ಉಳ್ಳಾಲ | ಪಿಕ್ಆಪ್ ಢಿಕ್ಕಿ; ಪಾದಚಾರಿ ಮೃತ್ಯು

ಸಾಂದರ್ಭಿಕ ಚಿತ್ರ
ಉಳ್ಳಾಲ: ಪಾದಚಾರಿಗೆ ಪಿಕ್ಆಪ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಅಬ್ಬಕ್ಕ ಸರ್ಕಲ್ ಬಳಿ ಬುಧವಾರ ರಾತ್ರಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ರಮೇಶ್ (50) ಎಂದು ಗುರುತಿಸಲಾಗಿದೆ.
ಅವರು ರಸ್ತೆ ದಾಟುತ್ತಿದ್ದ ಸಂದರ್ಭ ಉಳ್ಳಾಲ ಕಡೆ ಹೋಗುತ್ತಿದ್ದ ಪಿಕ್ ಅಪ್ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸ್ ಸಂಚಾರಿ ವಿಭಾಗದ ಡಿಸಿಪಿ ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





