Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು...

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂಬ ಒತ್ತಾಯದ ಬಗ್ಗೆ ಸರಕಾರ ತೀರ್ಮಾನಿಸಲಿದೆ : ಸಚಿವ ದಿನೇಶ್ ಗುಂಡೂರಾವ್

ʼʼಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ನಿರ್ದೇಶನʼʼ

ವಾರ್ತಾಭಾರತಿವಾರ್ತಾಭಾರತಿ10 May 2025 12:22 PM IST
share
Photo of Press meet

ಮಂಗಳೂರು : ಜಿಲ್ಲೆಯಲ್ಲಿ ನಡೆದ ಅಹಿತಕರ ಘಟನೆ ಹಾಗೂ ಪಾಕ್ ಮತ್ತು ಭಾರತ ನಡುವಿನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ, ಸೈನಿಕರ ವಿರುದ್ಧ ಸಂದೇಶಗಳು, ಸುಳ್ಳು ಸುದ್ದಿ, ಉದ್ರೇಕಕಾರಿ ಹೇಳಿಕೆ, ದುರುದ್ದೇಶಪೂರಿತ ಪೋಸ್ಟ್‌ಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರಿಗೆ ನಿರ್ದೇಶನ ನೀಡಲಾಗಿದೆ. ಕೆಲವರು ನಕಲಿ ಖಾತೆಗಳ ಮೂಲಕ ಈ ಕೃತ್ಯದಲ್ಲಿ ತೊಡಗಿರುವವರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿಯೂ ಕ್ರಮ ವಹಿಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಶನಿವಾರ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯ ವೇಳೆ ಈ ಸಂಬಂಧ ಪ್ರಶ್ನೆಗಳಿಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸೈನಿಕರ ವಿರುದ್ಧ ಸಂದೇಶ ನೀಡುತ್ತಿರುವವರ ಕುರಿತ ಪ್ರಶ್ನೆಗೆ, ಸೈನಿಕರ ವಿರುದ್ಧದ ಯಾವುದೇ ಅಪಪ್ರಚಾರ, ಹೇಳಿಕೆಯನ್ನು ಸಹಿಸಲಾಗದು. ದೇಶದ ವಿಚಾರ ಬಂದಾಗ ನಾವೆಲ್ಲಾ ಒಂದೇ. ಈಗಾಗಲೇ ತಿರಂಗಾ ಯಾತ್ರೆ ನಡೆಸಲಾಗಿದ್ದು, ಕೇಂದ್ರ ಸರಕಾರದ ಜತೆ ನಾವಿರುವುದನ್ನು ಸ್ಪಷ್ಟಪಡಿಸಲಾಗಿದೆ. ದೇಶದ ಏಕತೆ, ಭದ್ರತೆಗೆ ಚ್ಯುತಿ ತರುವ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕಲಾಗದು. ನಕಲಿ ಖಾತೆಗಳನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ರಾಜ್ಯ ಮಟ್ಟದಲ್ಲಿ ಈಗಾಗಲೇ ಗೃಹ ಸಚಿವರು ಸೈಬರ್ ಸೆಲ್ ಬಲಪಡಿಸುವುದು ಸಿಬ್ಬಂದಿ ಹೆಚ್ಚಳಕ್ಕೆ ಸಂಬಂಧಿಸಿ ನಿರ್ದೇಶನ ನೀಡಿದ್ದಾರೆ ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರಕಾರದ ಪ್ರತಿನಿಧಿಗಳ ಯಾರೂ ಅವರ ಮನೆಗೆ ಭೇಟಿ ನೀಡಿಲ್ಲ ಎಂಬ ಪ್ರಶ್ನೆಗೆ, ಸಚಿವ ದಿನೇಶ್ ಗುಂಡೂರಾವ್ ಅನೇಕ ಕೊಲೆ, ಹತ್ಯೆ ನಡೆಯುತ್ತದೆ. ಯಾವ ಕಾರಣಕ್ಕೆ ಆಗಿದೆ ತಿಳಿದು ಅದರ ಅನುಸಾರ ಸರಕಾರ ತನ್ನ ಜವಾಬ್ಧಾರಿ ನಿರ್ವಹಿಸುತ್ತದೆ. ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಶಿಕ್ಷಿಸುವುದು ಸರಕಾರದ ಆದ್ಯತೆ. ಈ ನಿಟ್ಟಿನಲ್ಲಿ ಪೊಲೀಸರು ಈಗಾಗಲೇ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್‌ಐಎಗೆ ವಹಿಸಬೇಕೆಂಬ ಒತ್ತಾಯದ ಬಗ್ಗೆ ಸರಕಾರ ತೀರ್ಮಾನಿಸಲಿದೆ. ಅದು ಗೃಹ ಇಲಾಖೆಗೆ ಸಂಬಂಧಿಸಿದ ವಿಚಾರ. ಆತನ ಕೊಲೆಯಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚಿ ಬಂಧಿಸುವ ಕಾರ್ಯ ಪೊಲೀಸ್ ಇಲಾಖೆ ಜವಾಬ್ಧಾರಿಯುತವಾಗಿ ನಡೆಸಿದೆ. ಪ್ರಕರಣಕ್ಕೆ ಸಂಬಂಧಿಸಿ ಎಲ್ಲಾ ಆಯಾಮಗಳಲ್ಲಿಯೂ ಪಾರದರ್ಶಕ ತನಿಖೆ ಮುಂದುವರಿದಿದೆ. ಹಾಗೆಂದು ಬಿಜೆಪಿಯವರ ಊಹಾಪೋಹ, ಕಪೋಲ ಕಲ್ಪಿತ ಹೇಳಿಕೆಗಳಿಗೆ ನಾನು ಉತ್ತರ ಕೊಡಲು ಆಗದು ಎಂದರು.

