Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೂರಲ್ಲಿ ಒಂದು ಕೇಸ್ ಯಾಕೆ ಎನ್‌ಐಎಗೆ...

ಮೂರಲ್ಲಿ ಒಂದು ಕೇಸ್ ಯಾಕೆ ಎನ್‌ಐಎಗೆ ಎಲ್ಲವನ್ನು ಕೊಡಿ: ಅಡ್ವಕೇಟ್ ಎಸ್. ಬಾಲನ್

ವಾರ್ತಾಭಾರತಿವಾರ್ತಾಭಾರತಿ14 Jun 2025 9:38 PM IST
share
ಮೂರಲ್ಲಿ ಒಂದು ಕೇಸ್ ಯಾಕೆ ಎನ್‌ಐಎಗೆ ಎಲ್ಲವನ್ನು ಕೊಡಿ: ಅಡ್ವಕೇಟ್ ಎಸ್. ಬಾಲನ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ ನಡೆದ ಮೂರು ಕೊಲೆ ಪ್ರಕರಣಗಳನ್ನು ಹೆಚ್ಚಿನ ತನಿಖೆಗಾಗಿ ರಾಷ್ಟ್ರೀಯ ತನಿಖಾ ಸಂಸ್ಥೆಗೆ ನೀಡಲಿ. ಕೇವಲ ಒಂದು ಪ್ರಕರಣ ನೀಡಿರುವುದು ಸರಿಯಲ್ಲ ಎಂದು ಆಲ್ ಇಂಡಿಯಾ ಪ್ರಾಕ್ಟಿಸಿಂಗ್ ಲಾಯರ್ಸ್ ಕೌನ್ಸಿಲ್ ಕರ್ನಾಟಕ ಇದರ ಅಧ್ಯಕ್ಷ ಅಡ್ವಕೇಟ್ ಎಸ್. ಬಾಲನ್ ಹೇಳಿದ್ದಾರೆ.

ನಗರದ ಓಶಿಯನ್ ಹೋಟೆಲ್ ಸಭಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶೆಡ್ಯೂಲ್ ಅಫೆನ್ಸ್‌ನ್ನು ಬಿಟ್ಟು ಉಳಿದ ಪ್ರಕರಣವನ್ನು ತನಿಖೆ ನಡೆಸುವ ಅಧಿಕಾರ ಎನ್‌ಐಎಗೆ ಇಲ್ಲ . ಯಾವುದೇ ಪ್ರಕರಣವನ್ನು ವರ್ಗಾಯಿಸಿದರೆ ಸಿಬಿಐಗೆ ತನಿಖೆ ಮಾಡುವ ಅಧಿಕಾರ ಇದೆ ಎಂದು ತಿಳಿಸಿದರು.

ಯಾವುದೇ ಸಮುದಾಯವನ್ನು ಟಾರ್ಗೆಟ್ ಮಾಡುವ ಉದ್ದೇಶದಿಂದ ಕೊಲೆ ಮಾಡಲಾಗಿದ್ದರೆ ಯುಎಪಿಎ ಕಾಯ್ದೆಯನ್ವಯ ಪ್ರಕರಣ ದಾಖಲಿಸಬೇಕು, ಇಲ್ಲವೇ ಇರುವ ಕಾನೂನಿಗೆ ತಿದ್ದುಪಡಿ ತರಬೇಕು. ಆಗ ಮಾತ್ರ ಎಲ್ಲ ರೀತಿಯ ಕೋಮು ಆಧಾರಿತ ದುಷ್ಕೃತ್ಯಗಳನ್ನು ತಡೆಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.

ಹತ್ಯಾ ಪ್ರಕರಣಗಳ ಬಗ್ಗೆ ಸತ್ಯಶೋಧನೆ ಎರಡು ದಿನಗಳಿಂದ ನಡೆಯತ್ತಿದ್ದು, ಸಮಗ್ರ ಮಾಹಿತಿ ಕಲೆ ಹಾಕಿ ವರದಿ ಸಿದ್ದಪಡಿಸಲಾಗುವುದು. ಸರಕಾರಕ್ಕೂ ವರದಿ ಸಲ್ಲಿಸಲಾಗುವುದು ಮತ್ತು ಮಾಧ್ಯಮಗಳಿಗೂ ಬಿಡುಗಡೆಗೊಳಿಸಲಾಗುವುದು ಎಂದು ನುಡಿದರು.

