ನಾಟೆಕಲ್: ಕಾರು ಪಲ್ಟಿ; ಚಾಲಕ ಅಪಾಯದಿಂದ ಪಾರು

ಕೊಣಾಜೆ: ಕಾರೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಗುರುವಾರ ಬೆಳಿಗ್ಗೆ ನಾಟೆಕಲ್ ಸಮೀಪದ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ಸಂಭವಿಸಿದೆ.
ಕಾರು ಚಾಲಕ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಯೆಂದು ತಿಳಿದು ಬಂದಿದೆ. ಈತ ದೇರಳಕಟ್ಟೆ ಯಿಂದ ಪನೀರ್ ರಸ್ತೆಯಲ್ಲಿ ಬೀರಿ ಕಡೆಗೆ ತನ್ನ ಸ್ವಿಫ್ಟ್ ಕಾರ್ ನಲ್ಲಿ ಹೋಗುತ್ತಿದ್ದಾಗ ಪನೀರು ಚರ್ಚ್ ಬಳಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರು ಪಲ್ಟಿಯಾಗಿ ಸಮೀಪದ ಟ್ರಾನ್ಸ್ ಫಾರ್ಮರ್ ಕಂಬಕ್ಕೆ ಒರಗಿ ನಿಂತಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸದೆ ಚಾಲಕ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story




