Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಈಗಿನ ಲೆಕ್ಕದ ಮೊದಲು ತಾವೇನು ಮಾಡಿದ್ದೀರಿ...

ಈಗಿನ ಲೆಕ್ಕದ ಮೊದಲು ತಾವೇನು ಮಾಡಿದ್ದೀರಿ ಎಂದು ಪರಿಶೀಲಿಸಿ: ಮಾಜಿ ಶಾಸಕರ ವಿರುದ್ಧ ಶಾಸಕ ಅಶೋಕ್ ರೈ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ20 May 2025 10:39 PM IST
share
ಈಗಿನ ಲೆಕ್ಕದ ಮೊದಲು ತಾವೇನು ಮಾಡಿದ್ದೀರಿ ಎಂದು ಪರಿಶೀಲಿಸಿ: ಮಾಜಿ ಶಾಸಕರ ವಿರುದ್ಧ ಶಾಸಕ ಅಶೋಕ್ ರೈ ವಾಗ್ದಾಳಿ

ಉಪ್ಪಿನಂಗಡಿ: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಕೆಲಸ ಆಗುತ್ತಿಲ್ಲ ಎಂದು ಮಾಜಿ ಶಾಸಕರು ಆರೋಪ ಮಾಡಿದ್ದಾರೆ. ಈಗಿನ ಶಾಸಕರು ಏನು ಮಾಡಿದ್ದಾರೆ ಎಂದು ಲೆಕ್ಕ ಹಾಕುವ ಮೊದಲು ತಾನು ಶಾಸಕನಾಗಿದ್ದಾಗ ಏನು ಮಾಡಿದ್ದೆ ಎಂಬುದನ್ನು ಅರಿತುಕೊಂಡು ಮಾತನಾಡಲಿ ಎಂದು ಶಾಸಕ ಅಶೋಕ್ ರೈ ಅವರು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

34 ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಮಠದ ಸಭಾಂಗಣದಲ್ಲಿ ಮೇ 20ರಂದು ನಡೆದ ಅಕ್ರಮ ಸಕ್ರಮ ಬೈಠಕ್ ಉದ್ಘಾಟಿಸಿ ಮಾತನಾಡಿದ ಅವರು, ತನ್ನ ನೆರೆಮನೆಯ ವ್ಯಕ್ತಿಯ ಅಕ್ರಮ ಸಕ್ರಮ ಕಡತವನ್ನು ವಿಲೇವಾರಿ ಮಾಡಲು ಯೋಗ್ಯತೆ ಇಲ್ಲದ ಇವರು ಉಳಿದವರ ಬಗ್ಗೆ ಏನು ಮಾತನಾಡು ತ್ತಾರೆ. ಮೆಡಿಕಲ್ ಕಾಲೇಜು ಬಜೆಟ್ ನಲ್ಲಿ ಘೋಷಣೆಯಾದಾಗ ಅಪಸ್ವರ ಎತ್ತಿದ್ದ ಇವರಿಗೆ ತನ್ನ ಶಾಸಕ ತ್ವದ ಅವಧಿಯಲ್ಲಿ ಮೆಡಿಕಲ್ ಕಾಲೇಜಿನ ಕಡತ ಸರಕಾರಕ್ಕೆ ತಲುಪಿಸಲು ಸಾಧ್ಯವಾಗಿಲ್ಲ. ಉಪ್ಪಿನಂಗಡಿಗೆ ಮಾಜಿ ಶಾಸಕರು ಏನಾದರೂ ಕೊಡುಗಡೆ ನೀಡಿದ್ದಾರಾ? ತನ್ನ ಗ್ರಾಮದವರಿಗೆ ನೆರವು ನೀಡಲೂ ಯೋಗ್ಯತೆ ಇಲ್ಲದ ಮಾಜಿ ಶಾಸಕರು ಅವರ ಅವಧಿಯ 5 ವರ್ಷದಲ್ಲಿ ಮಾಡಿದ್ದು ಏನು ಎಂಬುದು ಜನತೆಗೆ ಗೊತ್ತಿದೆ ಎಂದು ಹೇಳಿದರು.

