Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇ- ಇಂಧನ ಬಾಡಿಗೆ ವಾಹನಗಳಿಗೆ ಪರವಾನಿಗೆ...

ಇ- ಇಂಧನ ಬಾಡಿಗೆ ವಾಹನಗಳಿಗೆ ಪರವಾನಿಗೆ ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯಿಂದ ಆದೇಶ

ವಾರ್ತಾಭಾರತಿವಾರ್ತಾಭಾರತಿ3 July 2025 2:54 PM IST
share
ಇ- ಇಂಧನ ಬಾಡಿಗೆ ವಾಹನಗಳಿಗೆ ಪರವಾನಿಗೆ ಕಡ್ಡಾಯ: ರಾಜ್ಯ ಸಾರಿಗೆ ಇಲಾಖೆಯಿಂದ ಆದೇಶ

ಮಂಗಳೂರು, ಜು.3: ರಾಜ್ಯ ಸಾರಿಗೆ ಇಲಾಖೆಯು ಬ್ಯಾಟರಿ ಚಾಲಿತ, ಮೆಥನಾಲ್ ಮತ್ತು ಇಥನಾಲ್ ಇಂಧನ ಬಳಸಿ ಸಂಚರಿಸುವ ವಾಣಿಜ್ಯ ಉದ್ದೇಶಿತ ಇ ವಾಹನಗಳಿಗೆ ಪರವಾನಿಗೆ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಸಾರಿಗೆ ವಾಹನಗಳಿಗೆ ಮೋಟಾರು ವಾಹನಗಳ ಕಾಯ್ದೆ 1988ರ ಕಲಂ 66(3) (ಎನ್)ಪ್ರಕಾರ ಕಲಂ 66(1)ರಡಿ ಪರವಾನಿಗೆ ಪಡೆಯುವುದರಿಂದ 2022ರಿಂದ ಈವರೆಗೆ ವಿನಾಯಿತಿ ನೀಡಲಾಗಿತ್ತು. ಆದರೆ ಆದೇಶವನ್ನು ಹಿಂಪಡೆದಿರುವ ರಾಜ್ಯ ಸಾರಿಗೆ ಇಲಾಖೆ, ಇ ಇಂಧನ ಬಳಸಿ ಸಂಚರಿಸುವ ಸಾರಿಗೆ ವಾಹನಗಳಿಗೂ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಶುಲ್ಕ ರಹಿತವಾಗಿ ಪರವಾನಿಗೆ ಮಂಜೂರು ಮಾಡಿ ವಿತರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ.

2018ರ ಅಕ್ಟೋಬರ್‌ನಲ್ಲಿ ಕೇಂದ್ರ ಭೂಸಾರಿಗೆ ಸಚಿವಾಲಯವು ಬಯೋ ಇಧನ, ಬ್ಯಾಟರಿ ಚಾಲಿತ ವಾಹನಗಳಿಗೆ ಪರ್ಮಿಟ್ ಇಲ್ಲದೆ, ದೇಶದ ಯಾವುದೇ ಭಾಗದಲ್ಲಿ ಸಂಚರಿಸಲು ಅವಕಾಶ ನೀಡಿತ್ತು. ಪರಿಸರ ಸ್ನೇಹಿ ವಾಹನಗಳಿಗೆ ಉತ್ತೇಜ ನೀಡುವ ಉದ್ದೇಶದಿಂದ ಜಾರಿಗೆ ತರಲಾದ ಈ ಆದೇಶ ರಾಜ್ಯದಲ್ಲಿ 2022ರ ಜ.1ರಿಂದ ಅನುಷ್ಟಾನಗೊಂಡಿತ್ತು. ಇದರಿದಾಗಿ ಕರಾವಳಿಯಲ್ಲಿ ಬಹು ಮುಖ್ಯವಾಗಿ ದ.ಕ. ಜಿಲ್ಲೆಯಲ್ಲಿ ಇ ಆಟೋ ರಿಕ್ಷಾಗಳು ಮತ್ತು ಇತರ ಆಟೋರಿಕ್ಷಾಗಳ ನಡುವೆ ಗೊಂದಲದ ವಾತಾವರಣ ಸೃಷ್ಟಿಯಾಗಿ ಸಾಕಷ್ಟು ಪ್ರತಿಭಟನೆಗಳು ನಡೆದಿದ್ದವು. ಸಾರಿಗೆ ಇಲಾಖೆಗೆ ಸಾಕಷ್ಟು ದೂರುಗಳೂ ಈ ಕುರಿತಂತೆ ಸಲ್ಲಿಕೆಯಾಗಿತ್ತು. ಇ ರಿಕ್ಷಾಗಳಿಗೂ ಪರವಾನಿಗೆ ನೀಡಿ ಬಾಡಿಗೆಗೆ ಅವಕಾಶ ನೀಡಬೇಕು ಎಂಬ ಬೇಡಿಕೆಯ ಕುರಿತಂತೆ ದ.ಕ. ಜಿಲ್ಲಾಧಿಕಾರಿ ಸಮಕ್ಷಮದಲ್ಲಿ ರಿಕ್ಷಾ ಚಾಲಕರ ನಡುವೆ ಸಾಕಷ್ಟು ಸುತ್ತಿನ ಚರ್ಚೆಯೂ ನಡೆದಿತ್ತು. ಸ್ಥಳೀಯ ಶಾಸಕ ವೇದವ್ಯಾಸ ಕಾಮತ್‌ರವರು ಈ ಬಗ್ಗೆ ವಿಧಾನಸಭೆ ಕಲಾಪದ ವೇಳೆ ಪ್ರಸ್ತಾವಿಸಿದ್ದರೆ, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜಾರವರು ರಿಕ್ಷಾ ಚಾಲಕರ ಬೇಡಿಕೆ ಈಡೇರಿಸುವಂತೆ ಕಲಾಪದ ವೇಳೆ ಆಗ್ರಹಿಸಿದ್ದರು.

