Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿ.28-29ರಂದು ಬೀಚ್ ಉತ್ಸವಕ್ಕೆ...

ಡಿ.28-29ರಂದು ಬೀಚ್ ಉತ್ಸವಕ್ಕೆ ಸಿದ್ಧತೆ: ಮುಲ್ಲೈ ಮುಗಿಲನ್

ಸೂಕ್ತ ಪಾರ್ಕಿಂಗ್ ವ್ಯವಸ್ಥೆಗೆ ಕ್ರಮ: ಅನುಪಮ್ ಅಗ್ರವಾಲ್

ವಾರ್ತಾಭಾರತಿವಾರ್ತಾಭಾರತಿ26 Dec 2024 2:09 PM IST
share
ಡಿ.28-29ರಂದು ಬೀಚ್ ಉತ್ಸವಕ್ಕೆ ಸಿದ್ಧತೆ: ಮುಲ್ಲೈ ಮುಗಿಲನ್

ಮಂಗಳೂರು, ಡಿ. 26: ಕರಾವಳಿ ಉತ್ಸವದ ಅಂಗವಾಗಿ ತಣ್ಣೀರುಬಾವಿ ಬೀಚ್‌ನಲ್ಲಿ ಡಿ. 28 ಮತ್ತು 29ರಂದು ಆಯೋಜಿಸಲಾಗಿರುವ ಬೀಚ್ ಉತ್ಸವಕ್ಕೆ ಸಿದ್ಧತೆ ನಡೆಸಲಾಗಿದ್ದು, ಸ್ಥಳೀಯ ಕಲಾವಿದರ ಕಲಾ ಪ್ರದರ್ಶನದೊಂದಿಗೆ ಉತ್ಸವಕ್ಕೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಡಿ. 28ರಂದು 6.30ಕ್ಕೆ ವಿಧಾನಸಭೆ ಸ್ಪೀಕರ್ ಬೀಚ್ ಉತ್ಸವವನ್ನು ಅಧಿಕೃತವಾಗಿ ಉದ್ಘಾಟಿಸುವರು ಎಂದರು.

7.30ರಿಂದ ಕದ್ರಿ ಮಣಿಕಂಠರವರಿಂದ ಕಾರ್ಯಕ್ರಮ ನಡೆಯಲಿದ್ದು, ವಿವಿಧ ರೀತಿಯ ಜಲ ಸಾಹಸ ಕ್ರೀಡೆಗಳು ಹಾಗೂ ಆಹಾರ ಮಳಿಗೆಗಳು ಪ್ರವಾಸಿಗರು ಸೇರಿದಂತೆ ವರ್ಷಾಂತ್ಯವನ್ನು ಸಂಭ್ರಮಿಸಲು ಭೇಟಿ ನೀಡುವ ಸ್ಥಳೀಯರಿಗೆ ಎಲ್ಲಾ ರೀತಿಯ ಮನರಂಜನೆಯನ್ನು ಒದಗಿಸಲಿದೆ ಎಂದು ಅವರು ಹೇಳಿದರು.

ಬೀಚ್ ಉತ್ಸವ ಸಮಿತಿಯ ಅಧ್ಯಕ್ಷರೂ ಹಾಗೂ ಪೊಲೀಸ್ ಆಯುಕ್ತರೂ ಆಗಿರುವ ಅನುಪಮ್ ಅಗ್ರವಾಲ್ ಮಾತನಾಡಿ, ಬೀಚ್ ಉತ್ಸವ ನಡೆಯಲಿರುವ ತಣ್ಣೀರುಬಾವಿ ರಸ್ತೆಯುದ್ದಕ್ಕೂ ನಿಲ್ಲಿಸಲಾಗುವ ಘನ ವಾಹನಗಳನ್ನು ಉತ್ಸವದ ದಿನಗಳಂದು ತೆರವುಗೊಳಿಸಲು ಸೂಚಿಸಲಾಗಿದೆ. ಬೀಚ್‌ನ ದಾರಿಯಲ್ಲಿ ಐದಾರು ಕಡೆಗಳಲ್ಲಿ ದ್ವಿಚಕ್ರ, ಚತುಷ್ಚಕ್ರ ಹಾಗೂ ಇತರ ವಾಹನಗಳ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

ಸುಲ್ತಾನ್ ಬತ್ತೇರಿಯಿಂದ ತಣ್ಣೀರುಬಾವಿಗೆ ಉತ್ಸವದ ದಿನಗಳಲ್ಲಿ ಫೆರ್ರಿ ಸೇವೆಯನ್ನು ಹೆಚ್ಚುಗೊಳಿಸಲು ಕ್ರಮ ವಹಿಸಲಾಗಿದೆ. ಫೆರ್ರಿಯಲ್ಲಿ ಆಗಮಿಸುವವರಿಗೆ ಅಲ್ಲಿಂದ ತಣ್ಣೀರುಬಾವಿವರೆಗಿನ ಸುಮಾರು ಒಂದು ಕಿ.ಮೀ. ರಸ್ತೆಗೆ ಮಿನಿ ಬಸ್ ಸೇವೆ ಒದಗಿಸಲು ಕ್ರಮ ವಹಿಸಲಾಗಿದೆ. ಉತ್ಸವದ ಸಂದರ್ಭ ಬೀಚ್‌ನಲ್ಲಿ ಹೆಚ್ಚಿನ ಸಿಬ್ಬಂದಿ ಮೂಲಕ ಭದ್ರತಾ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮುಡಾ ಆಯುಕ್ತೆ ನೂರ್ ಜಹರಾ ಖಾನಂ, ವಾರ್ತಾಧಿಕಾರಿ ಖಾದರ್ ಷಾ ಉಪಸ್ಥಿತರಿದ್ದರು.

ವರ್ಷಾಂತ್ಯದಲ್ಲಿ ಊರ ಹಾಗೂ ಪರವೂರವರು ಸೇರಿದಂತೆ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಈ ಬೀಚ್ ಉತ್ಸವದೊಂದಿಗೆ ಕರಾವಳಿ ಉತ್ಸವವನ್ನು ವಾರ್ಷಿಕ ಕಾರ್ಯಕ್ರಮವಾಗಿ ನಿರಂತರವಾಗಿ ಮುಂದುವರಿಸುವ ನಿಟ್ಟಿನಲ್ಲಿ ಜಿಲ್ಲೆಯ ಜನರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕರೆ ನೀಡಿದರು.

ಮಂಗಳೂರು ನಗರ ವೇಗವಾಗಿ ಬೆಳೆಯುತ್ತಿದ್ದು, ನಗರಕ್ಕೆ ಪ್ರವಾಸಿಗರನ್ನು ಆಕರ್ಷಿಸುವ ಹಾಗೂ ಬ್ರಾಂಡ್ ಮಂಗಳೂರು ಆಗಿ ನಗರವನ್ನು ಪ್ರೋತ್ಸಾಹಿಸುವ ಈ ಬೀಚ್ ಉತ್ಸವಕ್ಕೆ ಬೆಂಬಲ ನೀಡಲಾಗುತ್ತಿದೆ ಎಂದು ಬೀಚ್ ಉತ್ಸವದ ಪ್ರಾಯೋಜಕತ್ವ ವಹಿಸಿರುವ ರೋಹನ್ ಕಾರ್ಪೊರೇಶನ್ ಮುಖ್ಯಸ್ಥ ರೋಹನ್ ಮೊಂತೆರೋ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X