ಸಿ.ಎಸ್.ಇ.ಇ.ಟಿ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಸಾಧನೆ
ವಿದ್ಯಾಗಿರಿ: ದಿ ಇನ್‍ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೆಟರಿಸ್ ಆಫ್ ಇಂಡಿಯಾ ನವೆಂಬರ್ ನಲ್ಲಿ ನಡೆಸಿದ ಕಂಪೆನಿ ಸೆಕ್ರೆಟರಿ ಎಕ್ಸಿಕ್ಯೂಟಿವ್ ಎಂಟ್ರನ್ಸ್ ಟೆಸ್ಟ್(ಸಿಎಸ್‍ಇಇಟಿ)ನಲ್ಲಿ ಆಳ್ವಾಸ್ ಪದವಿ ಪೂರ್ವಕಾಲೇಜು ಹಾಗೂ ಪದವಿ ಕಾಲೇಜಿನ 53 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ 74.64 ಶೇಕಡಾ ಫಲಿತಾಂಶ ದಾಖಲಿಸಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ನಿಷಿತಾ ಸಿ ಶೆಟ್ಟಿ (141), ಸಮೃದ್ಧಿ ಪ್ರಭು(136), ದೀಕ್ಷಾ (129), ಬಿ ಸುಹಾಸ್ ರಾವ್ (129), ಪ್ರತೀಕ್ಷಾ ಶೆಣೈ (129), ಚಿನ್ಮಯಿ ಬಿ ಆರ್ (127), ಗಗನ್ ಚಂದ್ರಹಾಸ್ ಶೆಟ್ಟಿ (125), ಪ್ರವೀಣ್ (124), ಸಂತೃಪ್ತಿ ರಾವ್ (123), ಧನ್ವಿ ಹೆಚ್ ಪೈ( 122) ಅಂಕದೊಂದಿಗೆ ಉತ್ತೀರ್ಣರಾಗಿದ್ದಾರೆ. ಒಟ್ಟು 71 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು, 53 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಮುಂದಿನ ಹಂತದ ಪರೀಕ್ಷೆ ಅರ್ಹತೆ ಪಡೆದಿದ್ದಾರೆ. ವಿದ್ಯಾಥಿಗಳ ಸಾಧನೆಯನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವ ಶ್ಲಾಘಿಸಿದ್ದಾರೆ.
ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ ಕುರಿಯನ್, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರೋ ಸದಾಕಾತ್, ಪದವಿ ಪೂರ್ವ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ ಡಿ ಹಾಗೂ ಸಿಎ ಹಾಗೂ ಸಿಎಸ್ ಕೋರ್ಸಿನ ಸಂಯೋಜಕ ಅನಂತಶಯನ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.





