Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುರಭವನ, ಅಂಬೇಡ್ಕರ್ ಭವನ ಬುಕ್ಕಿಂಗ್...

ಪುರಭವನ, ಅಂಬೇಡ್ಕರ್ ಭವನ ಬುಕ್ಕಿಂಗ್ ವೆಬ್‌ಸೈಟ್‌ನಲ್ಲಿ ಲಭ್ಯ: ಮೇಯರ್ ಮನೋಜ್ ಕುಮಾರ್‌ರಿಂದ ವೆಬ್‌ಸೈಟ್ ಅನಾವರಣ

ವಾರ್ತಾಭಾರತಿವಾರ್ತಾಭಾರತಿ13 Feb 2025 6:03 PM IST
share
ಪುರಭವನ, ಅಂಬೇಡ್ಕರ್ ಭವನ ಬುಕ್ಕಿಂಗ್ ವೆಬ್‌ಸೈಟ್‌ನಲ್ಲಿ ಲಭ್ಯ: ಮೇಯರ್ ಮನೋಜ್ ಕುಮಾರ್‌ರಿಂದ ವೆಬ್‌ಸೈಟ್ ಅನಾವರಣ

ಮಂಗಳೂರು: ಮಹಾನಗರ ಪಾಲಿಕೆ ವ್ಯಾಪ್ತಿಯ ಪುರಭವನ, ಅಂಬೇಡ್ಕರ್ ಭವನ ಮಾತ್ರವಲ್ಲದೆ, ತೆರೆದ ಮೈದಾನಗಳ ಬುಕ್ಕಿಂಗ್ ಅನ್ನು ಇನ್ನು ವೆಬ್‌ಸೈಟ್ ಮೂಲಕವೇ ಸಾರ್ವಜನಿಕರು ಮಾಡಬಹುದಾಗಿದೆ.

ಬುಕ್ಕಿಂಗ್ ಜತೆಗೆ ಸಂಬಂಧಪಟ್ಟ ಶುಲ್ಕವನ್ನು ಪಾವತಿಸಲು ಆನ್‌ಲೈನ್ ಮತ್ತು ಆಫ್ ಲೈನ್ ಚಲನ್ ವ್ಯವಸ್ಥೆಯನ್ನು ಕಲ್ಪಿಸಿಕೊಡುವ ಹಾಗೂ ವಾಣಿಜ್ಯ ಮಳಿಗೆಗಳ ಬಾಡಿಗೆ ಪಾವತಿಗೆ ರೂಪಿಸಿದ ತಂತ್ರಾಂಶವನ್ನು ಒಳಗೊಂಡ ವೆಬ್‌ ಸೈಟ್‌ನ್ನು ಗುರುವಾರ ಮೇಯರ್ ಮನೋಜ್ ಕುಮಾರ್ ಅನಾವರಣಗೊಳಿಸಿದರು.

ಪಾಲಿಕೆ ಸಭಾಂಗಣದಲ್ಲಿ www.mccportal.in ಎಂಬ ವೆಬ್‌ಸೈಟ್ ಅನಾವರಣಗೊಳಿಸಿ ಮಾತನಾಡಿದ ಮೇಯರ್ ಮನೋಜ್ ಕುಮಾರ್, ಈ ತಂತ್ರಾಂಶದಲ್ಲಿ ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ಪುರಭವನ, ಅಂಬೇಡ್ಕರ್ ಭವನ ಹಾಗೂ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಏಳು ತೆರೆದ ಮೈದಾನ ಕಾಯ್ದಿರಿಸುವಿಕೆಗೆ ಅಗತ್ಯವಿರುವ ದಾಖಲೆಗಳನ್ನು ನೀಡಿ ಕಂದಾಯ ವಿಭಾಗದ ವಿಷಯ ನಿರ್ವಾಹಕರ (case workers) ಮೂಲಕ ಕಾಯ್ದಿರಿಸಬಹುದು. ಇಲ್ಲಿ ಶರ್ತಬದ್ಧ ಅವಕಾಶ ಕಲ್ಪಿಸಲಾಗುವುದು. ಈ ಆನ್‌ಲೈನ್ ತಂತ್ರಾಂಶದಲ್ಲಿ ಸಾರ್ವಜನಿಕರು ತಮ್ಮ ಬಾಡಿಗೆ

ಮೊತ್ತವನ್ನು ಆನ್‌ಲೈನ್/ನೆಟ್ ಬ್ಯಾಂಕಿಂಗ್ ಖಿಐ ಮೂಲಕ ಮತ್ತು ಆಫ್‌ಲೈನ್ (ಚಲನ್) ಮೂಲಕ ಪಾವತಿಸಲು ಸರಳ ವಿಧಾನಗಳನ್ನು ಅಳವಡಿಸಲಾಗಿದೆ ಎಂದರು.

