Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದಸರಾ ಕ್ರೀಡಾಕೂಟದಲ್ಲಿ ಕಂಬಳಕ್ಕೆ ಸ್ಥಾನ:...

ದಸರಾ ಕ್ರೀಡಾಕೂಟದಲ್ಲಿ ಕಂಬಳಕ್ಕೆ ಸ್ಥಾನ: ಡಿ.ಕೆ. ಶಿವಕುಮಾರ್

"ಗುರುಪುರ ಕಂಬಳೋತ್ಸವ" ಸಮಾರೋಪ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ12 April 2025 10:22 PM IST
share
ದಸರಾ ಕ್ರೀಡಾಕೂಟದಲ್ಲಿ ಕಂಬಳಕ್ಕೆ ಸ್ಥಾನ: ಡಿ.ಕೆ. ಶಿವಕುಮಾರ್

ಗುರುಪುರ: ದ.ಕ. ಜಿಲ್ಲೆಯ ಸಂಸ್ಕೃತಿಯಾಗಿರುವ ಕಂಬಳವನ್ನು ಉಳಿಸಿ ಬಳೆಸುವ ನಿಟ್ಟಿನಲ್ಲಿ ಸರಕಾರ ಪ್ರೋತ್ಸಾಹ ನೀಡಲು ನಿರ್ಧರಿಸಿದ್ದು, ದಸರಾ ಕ್ರೀಡಾಕೂಟದಲ್ಲಿ ಕಂಬಳ ಕ್ರೀಡೆಯನ್ನು ಆಯೋಜಿಸುವಂತೆ ಸೂಚನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೊಷಿಸಿದ್ದಾರೆ.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರ ನೇತೃತ್ವದಲ್ಲಿ ಗುರುಪುರ ಮಾಣಿಬೆಟ್ಟು ಗುತ್ತಿನ ಗದ್ದೆಯಲ್ಲಿ ಶನಿವಾರ ಆಯೋಜಿಸಲಾಗಿದ್ದ ಎರಡನೇ ವರ್ಷದ ಹೊನಲು ಬೆಳಕಿನ ಮೂಳೂರು - ಅಡ್ಡೂರು ಜೋಡುಕರೆ ಕಂಬಳ "ಗುರುಪುರ ಕಂಬಳೋತ್ಸವ"ದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದ.ಕ. ವಿದ್ಯಾವಂತರು, ಬುದ್ದಿವಂವರ ಜಿಲ್ಲೆಯಾಗಿದ್ದು ಅವರ ಬುದ್ದಿವಂತಿಗೆ, ಪ್ರತಿಭೆಗಳು ಹೊರ ದೇಶ ಗಳಿಗೆ ಬಳಕೆಯಾಗುತ್ತಿದೆ. ಅದನ್ನು ನಮ್ಮ ರಾಜ್ಯದಲ್ಲೇ ಬಳಸಿಕೊಳ್ಳುವಂತೆ ಯೋಜನೆಗಳನ್ನು ರೂಪಿಸಲಾಗುವುದು. ಕರಾವಳಿಯ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಜಾತಿ ಧರ್ಮಗಳನ್ನು ಮರೆರು ಕಂಬಳ‌ ನಡೆಸಿ ಬೆಳೆಸಲು ಸರಕಾರ‌ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ಡಿಕೆಶಿ ಭರವಸೆ ನೀಡಿದರು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿದ ಮೂಳೂರು - ಅಡ್ಡೂರು ಜೋಡುಕರೆ ಕಂಬಳ "ಗುರುಪುರ ಕಂಬಳೋತ್ಸವ ಸಮಿತಿಯ ಅಧ್ಯಕ್ಷ, ಕೆಪಿಸಿಸಿ ಪ್ರಧಾನ ಕಾರ್ಯ ದರ್ಶಿ ಇನಾಯತ್ ಅಲಿ ಅವರು, ಕಂಬಳ ದಕ್ಷಿಣ ಕನ್ನಡ ಜಿಲ್ಲೆಯ ಸಂಸ್ಕೃತಿ, ಜಾನಪದ ಕ್ರೀಡೆಯಾಗಿರದೆ ನಮ್ಮ ಸಂಸ್ಕೃತಿಯಾಗಿದೆ. ತಲಪಾಡಿಯಿಂದ ಮುಲ್ಕಿ ವರೆಗಿನ ಬೀಚ್ ರಸ್ತೆ ಗಳನ್ನು ಅಭಿವೃದ್ಧಿ ಪಡಿಸಿ ಬೀಚ್ ಪ್ರಾವಾಸೋದ್ಯಮಕ್ಕೆ ಒತ್ತು ನೀಡಬೇಕೆಂದು ಅವರು ಮನವಿ ಸಲ್ಲಿಸಿದರು.