ಯಾವುದೇ ರೀತಿಯ ಸಾಕ್ಷ್ಯಗಳು ಇದ್ದಲ್ಲಿ ಅದನ್ನು ತನಿಖೆ ನಡೆಸುವವರಿಗೆ ಒಪ್ಪಿಸಲಿ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು.

ಗಡಿಯಲ್ಲಿನ ಪ್ರಕ್ಷ್ಯುಬ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮುಖ್ಯಮಂತ್ರಿ ನೇತೃತ್ವದಲ್ಲಿ ಪೊಲೀಸ್ ವರಿಷ್ಟರು, ಜಿಲ್ಲಾಧಿಕಾರಿಗಳ ಜತೆ ಈಗಾಗಲೇ ಸಭೆ, ಚರ್ಚೆ ನಡೆದಿದೆ. ಕೇಂದ್ರ ಸರಕಾರದ ಮಾರ್ಗಸೂಚಿಗಳ ಅನ್ವಯ ರಾಜ್ಯದಲ್ಲಿಯೂ ಅಗತ್ಯ ಭದ್ರತಾ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉಸ್ತುವಾರಿ ಸಚಿವರು ಉತ್ತರಿಸಿದರು.

ಶಾಸಕ ಹರೀಶ್ ಪೂಂಜಾ ಅವರ ಹೇಳಿಕೆ, ನಿಂದನೆಗೆ ಸಂಬಂಧಿಸಿ ಕಾನೂನಾತ್ಮಕವಾಗಿ ಕ್ರಮ ವಹಿಸಲಾಗಿದೆ. ಅವರು ಉಪಯೋಗಿಸುವ ಭಾಷೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ವೈಯಕ್ತಿಕ ಟೀಕೆಗೆ ನಾನು ಉತ್ತರಿಸುವುದಿಲ್ಲ. ಅದು ಅವರ ಕೀಳು ಅಭಿರುಚಿ, ಮನಸ್ಥಿತಿಗೆ ಪ್ರತ್ಯುತ್ತರ ನೀಡುವ ಅಗತ್ಯ ಇಲ್ಲ. ಅವರ ನಡವಳಿಕೆ ಅವರ ವ್ಯಕ್ತಿತ್ವಕ್ಕೆ ಕೈಗನ್ನಡಿ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X