Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕುಡುಪು ಗುಂಪು ಹತ್ಯೆ ಪ್ರಕರಣ | ಅಶ್ರಫ್...

ಕುಡುಪು ಗುಂಪು ಹತ್ಯೆ ಪ್ರಕರಣ | ಅಶ್ರಫ್ ಮೇಲೆ ಭಯಾನಕ ಹಲ್ಲೆಯಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು!

ದೇಹದ ವಿವಿಧೆಡೆ , ತಲೆ ಹಾಗು ಮೂತ್ರಪಿಂಡಕ್ಕೆ ಗಾಯದಿಂದಾಗಿ ಪ್ರಾಣ ಬಿಟ್ಟಿದ್ದ ಅಮಾಯಕ ಮಾನಸಿಕ ಅಸ್ವಸ್ಥ

ವಾರ್ತಾಭಾರತಿವಾರ್ತಾಭಾರತಿ25 July 2025 4:25 PM IST
share
ಕುಡುಪು ಗುಂಪು ಹತ್ಯೆ ಪ್ರಕರಣ | ಅಶ್ರಫ್ ಮೇಲೆ ಭಯಾನಕ ಹಲ್ಲೆಯಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಸಾಬೀತು!

ಮಂಗಳೂರು: ಕುಡುಪುವಿನಲ್ಲಿ ಗುಂಪಿನಿಂದ ಹತ್ಯೆಗೀಡಾಗಿದ್ದ ಕೇರಳದ ಮುಹಮ್ಮದ್ ಅಶ್ರಫ್ ಅವರನ್ನು ಕ್ರೂರವಾಗಿ ಹಲ್ಲೆಗೈದು ಹತ್ಯೆಗೈದಿರುವುದನ್ನು ಮರಣೋತ್ತರ ಪರೀಕ್ಷೆ ಮತ್ತು ವಿಧಿವಿಜ್ಞಾನ ವರದಿಗಳಲ್ಲಿ ಬಹಿರಂಗಗೊಂಡಿದೆ.

ಅವರನ್ನು ಕ್ರೂರವಾಗಿ ಹಲ್ಲೆಗೈದು ಕೊಲ್ಲಲಾಗಿರುವುದು ಆ ವರದಿಯಲ್ಲಿ ಸ್ಪಷ್ಟವಾಗಿ ಕಂಡುಬಂದಿದೆ. ದೇಹ ಮತ್ತು ತಲೆಗೆ ಆದ ತೀವ್ರ ಗಾಯಗಳ ಪರಿಣಾಮವಾಗಿ, ಮೆದುಳಿನಲ್ಲಿನ ರಕ್ತಸ್ರಾವ ಮತ್ತು ಮೂತ್ರಪಿಂಡಕ್ಕೆ ಆಗಿದ್ದ ಗಾಯದಿಂದಾಗಿ ಅಶ್ರಫ್ ಸಾವನ್ನಪ್ಪಿರುವುದಾಗಿ ವರದಿ ದೃಢಪಡಿಸಿದೆ.

ಹಲ್ಲೆಯಿಂದ ಕಿಡ್ನಿಗೆ ತೀವ್ರ ಹಾನಿಯಾಗಿದ್ದೂ ಸಾವಿಗೆ ಕಾರಣವಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮರಣೋತ್ತರ ಪರೀಕ್ಷೆಯನ್ನು ಎಪ್ರಿಲ್ 28 ರಂದು ವೆನ್ಲಾಕ್ ಆಸ್ಪತ್ರೆಯಲ್ಲಿ ದೇರಳಕಟ್ಟೆಯ ಕ್ಷೇಮಾ ಆಸ್ಪತ್ರೆಯ ಡಾ. ಮಹಾಬಲೇಶ್ ಶೆಟ್ಟಿ ಸೇರಿದಂತೆ ವಿಧಿವಿಜ್ಞಾನ ತಜ್ಞರ ಸಮ್ಮುಖದಲ್ಲಿ ನಡೆಸಲಾಗಿತ್ತು.

ಅಶ್ರಫ್ ಅವರ ದೇಹದ ಹಲವು ಭಾಗಗಳಲ್ಲಿ ತೀವ್ರವಾದ ಗಾಯಗಳು ಕಂಡುಬಂದಿವೆ. ಬೆನ್ನಿನ ಮೇಲ್ಭಾಗ ಮತ್ತು ಕೆಳಭಾಗದಲ್ಲಿಯೂ ಮತ್ತೆ ಮತ್ತೆ ಹೊಡೆಯಲಾಗಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿದೆ. ತಲೆಯ ಬಲ ಭಾಗದ ಕಪಾಳಭಿತ್ತಿಯಲ್ಲಿ ಊತವಿದ್ದುದು ಕಂಡುಬಂದಿದೆ. ಬಲ ಕಿವಿ, ಹಣೆಯ ಸುತ್ತ, ಬಲಗಣ್ಣಿನ ಕೆಳಗೆ, ಮೂಗು, ಎಡ ಕೆನ್ನೆ ಮತ್ತು ಒಳ ತುಟಿಯ ಮೇಲೆಯೂ ಏಟು ಬಿದ್ದ ಗುರುತುಗಳು ಕಂಡಿವೆ.

