ದ.ಕ.ಜಿಲ್ಲೆಯ ಮರಳು, ಕೆಂಪುಕಲ್ಲು ಗಣಿಗಾರಿಕೆ: ಸ್ಪೀಕರ್ ಯು.ಟಿ. ಖಾದರ್ ನೇತೃತ್ವದಲ್ಲಿ ಸಭೆ

ಮಂಗಳೂರು: ದ.ಕ.ಜಿಲ್ಲೆಯ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತು ಬೆಂಗಳೂರಿನ ವಿಧಾನ ಸೌಧದಲ್ಲಿ ಶನಿವಾರ ಸ್ಪೀಕರ್ ಯು.ಟಿ. ಖಾದರ್ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ರ ನೇತೃತ್ವದಲ್ಲಿ ವಿಸ್ತ್ರತ ಚರ್ಚೆ ನಡೆಸಲಾಯಿತು.
ಜಿಲ್ಲೆಯಲ್ಲಿ ಮನೆ, ಕಟ್ಟಡ ಕಾಮಗಾರಿಗಳಿಗೆ ಅಡೆತಡೆಯಾಗಿರುವ ವಿಚಾರಗಳ ಕುರಿತು ಸಭೆಯಲ್ಲಿ ಪ್ರಸ್ತಾಪಿ ಸಲಾಯಿತು. ಕಾನೂನು ಬದ್ಧವಾಗಿ ಕೆಂಪುಕಲ್ಲು ಹಾಗೂ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಿಕೊಡಲು ಸೂಕ್ತ ಗಣಿ ನೀತಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸ್ಪೀಕರ್ ಖಾದರ್ ಹಾಗೂ ಸಚಿವ ದಿನೇಶ್ ಗುಂಡೂರಾವ್ ಗಣಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಾರದೊಳಗೆ ಗಣಿ ಸಚಿವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.
Next Story