Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಂಬ್ಲಮೊಗರು: ರಸ್ತೆ ಕಡಿತ, ಸರಕಾರಿ ಭೂಮಿ...

ಅಂಬ್ಲಮೊಗರು: ರಸ್ತೆ ಕಡಿತ, ಸರಕಾರಿ ಭೂಮಿ ಅತಿಕ್ರಮಣದ ವಿರುದ್ಧ ಧರಣಿ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ13 May 2025 11:23 PM IST
share
ಅಂಬ್ಲಮೊಗರು: ರಸ್ತೆ ಕಡಿತ, ಸರಕಾರಿ ಭೂಮಿ ಅತಿಕ್ರಮಣದ ವಿರುದ್ಧ ಧರಣಿ ಸತ್ಯಾಗ್ರಹ

ಅಂಬ್ಲಮೊಗರು: ಗ್ರಾಮದ ನೂರಾರು ಎಕರೆ ಭೂಮಿಗಳನ್ನು ನವಭೂಮಾಲಕರು ವಶಪಡಿಸಿಕೊಳ್ಳುವುದರ ವಿರುದ್ಧ, ಪಂಚಾಯತ್ ನಿಂದ ನಿರ್ಮಿಸಲ್ಪಟ್ಟಿದ್ದ 1 ಕೋಟಿ 40 ಲಕ್ಷ ರೂ.ವೆಚ್ಚದ ಪ್ರಮುಖ ರಸ್ತೆಯನ್ನು ಕಡಿತ ಮಾಡಿರುವುದರ ವಿರುದ್ಧ ಹಾಗೂ ಸರಕಾರಿ ಭೂಮಿಗಳನ್ನು ಅತಿಕ್ರಮಿಸಿಕೊಂಡಿರುವುದನ್ನು ಖಂಡಿಸಿ ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ನಾಟೆಕಲ್ ನಲ್ಲಿರುವ ಉಳ್ಳಾಲ ತಾಲೂಕು ಕಚೇರಿಯೆದುರು ಇಂದು ಧರಣಿ ಸತ್ಯಾಗ್ರಹವನ್ನು ನಡೆಸಲಾಯಿತು.

ಧರಣಿಯನ್ನು ಉದ್ಘಾಟಿಸಿ ಮಾತನಾಡಿದ CPIM ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುಕುಮಾರ್ ತೊಕ್ಕೋಟುರವರು, ಸರಕಾರಿ ಭೂಮಿ,ಆಸ್ತಿಪಾಸ್ತಿಗಳನ್ನು ರಕ್ಷಣೆ ಮಾಡಬೇಕಾದ ತಾಲೂಕು ಆಡಳಿತ ಇತರರಿಗೆ ಲೂಟಿಗೈಯ್ಯಲು ಅವಕಾಶ ನೀಡಿರುವುದು ಮಾಹಾಪರಾಧವಾಗಿದ್ದು, ತಹಸೀಲ್ದಾರ್ ರವರ ಪಾತ್ರವನ್ನೇ ಪ್ರಶ್ನಿಸಬೇಕಾಗಿದೆ.ಈ ಬಗ್ಗೆ ಸ್ಥಳೀಯ ಗ್ರಾಮಸ್ಥರು ಹಲವಾರು ಬಾರಿ ಮನವಿಗಳನ್ನು ಅರ್ಪಿಸಿದರೂ ಯಾವುದೇ ಕ್ರಮಗಳನ್ನು ವಹಿಸದೆ ದಿವ್ಯ ಮೌನವಹಿಸಿರುವ ಪಂಚಾಯತ್ ಆಡಳಿತ ಹಾಗೂ ತಾಲೂಕು ಆಡಳಿತದ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡುವ ಮೂಲಕ ಕಾನೂನು ಸಮರಕ್ಕೆ ಸಜ್ಜಾಗಬೇಕಾಗಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

CPIM ಉಳ್ಳಾಲ ವಲಯ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಕಳೆದ ಕೆಲವು ವರ್ಷ ಗಳಿಂದ ಕ್ರಷಿಭೂಮಿ ಸಂರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹೋರಾಟವನ್ನು ತೀರಾ ನಗಣ್ಯವಾಗಿ ಕಾಣುತ್ತಿರುವ ಅಂಬ್ಲಮೊಗರು ಗ್ರಾಮ ಪಂಚಾಯತ್,ತಾಲೂಕು ಆಡಳಿತ ಹಾಗೂ ಜಿಲ್ಲಾಡಳಿತದ ಬೇಜವಾಬ್ದಾರಿಯನ್ನು ಒಕ್ಕೊರಲಿನಿಂದ ಖಂಡಿಸಬೇಕಾಗಿದೆ.ಸ್ಥಳೀಯ ಗ್ರಾಮಸ್ಥರು ಭೂಮಿ ಕಳೆದುಕೊಂಡಿರುವುದು ಮಾತ್ರವಲ್ಲ ನಡೆದಾಡಲು ರಸ್ತೆಯಿಲ್ಲದೆ, ಕುಡಿಯಲು ನೀರಿಲ್ಲದೆ, ದಾರಿದೀಪ ವಿಲ್ಲದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ತಮ್ಮ ಕೈವಶದಲ್ಲಿರುವ ಭೂಮಿಗಳ ಸುತ್ತ ಅತ್ಯಂತ ಎತ್ತರದ ತಡೆಗೋಡೆಯನ್ನು ನಿರ್ಮಿಸುವ ಮೂಲಕ ತಮ್ಮದೇ ಸಾಮ್ರಾಜ್ಯವನ್ನು ನಿರ್ಮಿಸಿಕೊಂಡಿರುವ ನವಭೂಮಾಲಕರು ಸ್ಥಳೀಯರ ಭಾವನೆಗಳಿಗೆ ಎಳ್ಳಷ್ಟೂ ಗೌರವ ನೀಡದೆ ಸರ್ವಾಧಿಕಾರಿಯಂತೆ ವರ್ತಿಸುತ್ತಿರುವುದು ತೀರಾ ಖಂಡನೀಯ.ಇಂತಹ ದಬ್ಬಾಳಿಕೆ ದೌರ್ಜನ್ಯದ ವಿರುದ್ಧ ಇನ್ನಷ್ಟು ಪ್ರಬಲ ಚಳುವಳಿ ರೂಪಿಸಲು ಜನತೆ ಸರ್ವ ಸನ್ನದ್ದರಾಗಬೇಕಾಗಿದೆ ಎಂದು ಹೇಳಿದರು.

