ಬಂಟ್ವಾಳ | ದುಷ್ಕರ್ಮಿಗಳಿಂದ ಕೊಲೆಯಾದ ಅಬ್ದುಲ್ ರಹ್ಮಾನ್ ಮನೆಗೆ ದ.ಕ. ಖಾಝಿ ಭೇಟಿ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಕೊಳತ್ತಮಜಲು ಅವರ ಮನೆಗೆ ಇಂದು ದಕ್ಷಿಣ ಕನ್ನಡ ಜಿಲ್ಲಾ ಖಾಝಿ ಅಲ್ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಭೇಟಿ ನೀಡಿದರು.
ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ ಖಾಝಿ, ಮಗ್ಫಿರತ್ ಗಾಗಿ ಹಾಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಖಲಂದರ್ ಶಾಫಿ ಶೀಘ್ರ ಗುಣಮುಖರಾಗಲಿ ಎಂದು ದುಆ ಮಾಡಿದರು
ಈ ಸಂದರ್ಭದಲ್ಲಿ ಮದ್ರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಹಾಜಿ ಎಂ.ಎಚ್.ಮೊಯ್ದಿನಬ್ಬ, ಪ್ರಧಾನ ಕಾರ್ಯದರ್ಶಿ ರಫೀಕ್ ಕೊಡಾಜೆ, ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಮಾಜಿ ಮೇಯರ್ ಕೆ. ಅಶ್ರಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹನೀಫ್, ದಾರುನ್ನೂರ್ ಎಜುಕೇಶನ್ ಸೆಂಟರ್ ಪ್ರಧಾನ ಕಾರ್ಯದರ್ಶಿ ಸಮದ್ ಹಾಜಿ, ಜೊತೆ ಕಾರ್ಯದರ್ಶಿ ಅದ್ದು ಹಾಜಿ ಹಾಗೂ ಇನ್ನಿತರ ಗಣ್ಯ ಮುಖಂಡರು ಉಪಸ್ಥಿತರಿದ್ದರು.
Next Story





