ಮಂಗಳೂರು ನೂತನ ಡಿಸಿಪಿಯಾಗಿ ಜಿತೇಂದ್ರ ಕುಮಾರ್ ದಯಾಮ ನೇಮಕ

ಮಂಗಳೂರು: ನಗರ ಪೊಲೀಸ್ ಆಯುಕ್ತಾಲಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ (ಉಪಾಯುಕ್ತ) ಸಿದ್ದಾರ್ಥ ಗೋಯಲ್ ಅವರನ್ನು ವರ್ಗಾಯಿಸಲಾಗಿದೆ.
ಅವರ ಸ್ಥಾನಕ್ಕೆ ಜಿತೇಂದ್ರ ಕುಮಾರ್ ದಯಾಮ ಅವರನ್ನು ಸರಕಾರ ನೇಮಿಸಿ ಆದೇಶ ಹೊರಡಿಸಿದೆ. ಸಿದ್ದಾರ್ಥ ಗೋಯೆಲ್ ಅವರನ್ನು ಬಾಗಲಕೋಟೆಯ ಎಸ್ಪಿಯಾಗಿ ವರ್ಗಾವಣೆ ಮಾಡಲಾಗಿದೆ.
ನಕ್ಸಲ್ ನಿಗ್ರಹ ಪಡೆಯ ಎಸ್ಪಿಯಾಗಿ ಉಡುಪಿಯಲ್ಲಿ ಕಾರ್ಯನಿರ್ವಹಿಸಿದ್ದ ಜಿತೇಂದ್ರ ಕುಮಾರ್ ದಯಾಮ 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.
Next Story