ದ.ಕ.ಜಿಲ್ಲೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಪ್ರಕರಣ ವೈಯಕ್ತಿಕ ಟಾರ್ಗೆಟೆಡ್ ಹತ್ಯೆಯಾದರೆ, ಅಶ್ರಫ್ ಹಾಗೂ ಅಬ್ದುಲ್ ರಹ್ಮಾನ್ ಕೊಲೆ ಸಮುದಾಯ ಟಾರ್ಗೆಟೆಡ್ ಆಗಿದೆ ಎಂದು ಅಭಿಪ್ರಾಯಪಟ್ಟ ಬಾಲನ್, ತಮ್ಮ ಸಂಘಟನೆಯ ವತಿಯಿಂದ ನಡೆಸುವ ಸತ್ಯಶೋಧನಾ ಸಮಿತಿಯು ಕೊಳ್ತಮಜಲಿನಲ್ಲಿ ಹತ್ಯೆಯಾಗಿರುವ ಅಬ್ದುಲ್ ರಹ್ಮಾನ್ ಕುಟುಂಬದವರನ್ನು ಮಾತನಾಡಿಸಿದೆ. ಈ ಪ್ರಕರಣದಲ್ಲಿ ಹಲ್ಲೆಗೊಳಗಾಗಿ ಚೇತರಿಸಿ ಕೊಳ್ಳುತ್ತಿರುವ ಖಲಂದರ್ ಶಾಫಿ ಅವರನ್ನು ಮಾತನಾಡಿಸಿಲ್ಲ. ಸುಹಾಸ್ ಶೆಟ್ಟಿ ಕುಟುಂಬದವರ ಭೇಟಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ದಕ್ಷಿಣ ಕನ್ನಡದಲ್ಲಿ ಕೋಮು ಸಂಘರ್ಷ ನಿಗ್ರಹಕ್ಕೆ ರಾಜ್ಯ ಸರ್ಕಾರ ನೂತನವಾಗಿ ರಚನೆ ಮಾಡಿರುವ ವಿಶೇಷ ಕಾರ್ಯಪಡೆಗೆ ಪೂರಕ ಕಾನೂನು ಇಲ್ಲದಿರುವುದರಿಂದ ಈ ಕಾರ್ಯಪಡೆ ಹಲ್ಲಿಲ್ಲದ ಹಾವಿನಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಸಂಘರ್ಷ ನಿಗ್ರಹಕ್ಕಾಗಿ ‘ಆ್ಯಂಟಿ ಕಮ್ಯೂನಲ್ ಲಾ’ ಮಾಡುವುದಾಗಿ ಹೇಳಲಾಗಿದ್ದರೂ ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿಲ್ಲ. ಇಂಥ ಸ್ಪಷ್ಟ, ಪೂರಕ ಕಾನೂನು ಇಲ್ಲದಿದ್ದರೆ ವಿಶೇಷ ಕಾರ್ಯಪಡೆ ಮಾಡಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಕಾನೂನೇ ದುರ್ಬಲವಾಗಿದೆ: ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್)ಯಲ್ಲಿ ಸೆಕ್ಷನ್ 173 ಸೇರಿಸಿ ಈ ಕಾನೂನನ್ನು ದುರ್ಬಲಗೊಳಿಸಿದ್ದರಿಂದಲೇ ಕೋಮು ದ್ವೇಷ ಭಾಷಣ ಪ್ರಕರಣಗಳಲ್ಲಿ ಹೈಕೋರ್ಟ್‌ನಲ್ಲಿ ತಡೆ ಸಿಗುತ್ತಿದೆ ಎಂದು ಹೇಳಿದ ಬಾಲನ್, ಈ ಬಗ್ಗೆ ಕರ್ನಾಟಕದ ಕಾನೂನಿಗೆ ಸೂಕ್ತ ತಿದ್ದುಪಡಿ ತಂದರೆ ದ್ವೇಷ ಭಾಷಣ ಮಾಡುವವರಿಗೆ ಸೂಕ್ತ ಶಿಕ್ಷೆ ಸಿಗಬಹುದು ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪಿಎಫ್‌ಐ ಕೈವಾಡ ಇದೆ ಎಂಬ ಆರೋಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ಕೊಲೆ ಯಾರು ಮಾಡಿದ್ದರು ಅದು ತಪ್ಪು. ಪ್ರಕರಣದಲ್ಲಿ ಪಿಎಫ್‌ಐ ಸದಸ್ಯರು ಭಾಗಿಯಾಗಿದ್ದರೆ ಅದು ಕೂಡಾ ತನಿಖೆಯಾಗಲಿ ಎಂದು ಹೇಳಿದರು.

ಪಿಎಫ್‌ಐ ಬ್ಯಾನ್ ವಿಚಾರದ ಕುರಿತು ಪ್ರತಿಕ್ರಿಯಿಸಿ, ಕೇಂದ್ರ ಸರ್ಕಾರವು ಪಿಎಫ್‌ಐಯನ್ನು ಐಸಿಸ್, ಅಲ್‌ಖೈದಾಗಳ ರೀತಿಯಲ್ಲಿ ಉಗ್ರ ಚಟುವಟಿಕೆ ಸಂಘಟನೆಯೆಂದು ವ್ಯಾಖ್ಯಾನಿಸಿ ಬ್ಯಾನ್ ಮಾಡಿಲ್ಲ. ಕಾನೂನು ಬಾಹಿರ ಸಂಘಟನೆ ಎಂಬುದಾಗಿ ಪಿಎಫ್‌ಐನ್ನು ಬ್ಯಾನ್ ಮಾಡಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮಜೀದ್ ಖಾನ್, ರಾಜ್ಯ ಉಪಾಧ್ಯಕ್ಷ ಜಯರಾಮ್, ರಾಜ್ಯ ಕಾರ್ಯದರ್ಶಿ ಮುಹಮ್ಮದ್ ಇರ್ಶಾದ್, ಸಮಿತಿ ಸದಸ್ಯ ಅಸ್ಮ, ದಲಿತ ಹೋರಾಟಗಾರ ಅಂಗಡಿ ಚಂದ್ರು ಉಪಸ್ಥಿತರಿದ್ದರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X