಾರ್ತಾಭಾರತಿ
Next Story
X