Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ: ಪಂಜಾಬ್ ನಲ್ಲಿ ಅಸಹಜವಾಗಿ...

ಧರ್ಮಸ್ಥಳ: ಪಂಜಾಬ್ ನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಆಕಾಂಕ್ಷಾರ ಅಂತ್ಯ ಸಂಸ್ಕಾರ

ವಾರ್ತಾಭಾರತಿವಾರ್ತಾಭಾರತಿ21 May 2025 3:54 PM IST
share
ಧರ್ಮಸ್ಥಳ: ಪಂಜಾಬ್ ನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಆಕಾಂಕ್ಷಾರ ಅಂತ್ಯ ಸಂಸ್ಕಾರ

ಬೆಳ್ತಂಗಡಿ: ಪಂಜಾಬ್ ನಲ್ಲಿ ಅಸಹಜವಾಗಿ ಸಾವನ್ನಪ್ಪಿದ ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷಾ ಎಸ್. ನಾಯರ್(22) ಅಂತ್ಯ ಸಂಸ್ಕಾರವು ಧರ್ಮಸ್ಥಳದ ಬೊಳಿಯಾರಿನಲ್ಲಿರುವ ಕುಟುಂಬದ ಮನೆಯಲ್ಲಿ ಬುಧವಾರ ನೆರವೇರಿತು.

ಬೆಳಗ್ಗೆ 9 ಗಂಟೆಯ ಸುಮಾರಿಗೆ ಮೃತದೇಹ ಮನೆಗೆ ಆಗಮಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು. ನಿರಂತರವಾಗಿ ಸುರಿಯುತ್ತಿದ್ದ ಮಳೆಯ ನಡುವೆಯೂ ನೂರಾರು ಸಂಖ್ಯೆಯಲ್ಲಿ ಜನರು ಆಗಮಿಸಿ ಅಂತಿಮ ದರ್ಶನ ಪಡೆದರು.

ರಾತ್ರಿಯ ವೇಳೆ ಬೆಂಗಳೂರಿಗೆ ವಿಮಾನದ ಮೂಲಕ ತರಲಾಗಿದ್ದ ಮೃತದೇಹವನ್ನು ಅಲ್ಲಿಂದ ಧರ್ಮಸ್ಥಳಕ್ಕೆ ಆ್ಯಂಬುಲೆನ್ಸ್ ನಲ್ಲಿ ತರಲಾಯಿತು.

ಶಾಸಕ ಹರೀಶ್ ಪೂಂಜಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್, ಸಿಪಿಎಂ ಕಾರ್ಯದರ್ಶಿ ಬಿ.ಎಂ.ಭಟ್, ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸೇರಿದಂತೆ ಹಲವರು ಗಣ್ಯರು ಆಗಮಿಸಿ ಅಂತಿಮದರ್ಶನ ಪಡೆದರು.

►ಸಮಗ್ರ ತನಿಖೆಗೆ ಶಾಸಕ ಹರೀಶ್ ಪೂಂಜಾ ಒತ್ತಾಯ

ಆಕಾಂಕ್ಷಾರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಮೃತರ ತಂದೆ ತಾಯಿ, ಕುಟುಂಬಸ್ಥರು ಹಾಗೂ ಆಕೆಯ ಸ್ನೇಹಿತರೆಲ್ಲ ಹೇಳುವ ಪ್ರಕಾರ ಆಕಾಂಕ್ಷಾ ಆ ರೀತಿ ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆದ್ದರಿಂದ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ನಾನು, ನಮ್ಮ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಅಲ್ಲಿನ ಎಸ್ಪಿ, ಡಿ.ಜಿ.ಯವರಿಗೆ ಕರೆಮಾಡಿ ಮಾತನಾಡಿದ್ದೇವೆ. ಆ ಬಳಿಕವೇ ಅಲ್ಲಿ ಎಫ್.ಐ.ಆರ್. ಆಗಿ ಪ್ರೊಫೆಸರ್ ಮೇಲೆ ಕ್ರಮ ಆಗಿದೆ ಎಂದು ತಿಳಿಸಿದರು.

ಪ್ರಕರಣದ ಸಮಗ್ರ ತನಿಖೆ ನಡೆಸುವಂತೆ ಪಂಜಾಬ್ ಸರಕಾರವನ್ನು ನಮ್ಮ ರಾಜ್ಯ ಸರಕಾರದ ಕಡೆಯಿಂದ ಒತ್ತಾಯಿಸುವ ಕೆಲಸವನ್ನು ರಾಜ್ಯ ಗೃಹ ಸಚಿವರು ಮಾಡಬೇಕು ಎಂದು ಪೂಂಜಾ ಒತ್ತಾಯಿಸಿದರು.

ಧರ್ಮಸ್ಥಳ ಬೊಳಿಯಾರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂದೇವಿ ದಂಪತಿಯ ಎರಡನೇ ಪುತ್ರಿ ದಿಲ್ಲಿಯಲ್ಲಿ ಏರೋಸ್ಪೇಸ್ ಉದ್ಯೋಗಿಯಾಗಿದ್ದರು. ವಿದೇಶಕ್ಕೆ ಉದ್ಯೋಗಕ್ಕೆ ತೆರಳುವ ಇರಾದೆ ಹೊಂದಿದ್ದ ಆಕಾಂಕ್ಷಾ ಸರ್ಟಿಫಿಕೇಟ್ ಗಳನ್ನು ಪಡೆಯುವುದಕ್ಕಾಗಿ ತಾನು ಕಲಿತ ಪಂಜಾಬಿನ ಎಲ್.ಪಿ. ವಿಶ್ವವಿದ್ಯಾನಿಲಯಕ್ಕೆ ತೆರಳಿದ್ದರು. ಅಲ್ಲಿ ಮೇ 17ರಂದು ಕಾಲೇಜು ಕಟ್ಟಡದ 4ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪಂಜಾಬಿಗೆ ತೆರಳಿದ್ದ ಮೃತಳ ಹೆತ್ತವರು ಮಗಳ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದರು. ಅದರಂತೆ ಪಂಜಾಬ್ ಪೊಲೀಸರು ಎಲ್.ಪಿ.ಯು ಪ್ರಾಧ್ಯಾಪಕ ಕೇರಳ ಮೂಲದ ಬಿಜಿಲ್ ಮ್ಯಾಥ್ಯೂ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X