ಪಡುಬಿದ್ರೆ : ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ಸೆರೆ

ಪಡುಬಿದ್ರೆ : ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪಶ್ಚಿಮ ಬಂಗಾಲದ ಮುರ್ಷಿದಾಬಾದ್ ಜಿಲ್ಲೆಯ ನಿವಾಸಿ ಮುಫೀಝುಲ್ ಶೇಖ್(26) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಸ್ಕೆಟ್ ಕೊಡಿಸುವುದಾಗಿ ಬಾಲಕಿಯ ತಂದೆ, ತಾಯಿಗೆ ತಿಳಿಸಿ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಘಟನೆಯ ವಿವರ: ಪಡುಬಿದ್ರೆಯಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾರ್ಮಿಕನಾಗಿದ್ದ ಈತ, ಅಲ್ಲೇ ದುಡಿಯುತ್ತಿದ್ದ ಅದೇ ಮುರ್ಷಿದಾಬಾದ್ ಜಿಲ್ಲೆಯ ದಂಪತಿಯ ಐದು ವರ್ಷದ ಮಗಳನ್ನು ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದು, ಬಾಲಕಿಯು ಹೊಟ್ಟೆನೋವು ಎಂದು ತಿಳಿಸಿದ್ದು, ಆಕೆಯನ್ನು ಪಡುಬಿದ್ರಿಯ ಪ್ರಾ. ಆ. ಕೇಂದ್ರಕ್ಕೆ ಕರೆ ತರಲಾಗಿತ್ತು. ಅಲ್ಲಿನ ವೈದ್ಯರು ಪರಿಶೀಲಿಸಿ ಲೈಂಗಿಕ ದೌರ್ಜನ್ಯ ನಡೆದಿರುವ ಸಂಶಯವನ್ನು ವ್ಯಕ್ತಪಡಿಸಿದ್ದಾರೆ. ಬಳಿಕ ಬಾಲಕಿಯನ್ನು ಪಡುಬಿದ್ರೆ ಠಾಣಾ ಮಹಿಳಾ ಪೇದೆ, ಆಕೆಯ ತಂದೆ, ತಾಯಿ ಜತೆಗೆ ಉಡುಪಿಯ ಸರಕಾರಿ ಮಕ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ದೃಢಪಟ್ಟಿದೆ ಪೊಲೀಸರು ತಿಳಿಸಿದ್ದಾರೆ.
ಆರೋಪಿಯನ್ನು ಬಂಧಿಸಲಾಗಿದ್ದು, ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾನೂನಿನನ್ವಯ ಪ್ರಕರಣ ದಾಖಲಿಸಲಾಗಿದೆ.





