Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಪೊಲೀಸರು...

ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಪೊಲೀಸರು ನೇರ ಭಾಗಿ: ಶಾಸಕ ಉಮಾನಾಥ ಕೋಟ್ಯಾನ್ ಆರೋಪ

‘ಪೊಲೀಸರ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ’

ವಾರ್ತಾಭಾರತಿವಾರ್ತಾಭಾರತಿ5 May 2025 11:03 PM IST
share
ಸುಹಾಸ್ ಶೆಟ್ಟಿಯ ಕೊಲೆಯಲ್ಲಿ ಪೊಲೀಸರು ನೇರ ಭಾಗಿ: ಶಾಸಕ ಉಮಾನಾಥ ಕೋಟ್ಯಾನ್ ಆರೋಪ

ಮಂಗಳೂರು: ಇತ್ತೀಚೆಗೆ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಗ್ಗೆ ಪೊಲೀಸರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಮುಲ್ಕಿ- ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಆರೋಪಿಸಿದ್ದಾರೆ.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸುಹಾಸ್ ಶೆಟ್ಟಿ ಕೊಲೆಗೆ, ಕೊಲೆಗಡುಕರಿಗೆ ಪೊಲೀಸರು ಸಂಪೂರ್ಣ ಸಹಕಾರ ನೀಡಿದ್ದಾರೆ ಎಂದು ಅಪಾದಿಸಿದರು.

ಕೊಲೆ ವ್ಯವಸ್ಥಿತ ರೀತಿಯಲ್ಲಿ ನಡೆದಿದೆ. ಒಂದು ರೀತಿಯಲ್ಲಿ ಕೊಲೆಗಡುಕರು ಮತ್ತು ಪೊಲೀಸರ ನಡುವೆ ಒಡಂಬಡಿಕೆಯಾಗಿದೆ. ವಾಹನದಲ್ಲಿ ಆಯುಧ ಇಡಬಾರದು ಎಂದು ಸುಹಾಸ್ ಶೆಟ್ಟಿ ಆತ್ಮರಕ್ಷಣೆಗೆ ಕಾರಿನಲ್ಲಿಟ್ಟಿದ್ದ ಆಯುಧವನ್ನು ಎರಡು ದಿವಸಗಳ ಮೊದಲು ಪೊಲೀಸರು ತೆರವುಗೊಳಿಸಿದ್ದರು. ಕೊಲೆಯಾದ ದಿನ ಬೆಳಗ್ಗೆ ಸುಹಾಸ್ ಶೆಟ್ಟಿ ತನ್ನ ಕಾರನ್ನು ಸರ್ವಿಸ್‌ಗೆ ಇಡುವಾಗ ಇಬ್ಬರು ಆರೋಪಿಗಳು ಬಂದು ಆತನ ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಮಾಹಿತಿ ನೀಡಿದರು.

ಸುಹಾಸ್ ಶೆಟ್ಟಿಯನ್ನು ಕೊಲೆಗೈಯಲು 4 ಮಂದಿಗೆ 20-25 ಮಂದಿ ಕೋಟೆ ಕಟ್ಟಿ ರಕ್ಷಣೆ ನೀಡಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಸುಹಾಸ್ ಶೆಟ್ಟಿಯನ್ನು ಆಸ್ಪತ್ರೆಗೆ ಸಾಗಿಸಲು ಪೊಲೀಸರು ಗಮನ ಹರಿಸಲಿಲ್ಲ ಎಂದು ಹೇಳಿದರು.