ಇದೇ ಸಂದರ್ಭ ಕಂಬಳ ಕ್ಷೇತ್ರದ ಮೂವರು ಸಾಧಕರನ್ನು ಉಪಮುಖ್ಯಮಂತ್ರಿಗಳು ಸನ್ಮಾನಿಸಿ ಗೌರವಿಸಿದರು. ಇದೇ ವೇಳೆ ಕಂಬಳ ಸಮಿತಿಯ ವತಿಯಿಂದ ನೇಗಿಲು ಹಸ್ತಾಂತರಿಸಿ ಉಪಮುಖ್ಯಮಂತ್ರಿ ಅವರನ್ನು ಸನ್ಮಾನಿಸಲಾಯಿತು. ಕಂಬಳ‌ ಕ್ಷೇತ್ರದಲ್ಲಿ ವಿಶೇಷ ಸಾಧನೆ ತೋರಿದ ದೂಜ ಕೊಣವನ್ನು ಡಿಕೆಶಿ ಸನ್ಮಾನಿಸಿ ಅದರ ಪೋಸ್ಟಲ್ ಸ್ಟಾಂಪನ್ನಹ ಬಿಡುಗಡೆ ಗೊಳಿಸಿದರು.

ಕಂಬಳ ಕ್ಷೇತ್ರದ ಗುಣಪಾಲ ಕಡಂಬ ಪ್ರಾಸ್ತಾವಿಕ ಮಾತನಾಡಿದರು. ಸಮಾರೋಪ ಸಮಾರಂಭದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅದ್ಯಕ್ಷ ರಾಜೇಂದ್ರ‌ ಕುಮಾರ್, ಮಾಜಿ ಸಚಿವರಾಗಿರುವ ರಮಾನಾಥ ರೈ, ಅಭಯಚಂದ್ರಜೈನ್, ವಿನಯ ಕುಮಾರ್ ಸೊರಕೆ, ವಿ.ಪ. ಸದಸ್ಯ ಐವನ್ ಡಿಸೋಜಾ, ಪದ್ಮರಾಜ್ ಪೂಜಾರಿ, ಶಕುಂತಲಾ ಶೆಟ್ಟಿ ಪುತ್ತೂರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ರಕ್ಷಿತ್ ಶಿವರಾಮ, ಮಮತಾ ಗಟ್ಟಿ, ಕಣಚೂರು ಮೋನು, ದೇವಿ ಪ್ರಸಾದ್ ಶೆಟ್ಟಿ ಮೊದಲಾದವರು ಇದ್ದರು.

"ಕಂಬಳ ಜಾತಿ ಧರ್ಮಗಳ ವಿಚಾರ ಅಲ್ಲ. ಹಿರಿಯರ ಸಂಪ್ರದಾಯ. ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿರುವ ಜಿಲ್ಲೆಯ ಸಾಂಸ್ಕೃತಿಕ ಕ್ರೀಡೆ ಕಂಬಳ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತುಸುವಂತೆ ಮಾಡಬೇಕಿದೆ. ಪ್ರಾಣಿಗಳ ಮನಸು ಅರಿತು ಅವುಗಳ ಮೇಲೆ ಹಿಡಿತ ಸಾಧಿಸಿ ಸೋಲುವುದನ್ನು ಕಲಿಯ ದಿದ್ದರೆ ಗೆಲುವು ಅಸಾಧ್ಯ. ಕ್ರೀಡೆಯಲ್ಲಿ ಹೃದಯವಂತಿಕೆ ಮುಖ್ಯ.ಕಂಬಳದ ಮೂಲಕ ಜಿಲ್ಲೆಯ ಸಂಸ್ಕೃತಿ ಉಳಿಸುವ ಕೆಲಸ ಇನಾಯತ್ ಅಲಿ ನೇತೃತ್ವದಲ್ಲಿ ನಡೆಯುತ್ತಿದೆ".

- ಡಿ.ಕೆ.ಶಿವಕುಮಾರ್, ಉಪ ಮುಖ್ಯಮಂತ್ರಗಳು

ಜಿಲ್ಲೆಯಲ್ಲಿ ಧಾರ್ಮಿಕ ಕ್ಷೇತ್ರ, ಪ್ರವಾಸೋದ್ಯಮ ಬೆಳೆಸಲು ಸೂಚನೆ

ದೇಶದಲ್ಲೇ ಅತೀ ಹೆಚ್ಚಿನ ಕರಾವಳಿ ಭೂಭಾಗ ದ.ಕ. ಜಿಲ್ಲೆಯಲ್ಲಿದ್ದು ಅದನ್ನು ಬಳಸಿಕೊಂಡು ಧಾರ್ಮಿಕ ಕ್ಷೇತ್ರ ಮತ್ತು ಪ್ರವಾಸೋದ್ಯಮವನ್ನು ಬೆಳಸುವ ಕುರಿತು ಈಗಾಗಲೇ ಸರಕಾರ ಮಟ್ಟದಲ್ಲಿ ಚರ್ಚಿಸಲಾ ಗಿದೆ. ಇದರಿಂದ ಪ್ರವಾಸೋದ್ಯಮ ಬೆಳೆಯುವ ಜೊತೆಗೆ ಕರಾವಳಿಯ ಸಂಸ್ಕೃತಿಯನ್ನು ಬೆಳೆಸುವ ಕುರಿತು ಸರಕಾರ ಒತ್ತು ನೀಡಲು ಸರಕಾರ‌ ಮುಂದಾಗಿದ್ದು, ಅದಕ್ಕಾಗಿ ಸರಕಾರ ಎಂದಿಗೂ ಜಿಲ್ಲೆಯ ಜನರೊಂದಿಗೆ ಇರಲಿದೆ ಎಂದು ಉಪ‌ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ನುಡಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X