ಮಂಗಳೂರು: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

ಮಂಗಳೂರು: ದ.ಕ.ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಕೆಲವು ದಿನಗಳ ಹಿಂದೆ ಲೋಕಾಯುಕ್ತ ದಾಳಿಗೊಳಗಾಗಿ 18 ದಿನಗಳ ಕಾಲ ಬಂಧನಕ್ಕೆ ಒಳಗಾಗಿದ್ದ ಕೃಷ್ಣವೇಣಿ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾದ ಅಭಿಪ್ರಾಯ ವನ್ನು ಗಣನೆಗೆ ತೆಗೆದುಕೊಂಡ ಸರಕಾರವು ಇದೀಗ ಸರಕಾರಿ ಸೇವೆಯಿಂದ ಅಮಾನತುಗೊಳಿಸಿ ಶಿಸ್ತುಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ತೆರವಾದ ಕೃಷ್ಣವೇಣಿ ಅವರ ಸ್ಥಾನಕ್ಕೆ ಉಡುಪಿ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಸಂದೀಪ್ ಜಿ.ಯು.ಅವರನ್ನು ನಿಯುಕ್ತಿಗೊಳಿಸಲಾಗಿದೆ.
Next Story





