Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಶೆ ಮುಕ್ತ ಮಂಗಳೂರು ಕನಸು ನನಸಾಗಿಸಲು...

ನಶೆ ಮುಕ್ತ ಮಂಗಳೂರು ಕನಸು ನನಸಾಗಿಸಲು ಆದ್ಯತೆ: ಅನುಪಮ್ ಅಗರ್ವಾಲ್

ಮಂಗಳೂರು ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕಾರ

ವಾರ್ತಾಭಾರತಿವಾರ್ತಾಭಾರತಿ7 Sept 2023 1:54 PM IST
share
ನಶೆ ಮುಕ್ತ ಮಂಗಳೂರು ಕನಸು ನನಸಾಗಿಸಲು ಆದ್ಯತೆ: ಅನುಪಮ್ ಅಗರ್ವಾಲ್

ಮಂಗಳೂರು, ಸೆ. 6: ಬೇರೆ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಸಂದರ್ಭ ಇಲ್ಲಿನ ಡ್ರಗ್ಸ್ ಸಮಸ್ಯೆಯ ಬಗ್ಗೆ ಕೇಳಿದ್ದೇನೆ. ಹಿಂದಿನ ಕಮಿಷನರ್ ಕುಲದೀಪ್ ಕುಮಾರ್ ಅವರು ಕೂಡಾ ಈ ದಿಸೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಡ್ರಗ್ಸ್ ಮುಕ್ತ ಮಂಗಳೂರು ಅಭಿಯಾನ ಯಶಸ್ವಿ ಕಾಣುತ್ತಿದ್ದು, ನಶೆ ಮುಕ್ತ ಮಂಗಳೂರು ಕನಸು ನನಸು ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಈ ಅಭಿಯಾನವನ್ನು ಮುಂದುವರಿಸುವ ಭರವಸೆಯನ್ನು ನೀಡುವುದಾಗಿ ನೂತನ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಾರೆ.

ನಿರ್ಗಮನ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರಿಂದ ಗುರುವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದ ಅನುಪಮ್ ಅಗರ್ವಾಲ್ ಬಳಿಕ ಸುದ್ದಿಗಾರರ ಜತೆ ಈ ಅನಿಸಿಕೆ ಹಂಚಿಕೊಂಡರು.

ಕರ್ನಾಟಕ ಪೊಲೀಸರಿಗೆ ಮತ್ತೊಂದು ಪ್ರಮುಖ ಸೂಕ್ಷ್ಮ ವಿಚಾರ ಅನೈತಿಕ ಪೊಲೀಸ್‌ಗಿರಿ. ಈ ಭಾಗದಲ್ಲಿ ಸಮಸ್ಯೆ ಹೆಚ್ಚಿರುವ ಬಗ್ಗೆ ಅರಿವಿದೆ. ಪೊಲೀಸರು ಈಗಾಗಲೇ ಈ ಬಗ್ಗೆ ಹಲವು ಕ್ರಮಗಳನ್ನು ಕೈಗೊಂಡಿದ್ದು, ಅನೈತಿಕ ಪೊಲೀಸ್‌ಗಿರಿಯಲ್ಲಿ ತೊಡಗುವವರ ವಿರುದ್ಧ ಕಠಿಣ ಕ್ರಮಗಳ ಮೂಲಕ ಕಾನೂನಿನ ನೈಜ ಮುಖವನ್ನು ತೋರಿಸಲಿದ್ದೇವೆ ಎಂದರು. ಮತೀಯ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ವಹಿಸಲಿದ್ದೇವೆ ಎಂದರು.