ಇಂತಹ ಆಯುಕ್ತರನ್ನು ನಾನು ನನ್ನ ಸರ್ವಿಸ್‌ನಲ್ಲಿ ನೋಡಿಲ್ಲ: ಪೊಲೀಸ್ ಇಲಾಖೆ ಕೊಲೆಯಲ್ಲಿ ಕೈಜೋಡಿ ಸಿದೆ. ದ.ಕ. ಜಿಲ್ಲೆಗೆ ಒಬ್ಬರು ಪೊಲೀಸ್ ಆಯುಕ್ತರು ಬಂದಿದ್ದಾರೆ. ಇಂತಹ ಆಯುಕ್ತರನ್ನು ನಾನು ನನ್ನ ಸರ್ವಿಸ್‌ನಲ್ಲಿ ನೋಡಿಲ್ಲ. ಆಯುಕ್ತರಿಂದ ಹಿಡಿದು ಪಿಸಿ ತನಕ ವಹಿವಾಟು ನಡೆಯುತ್ತಿದೆ. ಇಸ್ಪೆಟ್ , ಜುಗಾರಿ, ಅಕ್ರಮ ಮರಳುಗಾರಿಕೆ .. ಹೀಗೆ ಪ್ರತಿಯೊಂದು ವಿಚಾರದಲ್ಲೂ ಡೀಲಿಂಗ್ ನಡೆಯುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾಧಿಕಾರಿ ಮಧ್ಯಪ್ರವೇಶದಿಂದಾಗಿ ಮರಳುಗಾರಿಕೆ ನಿಂತಿದೆ. ಸುಹಾಸ್ ಶೆಟ್ಟಿ ಕೊಲೆಗೆ ವಿದೇಶದಿಂದ ಕೋಟಿಗಟ್ಟಲೆ ಹಣ ಹರಿದು ಬಂದಿದೆ. ಇದರಲ್ಲಿ ಪೊಲೀಸರಿಗೆ ಎಷ್ಟು ಸಂದಾಯವಾಗಿದೆ ಎಂದು ಗೊತ್ತಿಲ್ಲ. ಪೊಲೀಸರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ. ಬೇಕಿದ್ದರೆ ಸ್ಥಳೀಯ ಪೊಲೀಸರ ಮೊಬೈಲ್‌ನ್ನು ಚೆಕ್ ಮಾಡಿದ್ದರೆ ಗೊತ್ತಾಗುತ್ತಾರೆ ಎಂದು ಹೇಳಿದರು.

ದುಡ್ಡು ಕೊಡದಿದ್ದರೆ ರೌಡಿಶೀಟರ್: ಹಣಕೊಡದಿದ್ದರೆ ಪೊಲೀಸರು ರೌಡಿ ಶೀಟರ್ ಪಟ್ಟ ಕಟ್ಟುತ್ತಾರೆ. ಸುಹಾಸ್ ಶೆಟ್ಟಿ ಮೇಲೂ ಅದೇ ರೀತಿ ಆಗಿದೆ. ದ.ಕ. ಜಿಲ್ಲೆಯಲ್ಲಿ ಹಣ ಇದ್ದರೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಹರೀಶ್ ಪೂಂಜಾ ವಿರುದ್ಧ ಹಕ್ಕುಚ್ಯುತಿ ಮಾಡಿ ಮತ್ತೆ ನೋಡುವಾ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಸಾಧ್ಯವಿದ್ದರೆ ಹಕ್ಯುಚ್ಯುತಿ ಮಾಡಿ ಮತ್ತೆ ನೋಡುವಾ. ... ಸ್ಪೀಕರ್ ಖಾದರ್ ಅವರು ಕೊಲೆ ಆರೋಪಿ ಪರ ಮಾತನಾಡಿದ್ದಾರೆ. ಸ್ಪೀಕರ್‌ಗೆ ರಾಜಕೀಯ ಮಾಡಲು ಅವಕಾಶ ಇದೆಯೋ ? ರಾಜಕೀಯ ಮಾತನಾಡಲು ಅವಕಾಶ ಇಲ್ಲದಿದ್ದರೆ ಅವರನ್ನು ಏನು ಮಾಡುತ್ತೀರಿ ಎಂದು ಪ್ರಶ್ನಿಸಿದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬಗ್ಗೆ ಪೊಲೀಸರು ನಡೆಸುವ ತನಿಖೆಯಲ್ಲಿ ನನಗೆ ವಿಶ್ವಾಸವಿಲ್ಲ. ಆದ ಕಾರಣ ತನಿಖೆಯನ್ನು ಎನ್‌ಐಎಗೆ ಒಪ್ಪಿಸಬೇಕು ಎಂದು ಸರಕಾರವನ್ನು ಆಗ್ರಹಿಸಿದರು.

ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್, ದಿನೇಶ್ ಪುತ್ರನ್, ರಂಜಿತ್, ಅರುಣ್, ವಿಜಯ್, ವಸಂತ ಪೂಜಾರಿ, ಜಯಂತ ಕೋಟ್ಯಾನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X