Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಾಂತಿ ಕದಡುವ ಪೋಸ್ಟ್ ಹಾಕುವುದರಿಂದ...

ಶಾಂತಿ ಕದಡುವ ಪೋಸ್ಟ್ ಹಾಕುವುದರಿಂದ ಪ್ರಗತಿ ಅಸಾಧ್ಯ: ಶರಣ್ ಪಂಪ್‌ವೆಲ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ2 Sept 2026 9:57 PM IST
share
ಶಾಂತಿ ಕದಡುವ ಪೋಸ್ಟ್ ಹಾಕುವುದರಿಂದ ಪ್ರಗತಿ ಅಸಾಧ್ಯ: ಶರಣ್ ಪಂಪ್‌ವೆಲ್ ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಸೆ.2: ಸಾಮಾಜಿಕ ಜಾಲತಾಣಗಳಲ್ಲಿ ಸೌಹಾರ್ದ ಕದಡುವ ಮತ್ತು ಅಶಾಂತಿ ಮೂಡಿಸುವಂತಹ ಪೋಸ್ಟ್ ಹಾಕುವುದರಿಂದ ಸಮಾಜದಲ್ಲಿ ಯಾವುದೇ ಪ್ರಗತಿ ಸಾಧಿಸಲು ಸಾಧ್ಯವಿಲ್ಲ ಎಂದು ತಿಳಿಸಿರುವ ರಾಜ್ಯ ಹೈಕೋರ್ಟ್ ಶರಣ್ ಪಂಪ್‌ವೆಲ್ ಸಲ್ಲಿಸಿದ ಅರ್ಜಿ ತೀರ್ಪು ಕಾಯ್ದಿರಿಸಿದೆ.

ರಸ್ತೆಯಲ್ಲಿ ನಮಾಝ್ ಮಾಡಿದ ಘಟನೆಗೆ ಸಂಬಂಧಿಸಿದಂತೆ 24 ಗಂಟೆಯಲ್ಲೇ ಬಿ ರಿಪೋರ್ಟ್ ಹಾಕಿದ ಪೊಲೀಸರ ಕ್ರಮ ಪ್ರಶ್ನಿಸಿ ಹಿಂದುತ್ವ ಸಂಘಟನೆಯ ಶರಣ್ ಪಂಪ್‌ವೆಲ್ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿದ್ದ. ಆ ಹಿನ್ನಲೆಯಲ್ಲಿ ವಿವಿಧ ಸಮುದಾಯಗಳ ನಡುವೆ ದ್ವೇಷ ಉತ್ತೇಜಿಸಿದ ಆರೋಪದಲ್ಲಿ ಮಂಗಳೂರು ನಗರದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನು ರದ್ದುಪಡಿಸಬೇಕು ಎಂದು ಶರಣ್ ಪಂಪ್‌ವೆಲ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಕಾಯ್ದಿರಿಸಿದೆ.

ಶರಣ್ ಪಂಪ್‌ವೆಲ್ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿ ರಸ್ತೆಯಲ್ಲಿ ನಮಾಝ್ ಮಾಡಿದ ಘಟನೆ ಬಗ್ಗೆ ಎಫ್‌ಐಆರ್ ದಾಖಲಿಸಿದ ಪೊಲೀಸರು ಆ ಪ್ರಕರಣ ಕುರಿತಂತೆ 24 ಗಂಟೆಯಲ್ಲಿ ವಿಚಾರಣಾ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಅದನ್ನು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ (ಫೇಸ್‌ಬಕ್) ಕಾಮೆಂಟ್ ಮಾಡಿ ಪೋಸ್ಟ್ ಹಾಕಿರುವುದಕ್ಕೆ ಶರಣ್ ಪಂಪ್‌ವೆಲ್ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದರು. ದೂರಿನಲ್ಲಿ ಹೇಳಲಾಗಿರುವ ಅಪರಾಧದ ಅಂಶಗಳು ಶರಣ್ ಪಂಪ್‌ವೆಲ್‌ಗೆ ಅನ್ವಯಿಸುವುದಿಲ್ಲ ಎಂದರು.

ಇದಕ್ಕೆ ಪ್ರತಿವಾದ ಸಲ್ಲಿಸಿದ ರಾಜ್ಯ ಸರಕಾರಿ ಅಭಿಯೋಜಕ ಬಿ.ಎನ್. ಜಗದೀಶ್, ಅರ್ಜಿದಾರರು ಸಾಮಾಜಿಕ ಅಶಾಂತಿ ಮೂಡಿಸುವ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ. ಇದರಿಂದ ಕೋಮು ಸೌಹಾರ್ದ ಹಾಗೂ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದರು.

ಶರಣ್ ಪಂಪ್‌ವೆಲ್ ಪರ ವಕೀಲರ ವಾದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು ಇದೆಲ್ಲ ಏಕೆ ಮಾಡುತ್ತಾರೆ? ಸೌಹಾರ್ದತೆಯನ್ನು ಯಾಕೆ ಕದುಡುವುದು? ಅವರ ಮೇಲೆ; ಇವರ ಮೇಲೆ ಯಾಕೆ ಕಾಮೆಂಟ್ ಮಾಡಬೇಕು? ಇದರಿಂದ ಯಾವ ಪ್ರಗತಿ ಸಾಧ್ಯವಾಗುತ್ತದೆ? ಪಟ್ಟಭದ್ರ ಹಿತಾಸಕ್ತಿಯಿಂದ ಅಥವಾ ಮತ್ತೊಂದು ಗಳಿಸಲು ಹೀಗೆ ಮಾಡಲಾಗುತ್ತದೆ ಅಷ್ಟೇ ಎಂದು ಬೇಸರ ವ್ಯಕ್ತಪಡಿಸಿದರು.

ನಾನು ಯಾವುದೇ ಸಮುದಾಯವನ್ನು ಉದ್ದೇಶಿಸಿ ಹೇಳುತ್ತಿಲ್ಲ. ಅನಾದಿ ಕಾಲದಿಂದ ಜನರು ತಮ್ಮದೇ ಆದ ಹಬ್ಬ-ಸಂಪ್ರದಾಯ ಆಚರಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಯಾಕೆ ಈಗ ಒಂದು ಸಮುದಾಯದ ಆಚರಣೆಯ ಬಗ್ಗೆ ಬೊಟ್ಟು ಮಾಡಿ ಹೇಳುವುದು? ಅರ್ಜಿದಾರರ ವಿರುದ್ಧ 20 ಕೇಸುಗಳು ದಾಖಲಾಗಿವೆ. ಯಾಕೆ ಇಷ್ಟು ಕೇಸ್‌ಗಳು ದಾಖಲಾಗಿವೆ‌ ? ಎಂದು ನ್ಯಾಯಾಧೀಶರು ಪ್ರಶ್ನಿಸಿದರು.

ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅರ್ಜಿ ಕುರಿತ ತೀರ್ಪು ಕಾಯ್ದಿರಿಸಿದರಲ್ಲದೆ, ಅರ್ಜಿದಾರರ ವಿರುದ್ಧದ ತನಿಖೆಗೆ ತಡೆ ನೀಡಿ ಹೊರಡಿಸಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ತೀರ್ಪು ಪ್ರಕಟಿಸುವವರೆಗೆ ಮುಂದುವರಿಸಿದರು.

Tags

postdisturb peaceprogress impossibleHigh CourtreservesSharan Pumpwellpetition
share
ವಾರ್ತಾಭಾರತಿ
ವಾರ್ತಾಭಾರತಿ
Next Story
X