ಇದೀಗ ರಾಜ್ಯದ ಸಾರಿಗೆ ಇಲಾಖೆಯು ಈ ಬಗ್ಗೆ ಆದೇಶ ಹೊರಡಿಸಿದ್ದು, ಇದರಂತೆ ಈಗಾಗಲೇ ರಾಜ್ಯಾದ್ಯಂತ ಪರವಾನಿಗೆ ರಹಿತವಾಗಿ ಸಂಚರಿಸುತ್ತಿರುವ ಬ್ಯಾಟರಿ ಚಾಲಿತ, ಮೆಥನಾಲ್ ಹಾಗೂ ಇಥನಾಲ್ ಚಾಲಿತ ವಾಹನಗಳು ಶುಲ್ಕರಹಿತವಾಗಿ ಪರವಾನಿಗೆಯನ್ನು ಪಡೆಯಬೇಕಾಗಿದೆ.

ಪೆಟ್ರೋಲ್, ಡೀಸೆಲ್, ಸಿಎನ್‌ಐ ಚಾಲಿತ ಬಾಡಿಗೆ ವಾಹಗಳಿಗೆ ಐದು ವರ್ಷಗಳಿಗೊಮ್ಮೆ ಪರವಾನಿಗೆ ನವೀಕರಿಸಬೇಕಿದೆ. ಇದಕೆಕ ಸುಮಾರು 600 ರೂ. ಶುಲ್ಕ ಭರಿಸಬೇಕಾಗುತ್ತದೆ. ಸಾರಿಗೆ ಇಲಾಖೆಯ ನೂತನ ಆದೇಶದ ಪ್ರಕಾರ ಇ ಇಂಧನ ವಾಹನಗಳು ಇದೀಗ ಶುಲ್ಕ ರಹಿತವಾಗಿ ಪರವಾನಿಗೆ ಪಡೆಯುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಈ ಆದೇಶ ಅನುಷ್ಠಾನಕ್ಕೆ ಸಂಬಂಧಿಸಿ ಇನ್ನಷ್ಟೇ ಮಾರ್ಗಸೂಚಿ ಪ್ರಕಟವಾಗಬೇಕಾಗಿದೆ.

‘ಇತರ ರಿಕ್ಷಾಗಳಂತೆ ವಿದ್ಯುತ್ ಚಾಲಿತ ಆಟೋ ರಿಕ್ಷಾಗಳಿಗೂ ಪರವಾನಿಗೆ ಪಡೆಯಲು ನೀಡಿರುವ ಆದೇಶದ ಮೂಲಕ ಸರಕಾರ ರಿಕ್ಷಾ ಚಾಲಕರ ಬೇಡಿಕೆಯನ್ನು ಪೂರೈಸಿದೆ. ದ.ಕ. ಜಿಲ್ಲೆಯಲ್ಲಿ ಬ್ಯಾಟರಿ ಚಾಲಿತ ರಿಕ್ಷಾಗಳು ಪರವಾನಿಗೆ ಇಲ್ಲದೆ ಸಂಚರಿಸುತ್ತಿರುವ ಹಿನ್ನೆಯಲ್ಲಿ ಗೊಂದಲ ಉಂಟಾಗುತ್ತಿರುವ ಬಗ್ಗೆ ವಿಧಾನ ಪರಿಷತ್‌ನ ಶೂನ್ಯ ವೇಳೆಯಲ್ಲಿಯೂ ಪ್ರಸ್ತಾಪಿವಿಸಿ ರಾಜ್ಯದ ಸಾರಿಗೆ ಸಚಿವ ರಾಮಲಿಂಗ ರೆಡ್ಡಿಯವರಿಗೆ ಕಾನೂನು ತರುವಂತೆ ವಿನಂತಿಸಿದಾಗ, ಅಂದು ನೀಡಿದ ಭರವಸೆಯಂತೆ ಆದೇಶವಾಗಿದೆ. ಇದಕ್ಕಾಗಿ ರಾಜ್ಯ ಸರಕಾರವನ್ನು ಅಭಿನಂದಿಸುತ್ತೇನೆ.’

ಐವನ್ ಡಿಸೋಜಾ, ವಿಧಾನ ಪರಿಷತ್ ಸದಸ್ಯರು.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X