ಬಲಗಣ್ಣಿನ ಕೆಳಗೆ ಒಂದು ಸೀಳು ಕೂಡ ಪತ್ತೆಯಾಗಿದೆ. ಎದೆಯ ಎರಡೂ ಭಾಗಗಳಲ್ಲಿ ಮಾತ್ರವಲ್ಲದೆ, ಎಡ ಭುಜದ ಪ್ರದೇಶದ ಮೇಲೆಯೂ ಬಲವಾದ ಹೊಡೆತದ ಗುರುತುಗಳು ಕಂಡಿವೆ. ಬಲಗೈ, ಭುಜ, ಮುಂಗೈ ಮತ್ತು ಕೈಯ ಮೇಲೆ ದೊಡ್ಡ ಗಾಯಗಳು ಪತ್ತೆಯಾಗಿವೆ. ಮೊಣಕೈಯಲ್ಲಿ ಜಜ್ಜಿದಂತಾಗಿರುವುದೂ ಸೇರಿದಂತೆ ಎಡತೋಳು ಮತ್ತು ಕೈಯಲ್ಲಿಯೂ ಅಂಥದೇ ಗಾಯಗಳು ಕಂಡುಬಂದಿವೆ. ತೊಡೆಗಳು ಮತ್ತು ಮೊಣಕಾಲುಗಳೆರಡರಲ್ಲೂ ಬಲವಾದ ಏಟಿನ ಪರಿಣಾಮದ ಗಾಯಗಳು ಪತ್ತೆಯಾಗಿವೆ. ತಲೆಬುರುಡೆಯಲ್ಲಿ ಮೇಲ್ನೋಟಕ್ಕೆ ಮುರಿತ ಕಂಡುಬರದಿದ್ದರೂ, ಮೆದುಳಿನಲ್ಲಿ ರಕ್ತಸ್ರಾವವಾಗಿರುವುದು ಖಚಿತವಾಗಿದೆ.

ಎರಡೂ ಶ್ವಾಸಕೋಶಗಳು ಏಟಿನ ಪರಿಣಾಮವಾಗಿ ಜಜ್ಜಿದಂತಾಗಿರುವುದು ಮತ್ತು ರಕ್ತಸ್ರಾವದಂಥ ಲಕ್ಷಣಗಳನ್ನು ಪತ್ತೆ ಮಾಡಲಾಗಿದೆ. ಎರಡೂ ಮೂತ್ರಪಿಂಡಗಳಿಗೆ ತೀವ್ರ ಹಾನಿಯಾಗಿರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ.

ಲಿವರ್ ಬಲ ಭಾಗದಲ್ಲಿ ಕೂಡ ಹೊಡೆತದ ಪರಿಣಾಮ ಸ್ಪಷ್ಟವಾಗಿ ಕಂಡಿದೆ. ತೀವ್ರ ಗಾಯದ ಪರಿಣಾಮವಾಗಿ ಮೂತ್ರಪಿಂಡ ವೈಫಲ್ಯ ಸಂಭವಿಸಿದೆ. ಹೊಟ್ಟೆಯಲ್ಲಿ ಜೀರ್ಣವಾಗದ ಆಹಾರ ಮತ್ತು ಹಸಿರು, ಕಪ್ಪು ಮಿಶ್ರಿತ ದ್ರವ ಪತ್ತೆಯಾಗಿದೆ.

ಹಲ್ಲೆಗೆ ಬಳಸಲಾಗಿದೆ ಎಂದು ಶಂಕಿಸಲಾದ ನಾಲ್ಕು ಮರದ ಕೋಲುಗಳನ್ನು ಕೂಡ ವಿಧಿವಿಜ್ಞಾನ ಪರೀಕ್ಷೆಗೆ ಕಳಿಸಲಾಗಿತ್ತು. ಅಶ್ರಫ್ ದೇಹದ ಮೇಲೆ ಕಂಡುಬಂದ ಗಾಯಗಳ ಮಾದರಿ ಆ ಕೋಲುಗಳ ಗುಣಲಕ್ಷಣಗಳಿಗೆ ಹೊಂದಿಕೆಯಾಗುತ್ತದೆ ಎಂದು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯ ವಿಧಿವಿಜ್ಞಾನ ತಜ್ಞೆ ಡಾ. ರಶ್ಮಿ ಕೆಎಸ್ ಅವರು ವರದಿಯಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ಅಶ್ರಫ್ ಅವರ ದೇಹದಲ್ಲಿ ಯಾವುದೇ ವಿಷಕಾರಿ ವಸ್ತುಗಳು, ಔಷಧಗಳು, ಆಲ್ಕೋಹಾಲ್ ಅಥವಾ ಮಾದಕ ದ್ರವ್ಯಗಳು ಕಂಡುಬಂದಿಲ್ಲ ಎಂದು ವಿಷ ವಿಜ್ಞಾನ ಹಾಗು ಅಂಗಾಂಗ ಶಾಸ್ತ್ರ ವರದಿಗಳು ದೃಢಪಡಿಸಿವೆ.

ದೇಹದಾದ್ಯಂತ ಬಿದ್ದಿರುವ ಬಲವಾದ ಏಟುಗಳು ಮತ್ತು ತಲೆಗೆ ಆದ ಗಾಯದಿಂದಾಗಿ ಉಂಟಾದ ಆಂತರಿಕ ರಕ್ತಸ್ರಾವ ಮತ್ತು ಮೂತ್ರಪಿಂಡದ ಬಲವಾದ ಗಾಯ ಸಾವಿಗೆ ಕಾರಣವೆಂದು ಅಭಿಪ್ರಾಯಪಡಲಾಗಿದೆ.







share
ವಾರ್ತಾಭಾರತಿ
ವಾರ್ತಾಭಾರತಿ
Next Story
X