ಈ ಆನ್‌ಲೈನ್ ತಂತ್ರಾಂಶದಲ್ಲಿ ಸಾರ್ವಜನಿಕರಿಗೆ ಬಾಡಿಗೆ ಲೆಕ್ಕಾಚಾರದಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ಅಗತ್ಯವಿರುವ ಗಣಕೀಕೃತ ಲೆಕ್ಕಾಚಾರ ಅಳವಡಿಸಲಾಗಿದೆ. ಆದ್ದರಿಂದ ಯಾವುದೇ ರೀತಿಯ ಲೋಪ ದೋಷಗಳು ಬಾರದಂತೆ ಬಾಡಿಗೆ ಪಾವತಿಗೆ ಸಾರ್ವಜನಿಕರಿಗೆ ಅನುಕೂಲ ಮಾಡಲಾಗಿದೆ. ಇದರಲ್ಲಿ ಬಾಡಿಗೆ ಮೊತ್ತ(ಹಾಲಿ ಮೊತ್ತ ಹಾಗೂ ಹಿಂದಿನ ಬಾಕಿ ಮೊತ್ತ), ಕಟ್ಟಡದ ವಿದ್ಯುತ್ ಶುಲ್ಕ, ದಂಡ ಶುಲ್ಕ, ಜಿಎಸ್‌ಟಿ ಮೊತ್ತ ಪಾವತಿಸಬಹುದಾಗಿದೆ ಎಂದರು.

ಸಾರ್ವಜನಿಕರು ತಾವು ಇರುವ ಸ್ಥಳದಿಂದಲೇ ತಮ್ಮ ತೆರಿಗೆಯ ಮೊತ್ತವನ್ನು ಪಾವತಿಸಲು ಅವಕಾಶವಿರುತ್ತದೆ. ಇದರಿಂದ ಸಾರ್ವಜನಿಕರ ಮತ್ತು ಕಚೇರಿಯ ಸಮಯ ಉಳಿತಾಯವಾಗಲಿದೆ, ಸಾರ್ವಜನಿಕರಿಗೂ ಅನುಕೂಲವಾಗಲಿದೆ. ಸದ್ಯ ಇದು ಪ್ರಾಯೋಗಿಕ ಹಂತದಲ್ಲಿದೆ ಎಂದರು.

ಈ ತಂತ್ರಾಂಶದಲ್ಲಿ ಸಾರ್ವಜನಿಕರು ಪಾವತಿಸಿದ ಪಾವತಿ ವಿವರಗಳು ಸಿಗಲಿದೆ. ಮಂಗಳೂರು ಮಹಾನಗರಪಾಲಿಕೆಯ mccportal.in ವೆಬ್‌ಸೈಟ್‌ನ MCC SHOP RENT ಖಾತೆಯಲ್ಲಿ ತಕ್ಷಣ ನವೀಕೃತ ಮಾಹಿತಿ ಲಭ್ಯವಾಗಲಿದೆ. ಬಾಡಿಗೆ ಪಾವತಿಸಿದ ರಶೀದಿಯ ನಕಲು ಪ್ರತಿಯೂ ವೆಬ್‌ಅಪ್ಲಿಕೇಷನ್‌ನಲ್ಲಿಯೇ ಲಭ್ಯವಿರುವುದರಿಂದ ಮಾಹಿತಿ ಪಡೆದುಕೊಳ್ಳಲು ಹಾಗೂ ಪರಿಶೀಲನೆಗೆ ಸುಲಭವಾಗಲಿದೆ ಎಂದರು.

ಉಪ ಮೇಯರ್ ಭಾನುಮತಿ, ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಸುಮಿತ್ರಾ ಕರಿಯ, ಮನೋಹರ ಕದ್ರಿ, ಆಡಳಿತ ವಿಭಾಗದ ಆಯುಕ್ತೆ ಅಕ್ಷತಾ ಉಪಸ್ಥಿತರಿದ್ದರು.

ಜಾಹಿರಾತು ಪರವಾನಿಗೆಗೂ ಆನ್‌ಲೈನ್

ಮುಂಬರುವ ದಿನಗಳಲ್ಲಿ ಪಾಲಿಕೆ ವ್ಯಾಪ್ತಿಯ ಎಲ್ಲ ಜಾಹಿರಾತು ಫಲಕಗಳ ಅನುಮತಿ ಪಡೆಯಲು ಹಾಗೂ ಶುಲ್ಕ ಪಾವತಿಸಲು ಅನುಕೂಲವಾಗುವಂತೆ ಇದೇ ತಂತ್ರಾಂಶದಲ್ಲಿ ವ್ಯವಸ್ಥೆಯನ್ನು ಮಾಡಲಾಗುವುದು. ಪ್ರಸ್ತುತ ಪಾಲಿಕೆ ವ್ಯಾಪ್ತಿಯಲ್ಲಿ 1070 ಸ್ಟಾಲ್‌ಗಳು, 39 ಮಾರ್ಕೆಟ್‌ಗಳು, 7 ತೆರೆದ ಮೈದಾನಗಳು ಇದೆ. ಪುರಭವನ, ಅಂಬೇಡ್ಕರ್ ಭವನ ತೆರೆದ ಮೈದಾನಗಳಿಗೆ 2 ತಿಂಗಳು ಮುಂಗಡ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X