ಧರಣಿಯನ್ನುದ್ದೇಶಿಸಿ CPIM ಜಿಲ್ಲಾ ನಾಯಕರಾದ ರಫೀಕ್ ಹರೇಕಳ, ಜಯಂತ ನಾಯಕ್ ರವರು ಮಾತನಾಡಿ, ಜನಸಾಮಾನ್ಯರ ಸಂಕಷ್ಟಗಳಿಗೆ ಕಿವಿಕೊಡಬೇಕಾದ ತಾಲೂಕು ಆಡಳಿತ ಉಳ್ಳವರ ಹಿತಾಸಕ್ತಿಗಳನ್ನು ಕಾಪಾಡಲು ಹೆಚ್ಚು ಉತ್ಸುಕತೆಯನ್ನು ತೋರಿಸುತ್ತಿದೆ.ಉಳ್ಳಾಲ ತಾಲೂಕಿನಲ್ಲಿ ಜನತೆಯ ಬವಣೆಗಳನ್ನು ಕೇಳುವವರೇ ಇಲ್ಲವಾಗಿದೆ ಎಂದು ಟೀಕಿಸಿದರು.

ಧರಣಿನಿರತ ಸ್ಥಳಕ್ಕೆ ಭೇಟಿ ನೀಡಿದ ತಾಲೂಕು ತಹಶೀಲ್ದಾರ್ ರವರು ಕಡಿತ ಮಾಡಿದ ಪ್ರಮುಖ ರಸ್ತೆಯ ಕಾರ್ಯವನ್ನು ಕೂಡಲೇ ನಿಲ್ಲಿಸುವುದಾಗಿಯೂ ಹಾಗೂ ಮೇ 30 ರಂದು ತಮ್ಮ ಸಮಕ್ಷಮದಲ್ಲಿ ಸಮಾ ಲೋಚನಾ ಸಭೆಯನ್ನು ಕರೆಯುವುದಾಗಿಯೂ ಭರವಸೆಯನ್ನು ನೀಡಿದರು.

ಧರಣಿ ಸತ್ಯಾಗ್ರಹದಲ್ಲಿ CPIM ಜಿಲ್ಲಾ ನಾಯಕರಾದ ಶೇಖರ್ ಕುಂದರ್,ಸುಂದರ ಕುಂಪಲ DYFI ಜಿಲ್ಲಾ ಮುಖಂಡರಾದ ರಿಝ್ವಾನ್ ಹರೇಕಳ, ರಝಾಕ್ ಮೊಂಟೆಪದವು, ರಝಾಕ್ ಮುಡಿಪು, ಸಾಮಾಜಿಕ ಹೋರಾಟಗಾರರಾದ ಅಬೂಬಕ್ಕರ್ ಜೆಲ್ಲಿ, ದಲಿತ ಹಕ್ಕುಗಳ ಸಮಿತಿಯ ನಾಯಕರಾದ ವಿಶ್ವನಾಥ ಮಂಜನಾಡಿ, ಮಾಲತಿಯವರು ಭಾಗವಹಿಸಿದ್ದರು.

ಹೋರಾಟದ ನೇತೃತ್ವವನ್ನು ಅಂಬ್ಲಮೊಗರು ಗ್ರಾಮದ ಕ್ರಷಿಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ಮುಖಂಡರಾದ ಇಬ್ರಾಹಿಂ ಮದಕ, ಸುಂದರ ಅಂಬ್ಲಮೊಗರು, ಶಾಲಿನಿ ಪೂಜಾರಿ, ಕಮರುನ್ನೀಸಾ, ಕೆ ಆರ್ ನಾಥ್, ಯಶೋಧಾ, ಭಾರತಿ,ಪುಷ್ಪಾ, ಜಮೀಲಾ, ರಫೀಕ್,ಉಮೇಶ್,ನಾಗೇಶ್ ಮುಂತಾದವರು ವಹಿಸಿದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X