Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಾರ್ತಾಭಾರತಿ ಹೆಸರು ಬಳಸಿ ʼಆಪರೇಶನ್...

ವಾರ್ತಾಭಾರತಿ ಹೆಸರು ಬಳಸಿ ʼಆಪರೇಶನ್ ಸಿಂಧೂರʼ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್: ನಿತಿನ್ ಶಾಮನೂರು, ಸಂತೋಷ್ ಹೆಗಡೆ, ಬೆಟ್ಟಂಪಾಡಿ ಚಂದ್ರ ಹಾಗೂ ನ್ಯೂಸ್‌ ಪುತ್ತೂರು ವೆಬ್ ಸೈಟ್ ವಿರುದ್ಧ ಎಫ್‌ ಐ ಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ15 May 2025 6:15 PM IST
share
ವಾರ್ತಾಭಾರತಿ ಹೆಸರು ಬಳಸಿ ʼಆಪರೇಶನ್ ಸಿಂಧೂರʼ ಬಗ್ಗೆ ಸುಳ್ಳು ಸುದ್ದಿ ಪೋಸ್ಟ್: ನಿತಿನ್ ಶಾಮನೂರು, ಸಂತೋಷ್ ಹೆಗಡೆ, ಬೆಟ್ಟಂಪಾಡಿ ಚಂದ್ರ ಹಾಗೂ ನ್ಯೂಸ್‌ ಪುತ್ತೂರು ವೆಬ್ ಸೈಟ್ ವಿರುದ್ಧ ಎಫ್‌ ಐ ಆರ್ ದಾಖಲು

ಮಂಗಳೂರು: ವಾರ್ತಾಭಾರತಿ ದೈನಿಕದ ಹೆಸರು ಹಾಗೂ ಆಪರೇಷನ್ ಸಿಂಧೂರ ಬಗ್ಗೆ ಸುಳ್ಳು ಸುದ್ದಿ ಹರಡುತ್ತಿರುವ ಮೂವರು ದುಷ್ಕರ್ಮಿಗಳು ಹಾಗೂ ನ್ಯೂಸ್‌ ಪುತ್ತೂರು ವೆಬ್ ಸೈಟ್ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ತನ್ನ ಹೆಸರು, ವಾರ್ತಾಭಾರತಿ ದೈನಿಕದ ಹೆಸರು ಹಾಗೂ 'ಆಪರೇಷನ್ ಸಿಂಧೂರ' ಕಾರ್ಯಾಚರಣೆ ಬಗ್ಗೆ ಸುಳ್ಳು ಮತ್ತು ಪ್ರಚೋದನಕಾರಿ ವದಂತಿ ಹರಡುತ್ತಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ 'ವಾರ್ತಾಭಾರತಿ'ಯ ಸುದ್ದಿ ಸಂಪಾದಕರಾದ ಬಿ.ಎಂ.ಬಶೀರ್ ಅವರು ದೂರು ದಾಖಲಿಸಿದ್ದರು.

ನಿತಿನ್ ಶಾಮನೂರು ಎಂಬಾತನ ಫೇಸ್ ಬುಕ್ ಪೋಸ್ಟ್ ನಲ್ಲಿ 'ಆಪರೇಷನ್ ಸಿಂದೂರ್' : ಕನ್ನಡ ಪತ್ರಕರ್ತನ ಸೋದರ ಸಂಬಂಧಿಯ ಪತ್ನಿ ಫಿನಿಷ್' ಎಂಬ ಶೀರ್ಷಿಕೆಯಡಿ ಒಬ್ಬ ಮಹಿಳೆಯ ಫೋಟೋ ಹಾಗೂ ಸೈನಿಕರ ಫೋಟೋ ಜೊತೆ ಸುಳ್ಳು ಮಾಹಿತಿ ಬರೆಯಲಾಗಿದೆ. ಇದೇ ಫೇಸ್ ಬುಕ್ ಪೋಸ್ಟ್ ಅನ್ನು ಸಂತೋಷ್ ಹೆಗಡೆ ಎಂಬಾತನೂ ತನ್ನ ಫೇಸ್ ಬುಕ್ ಖಾತೆಯಲ್ಲಿ ಶೇರ್ ಮಾಡಿದ್ದಾನೆ. Bettampady Chandra ಎಂಬ ಹೆಸರಿನ ಫೇಸ್ ಬುಕ್ ಖಾತೆಯಿಂದಲೂ ಇದೇ ಸುಳ್ಳು ಸುದ್ದಿ ಪೋಸ್ಟ್ ಮಾಡಲಾಗಿದೆ. newsputtur.com ಎಂಬ ಹೆಸರಿನ ಒಂದು ವೆಬ್ ಸೈಟ್ ಕೂಡ ಇದೇ ಸುಳ್ಳು ಸುದ್ದಿಯನ್ನು ಹರಡಿದೆ ಎಂದು ಮಂಗಳೂರು ದಕ್ಷಿಣ ಠಾಣೆಯಲ್ಲಿ ದಾಖಲಿಸಿರುವ ದೂರಿನಲ್ಲಿ ಅವರು ಉಲ್ಲೇಖಿಸಿದ್ದರು.

"ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಹರಡಿರುವ ಈ ಸುಳ್ಳು ಹಾಗೂ ಪ್ರಚೋದನಕಾರಿ ವದಂತಿಯಿಂದಾಗಿ ಜನರಿಗೆ ಸುಳ್ಳು ಮಾಹಿತಿ ರವಾನೆಯಾಗುತ್ತಿದೆ. ಈ ಸುಳ್ಳು ಸುದ್ದಿಯಿಂದ ಸಮಾಜದಲ್ಲಿ ಅಶಾಂತಿ, ಪ್ರಕ್ಷುಬ್ಧತೆ ಹರಡುವ ಸಾಧ್ಯತೆ ಇದೆ. ಕರಾವಳಿಯಲ್ಲಿ ಇತ್ತೀಚಿನ ಕೆಲವು ಘಟನೆಗಳಿಂದ ಈಗಾಗಲೇ ಸೂಕ್ಷ್ಮ ವಾತಾವರಣವಿದ್ದು, ಇಂತಹ ಸುಳ್ಳು ಹಾಗೂ ಪ್ರಚೋದನಕಾರಿ ವದಂತಿಗಳಿಂದ ಪರಿಸ್ಥಿತಿ ಬಿಗಡಾಯಿಸುವ ಸಾಧ್ಯತೆ ಇದೆ. ಆದ್ದರಿಂದ ಸಂತೋಷ್ ಹೆಗಡೆ, ನಿತಿನ್ ಶಾಮನೂರು, Bettampady Chandra ಹಾಗೂ newsputtur.com ವೆಬ್ ಸೈಟ್ ಸಂಪಾದಕರ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು" ಎಂದು ಬಿ.ಎಂ.ಬಶೀರ್ ಅವರು ದೂರಿನಲ್ಲಿ ಒತ್ತಾಯಿಸಿದ್ದರು.

ದೂರು ದಾಖಲಿಸಿಕೊಂಡಿರುವ ಮಂಗಳೂರು ದಕ್ಷಿಣ ಠಾಣೆಯ ಪೊಲೀಸರು, ಮೂವರು ದುಷ್ಕರ್ಮಿಗಳು ಹಾಗೂ ನ್ಯೂಸ್‌ ಪುತ್ತೂರು ವೆಬ್ ಸೈಟ್ ವಿರುದ್ಧ ಎಫ್‌ ಐ ಆರ್ ದಾಖಲಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X