ನಾವು ಅಕ್ರಮ ಸಕ್ರಮಕ್ಕೆ ಲಂಚ ಪಡೆಯುತ್ತಿಲ್ಲ. ಈ ಹಿಂದೆ ದುಡ್ಡು ಕೊಟ್ಟವರ ಕಡತವನ್ನು ಮಾತ್ರ ವಿಲೇ ವಾರಿಯಾಗುತ್ತಿತ್ತು. ಇವರು ಬಡವರ ಕಡತವನ್ನು ಮುಟ್ಟುತ್ತಿರಲಿಲ್ಲ ಯಾಕೆ ಎಂದು ಪ್ರಶ್ನಿಸಿದ ಶಾಸಕರು, ಇವರಿಗೆ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಸಂಗಮ ಕ್ಷೇತ್ರವಾದ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ಚರ ದೇವಸ್ಥಾನವನ್ನು ಕೂಡಲ ಸಂಗಮದಂತೆ ಅಭಿವೃದ್ಧಿ ಪಡಿಸಲು 352 ಕೋ.ರೂ. ಅನುದಾನ ಮಂಜೂರಾಗಿದೆ. ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿಯನ್ನೂ ಮಾಡುತ್ತಿದ್ದೇವೆ. ಮೆಡಿಕಲ್ ಕಾಲೇಜು ಬಂದಿದೆ. ತಾಲೂಕು ಕ್ರೀಡಾಂಗಣ, ಆರ್‍ಟಿಒ ಟ್ರ್ಯಾಕ್, ಕೊಯಿಲ ಪಶು ವೈದ್ಯಕೀಯ ಕಾಲೇಜಿನ ಕಾಮಗಾರಿಗಳು ಭರದಿಂದ ನಡೆಯುತ್ತಿವೆ ಮತ್ತು ಕೆಎಂಎಫ್ ಗೆ ಜಮೀನು ಮಂಜೂರಾಗಿದೆ. ಕಜೆಕ್ಕಾರ್‍ನಲ್ಲಿ ಕ್ರೀಡಾಂಗಣಕ್ಕೆ 5 ಎಕರೆ ಜಾಗ ಕಾಯ್ದಿರಿಸಲಾಗಿದೆ. ಇವೆಲ್ಲಾ ಯೋಜನೆ ಗಳು ಬಂದಾಗ ಅಭಿವೃದ್ಧಿಯೊಂದಿಗೆ ಸಾವಿರಾರು ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಅವರು ಐದು ವರ್ಷದಲ್ಲಿ ತಂದ ಅನುದಾನವನ್ನು ಹಾಗೂ ನಾನು ಎರಡು ವರ್ಷದಲ್ಲಿ ತಂದ ಅನುದಾನವನನು ಮಾಜಿ ಶಾಸಕರು ಮೊದಲು ಪರಿಶೀಲನೆ ಮಾಡಲಿ ಎಂದು ಹೇಳಿದರು.

ಹಿಂದುತ್ವದ ಬಗ್ಗೆ ಭಾಷಣಮಾಡ್ತಾರೆ; ದೇವಸ್ಥಾನದ ಮೇಲೆ ಕೇಸ್ ಹಾಕ್ತಾರೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾಗದಲ್ಲಿ ಅಕ್ರಮವಾಗಿ ವಾಸಮಾಡಿಕೊಂಡಿದ್ದು ಮಾತ್ರ ವಲ್ಲದೆ ದೇವಸ್ಥಾನದ ಜಾಗದಿಂದ ಎಬ್ಬಿಸಿದ್ದಕ್ಕಾಗಿ ಶ್ರೀ ಮಹಾಲಿಂಗೇಶ್ವರ ದೇವರ ಮೇಲೆಯೇ ಕೇಸು ಹಾಕಿದ್ದಾರೆ. ಹೊರಗಡೆ ವೋಟಿಗಾಗಿ ಹಿಂದುತ್ವದ ಭಾಷಣ ಮಾಡುವುದು ಇವರೇ. ದೇವರ ಮೇಲೆ ಕೇಸು ಹಾಕುವುದು ಇವರೇ ಇವರದ್ದು ಎಂಥಾ ಹಿಂದುತ್ವ ಎಂದು ಲೇವಡಿ ಮಾಡಿದ ಶಾಸಕರು, ಹಿಂದುತ್ವದ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಂದ ಒತ್ತುವರಿಯಾಗಿರುವ ದೇವಸ್ಥಾನಗಳ ಜಾಗವನ್ನು ಯಾಕೆ ಮರು ವಶಮಾಡಲು ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿದರಲ್ಲದೆ, ನಾನು ಒಬ್ಬ ಹಿಂದುವಾಗಿ ನನ್ನ ಧರ್ಮವನ್ನು ಅಪಾರ ಪ್ರೀತಿಸುತ್ತೇನೆ. ಹಾಗೆಯೇ ಇತರ ಧರ್ಮವನ್ನು ಗೌರವಿಸುತ್ತೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X