ನಿಟ್ಟೆ ಪಿಸಿಯೋಥೆರಪಿ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

ಕೊಣಾಜೆ: ಕ್ರೀಡೆ ಅಥವಾ ಯಾವುದಾದರೂ ಲಲಿತಕಲೆಗಳಲ್ಲಿ ತೊಡಗಿಸಿಕೊಳ್ಳದಿದ್ದರೆ ನಮ್ಮ ಜೀವನ ಪರಿಪೂರ್ಣವಾಗಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಇಂತಹ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮುನ್ನಡೆಯಬೇಕು ಎಂದು ದ.ಕ.ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷರಾದ ರಾಜೇಂದ್ರ ಬಿ.ಎಸ್ ಅವರು ಹೇಳಿದರು.
ಅವರು ನಿಟ್ಟೆ ವಿಶ್ವವಿದ್ಯಾಲಯದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋತೆರಪಿ ಕಾಲೇಜಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆ ಅಥವಾ ಇತರ ಕಲೆಗಳು ನಮ್ಮ ಜೀವನಕ್ಕೆ ಸ್ಪೂರ್ತಿಯೊಂದಿಗೆ ಯಶಸ್ಸಿಗೆ ಕಾರಣವಾಗುತ್ತದೆ ಜೊತೆಗೆ ದೈಹಿಕವಾಗಿ ನಮ್ಮನ್ನು ಸದೃಢಗೊಳಿಸುತ್ತದೆ ಎಂದರು.
ನಿಟ್ಟೆ ವಿಶ್ವವಿದ್ಯಾಲಯದ ಕ್ರೀಡಾ ಸಲಹೆಗಾರರಾದ ಡಾ.ಮರಳೀ ಕೃಷ್ಞ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಕ್ರೀಡೆಯು ಸದಾ ನಮ್ಮಲ್ಲಿ ಉತ್ಸಾಹತೆಯನ್ನು ಮೂಡಿಸಲು ಸಹಕಾರಿ. ಎಲ್ಲಾ ವಿದ್ಯಾರ್ಥಿಗಳು ಇಂತಹ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಸಕ್ರಿಯರಾಗಿ ಎಂದರು.
ಕಾರ್ಯಕ್ರಮದಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಕರುಣಾಕರ ಶೆಟ್ಟಿ, ವಿದ್ಯಾರ್ಥಿ ನಾಯಕರಾದ ಕೆಸಿಯಾ ಸುಶಾನ್, ಅಸಾ ವಿ ಥೋಮಸ್ ಉಪಸ್ಥಿತರಿದ್ದರು.
ನಿಟ್ಟೆ ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಧರಣೇಶ್ ಕುಮಾರ್ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ರೀಡಾ ಸಲಹೆಗಾರ ನಿಶಿತಾ ಫೆರ್ನಾಂಡೀಸ್ ಅವರು ವಾದಿಸಿದರು. ಸಮೀನ ಮನ್ನ ಕಾರ್ಯಕ್ರಮ ನಿರೂಪಿಸಿದರು.