ಅನೈತಿಕ ಪೊಲೀಸ್‌ಗಿರಿ ಕೃತ್ಯಗಳಿಗೆ ಯಾರು ಮುಂದಾಗುತ್ತಾರೆ ಮತ್ತು ಅವರಿಗೆ ಬೆನ್ನ ಹಿಂದೆಯಿಂದ ಯಾರೂ ಬೆಂಬಲ ನೀಡುತ್ತಾರೆಯೋ ಅವರ ಬಗ್ಗೆ ತುರ್ತಾಗಿ ಕಾನೂನಿನಡಿ ಕೈಗೊಳ್ಳಬಹುದಾದ ಕ್ರಮಗಳನ್ನು ವಹಿಸಲಾಗುವುದು. ಸಾಮಾನ್ಯವಾಗಿ ಇಂತಹ ಕೃತ್ಯಗಳು ನಡೆದಾಗ ತಡವಾಗಿ ಕ್ರಮ ವಹಿಸಲು ಮುಂದಾದಾಗ ಅವರಿಗೆ ಪ್ರೋತ್ಸಾಹ ದೊರಕಿದಂತಾಗುತ್ತದೆ. ಅದಕ್ಕೆ ಅವಕಾಶ ನೀಡದೆ ಕ್ರಮ ವಹಿಸಲಾಗುವುದು. ರಾಜ್ಯದಲ್ಲಿಯೇ ಮಂಗಳೂರು ಅತ್ಯಂತ ಮಹತ್ವ ಹಾಗೂ ಸೂಕ್ಷ್ಮ ಪ್ರದೇಶವಾಗಿ ಗುರುತಿಸಿಕೊಂಡಿದೆ. ಹಾಗಾಗಿ ಇಲ್ಲಿ ಕೆಲಸಮಾಡುವಾಗ ನಮ್ಮ ಹೆಚ್ಚುವರಿ ಪ್ರಯತ್ನವನ್ನು ಹಾಕಬೇಕಾಗುತ್ತದೆ. ನನಗೆ ಈಗ ಇಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಬೀಟ್ ವ್ಯವಸ್ಥೆಯೊಂದಿಗೆ ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲಾಗುವುದು. ಈ ನಿಟ್ಟಿನಲ್ಲಿ ಜನರು ಸಮಸ್ಯೆಗಳನ್ನು ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ನಮ್ಮ ಗಮನಕ್ಕೆ ತರುವ ನಿಟ್ಟಿನಲ್ಲಿ ಒತ್ತು ನೀಡಲಾಗುವುದು. ರೆಗ್ಯುಲರ್ ಪೊಲೀಸಿಂಗ್ ಜತೆಗೆ, ಜೂಜಾಟ, ಸಣ್ಣಪುಟ್ಟ ಇತರ ಅಕ್ರಮ ಚಟುವಟಿಕೆಗಳ ಬಗ್ಗೆಯೂ ಹೆಚ್ಚಿನ ಗಮನ ನೀಡಲಾಗುವುದು. ಫೋನ್ ಇನ್ ಕಾರ್ಯಕ್ರಮದ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಹಿಂದಿನ ಕಮಿಷನರ್ ಅವರು ಟ್ರಾಫಿಕ್ ಸಮಸ್ಯೆಗಳಿಗೂ ಹೆಚ್ಚಿನ ಒತ್ತು ನೀಡಿರುವುದು ಗಮನದಲ್ಲಿದ್ದು, ಅಂತಹ ಜಸನ್ನೇಹಿ ಕಾರ್ಯಕ್ರಮಗಳನ್ನು ಮುಂದುವರಿಸುವುದಾಗಿ ಹೇಳಿದರು.

ಡಿಸಿಪಿಗಳಾದ ದಿನೇಶ್ ಕುಮಾರ್, ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.


‘‘ನನ್ನ ಕೆಲಸ ಕಾರ್ಯದಲ್ಲಿ ಯಾವುದೇ ಒತ್ತಡವಿಲ್ಲದೆ ಸಂತಸದಿಂದ ಎಲ್ಲವನ್ನೂ ನಿಭಾಯಿಸಿದ್ದೇನೆ. ನನಗೆ ಯಾವ ಕೆಲಸ ಮಾಡಲು ಸಾಧ್ಯ ಅದನ್ನು ಚೆನ್ನಾಗಿ ನಿರ್ವಹಿಸಿದ್ದೇನೆ. ನನ್ನ ತಂಡ, ಅಧಿಕಾರಿಗಳು ಸಹಕಾರ ಹಾಗೂ ಜನರಿಂದಲೂ ಬೆಂಬಲ ದೊರಕಿದೆ. ಕಡಿಮೆ ಕಾಲಾವಕಾಶದಲ್ಲೂ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸಿ ಸಾರ್ವಜನಿಕರು ನಮ್ಮನ್ನು ಮೇಲಿನ ಜನರ ನಂಬಿಕೆಯನ್ನೂ ಉಳಿಸಿಕೊಳ್ಳಬೇಕಾಗಿದೆ. ಅದರಂತೆ ಕರ್ತವ್ಯ ನಿರ್ವಹಿಸಿರುವ ಖುಷಿ ಇದೆ. ಜನರ ಸೇವೆಗಾಗಿ ನಾವು ಬಂದಿರುವುದು. ಅದು ಅವರಿಗೆ ತಲುಪಿದೆ. ಅದರಿಂದ ಜನರಿಗೆ ಖುಷಿ ಆಗಿದೆ ಎಂದಾದರೆ ಅದು ನಮ್ಮ ಪ್ರೋತ್ಸಾಹವನ್ನು ಇಮ್ಮಡಿಸಿದಂತೆ.’’

- ಕುಲದೀಪ್ ಕುಮಾರ್ ಆರ್. ಜೈನ್, ನಿರ್ಗಮಿತ ಪೊಲೀಸ್ ಕಮಿಷನರ್, ಮಂಗಳೂರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X