Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮುನೀರ್ ಕಾಟಿಪಳ್ಳ, ಅಬ್ದುಲ್ ಸಲಾಮ್...

ಮುನೀರ್ ಕಾಟಿಪಳ್ಳ, ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಖಾಸಗಿ ದೂರು, ಎಫ್ ಐ ಆರ್ : ಸಿಪಿಐ(ಎಂ) ತೀವ್ರ ಖಂಡನೆ

ವಾರ್ತಾಭಾರತಿವಾರ್ತಾಭಾರತಿ23 May 2025 2:35 PM IST
share
ಮುನೀರ್ ಕಾಟಿಪಳ್ಳ, ಅಬ್ದುಲ್ ಸಲಾಮ್ ಪುತ್ತಿಗೆ ವಿರುದ್ಧ ಖಾಸಗಿ ದೂರು, ಎಫ್ ಐ ಆರ್ : ಸಿಪಿಐ(ಎಂ) ತೀವ್ರ ಖಂಡನೆ

ಮಂಗಳೂರು: ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ಮತ್ತು ವಾರ್ತಾ ಭಾರತಿಯ ಪ್ರಧಾನ ಸಂಪಾದಕ ಅಬ್ದುಲ್ ಸಲಾಮ್ ಪುತ್ತಿಗೆ ಇವರ ವಿರುದ್ಧ ಪುತ್ತೂರು ವೈದ್ಯಕೀಯ ಸಂಘ (ಐಎಂಎ)ದ ಕಾರ್ಯದರ್ಶಿ ಯವರಿಂದ ನ್ಯಾಯಾಲಯದ ಮೂಲಕ ಎಫ್ ಐ ಆರ್ ದಾಖಲಾತಿಯು ಹತಾಶೆಯ ಪರಮಾವಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಧೋರಣೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷ ದ.ಕ ಜಿಲ್ಲಾ ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಸಿಪಿಐ(ಎಂ), ಕೋಮುವಾದಿ ಮನೋಭಾವ ಹೊಂದಿರುವ ವೈದ್ಯರುಗಳ ಸಂಘದ ಪದಾಧಿಕಾರಿಗಳು, ಮುನೀರ್ ಕಾಟಿಪಳ್ಳ ಅವರು ನಡೆಸಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧದ ನಿರಂತರ ಹೋರಾಟವನ್ನು ಸೆದೆಬಡಿಯಲು ಮತ್ತು ಪುತ್ತೂರು ಸಾರ್ವಜನಿಕ ಆಸ್ಪತ್ರೆಯ ಘಟನೆಗೆ ಸಂಬಂಧಿಸಿ ಕೋಮು ಧ್ರುವೀಕರಣದ ಹೋರಾಟದಲ್ಲಿ ವೈದ್ಯರುಗಳ ಕಳಂಕ ಪೂರಿತ ಪಾತ್ರವನ್ನು ಬಹಿರಂಗಗೊಳಿಸಿರುವುದರ ವಿರುದ್ಧ ಈ ಸುಳ್ಳು ದೂರು ನೀಡಲಾಗಿದೆ ಎಂದು ಟೀಕಿಸಿದೆ.

ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಇದರ ಘಟಕ ಕಾರ್ಯದರ್ಶಿಯವರು ಪ್ರಾರಂಭದಲ್ಲಿ ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ, ಅದರಲ್ಲಿ ಸತ್ಯಾಂಶ ಇಲ್ಲವೆಂದು ಹಿಂಬರಹ ದೊರೆತ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಮಾಡಿ ವೈದ್ಯಕೀಯ ವೃತ್ತಿಯ ಘನತೆ, ಗೌರವಕ್ಕೆ ಧಕ್ಕೆ ತರುವ ರೀತಿಯಲ್ಲಿ ಖಾಸಗಿ ದೂರು ನೀಡಿ ಆ ಮೂಲಕ ತನ್ನ ಕುಕೃತ್ಯದ ಬೇಳೆ ಬೇಯಿಸುವ ಹುನ್ನಾರವನ್ನು ಪಕ್ಷ ಬಲವಾಗಿ ವಿರೋಧಿಸುತ್ತದೆ. ಎಲ್ಲಾ ರೀತಿಯಿಂದಲೂ ಇದರ ವಿರುದ್ಧ, ಕಾನೂನಾತ್ಮಕವಾಗಿ ಮತ್ತು ಸಂಘಟಿತ ಜನಾಂದೋಲನ, ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಸಂಘದ ಕಾರ್ಯದರ್ಶಿ ಡಾ. ಗಣೇಶ್ ಪ್ರಸಾದ್ ಮುದ್ರಾಜೆಯವರ ಬಗ್ಗೆ ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಕೋಮು ವಿಷ ಬೀಜ ಬಿತ್ತುವ ಪ್ರವೃತ್ತಿಯ ವಿರುದ್ಧ ಜನರಲ್ಲಿ ವ್ಯಾಪಕ ಅಸಮಾಧಾನವಿದೆ. ಪಕ್ಷವು, ವೈದ್ಯಕೀಯ ರಂಗವನ್ನು ಕೋಮುವಾದದಿಂದ ಮಲಿನಗೊಳಿಸುತ್ತಿರುವ ಶಕ್ತಿಗಳ ವಿರುದ್ಧ ದೃಢವಾದ ಹೋರಾಟ ನಡೆಸಲಿದೆ. ಕೋಮು ಶಕ್ತಿಗಳೊಂದಿಗೆ ಪುತ್ತೂರು ವೈದ್ಯರ ಸಂಘದ ನಾಯಕತ್ವ ಹೊಂದಿರುವ ಅನೈತಿಕ ಮೈತ್ರಿಯನ್ನು ಬಹಿರಂಗಪಡಿಸಲಿದೆ. ಮುನೀರ್ ಕಾಟಿಪಳ್ಳ ಅವರ ಮೇಲಿನ ದುರುದ್ದೇಶಪೂರಿತ ಎಫ್‍ಐಆರ್ ವಿರುದ್ಧ ಕಾನೂನು ಸಮರ ನಡೆಸಲು ನಿರ್ಧರಿಸಿದೆ.

ಪುತ್ತೂರು ವೈದ್ಯಕೀಯ ಸಂಘ ಮತ್ತು ಮಂಗಳೂರು ಶಾಖೆಗಳು ಈ ಬಗ್ಗೆ ನೀಡಿರುವ ಪತ್ರಿಕಾ ಹೇಳಿಕೆಗಳು‌, ಸರ್ವಾಧಿಕಾರಿ ಮತ್ತು ಗೂಂಡಾಗಿರಿ ಮಾದರಿಯ ದಬ್ಬಾಳಿಕೆ ಹಾಗೂ ಬ್ಲಾಕ್‌ಮೇಲ್ ಮಾಡಿ ಸಾರ್ವಜನಿಕರನ್ನು ನಿಯಂತ್ರಿಸುವ ಉದ್ದೇಶವನ್ನು ಹೊಂದಿದೆ. ಕರ್ನಾಟಕ ಸರಕಾರ ಜಾರಿಗೆ ತಂದಿರುವ ವೈದ್ಯಕೀಯ ಸೇವಾ ಸುರಕ್ಷಾ ಕಾನೂನನ್ನು ದುರ್ಬಳಕೆ ಮಾಡಲಾಗಿದ್ದು, ಈ ಬಗ್ಗೆ ಪ್ರತಿಭಟಿಸಲಾಗುವುದು. ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸೇರಿ ಖಂಡನಾ ಸಭೆ, ಜನಾಂದೋಲನ ನಡೆಸಲು ನಿರ್ಧರಿಸಲಾಗಿದೆ.

ವೈದ್ಯಕೀಯ ಸಂಘ ಪುತ್ತೂರು ಮತ್ತು ಮಂಗಳೂರು ಶಾಖೆಗಳ ವಿರುದ್ಧ ಅವರ ಸಂಘದ ವೈದ್ಯಕೀಯ ನೊಂದಾವಣೆ ರದ್ದು ಮಾಡಲು ಸಂಬಂಧಿಸಿ ಕೇಂದ್ರ ಸಮಿತಿಗೆ ದಾಖಲೆಗಳ ಸಹಿತ ವಿವರವಾದ ಮನವಿ ಸಲ್ಲಿಸಲು ಸಿಪಿಐ(ಎಂ) ಪಕ್ಷ ತೀರ್ಮಾನಿಸಿದೆ.

ವೈದ್ಯರ ಸಂಘಗಳು ವೈದ್ಯಕೀಯ ಕ್ಷೇತ್ರದ ಘನತೆಯನ್ನು, ಅದರ ಆದರ್ಶಗಳನ್ನು ಎತ್ತಿ ಹಿಡಿಯುವ ಜವಾಬ್ದಾರಿಯನ್ನೂ ಹೊಂದಿದೆ. ಆದರೆ, ಪುತ್ತೂರು ಹಾಗೂ ಮಂಗಳೂರು ಘಟಕಗಳು ಈ ಕುರಿತು ಯಾವುದೇ ಸಂದರ್ಭದಲ್ಲಿ ಚಕಾರ ಎತ್ತಿದ್ದನ್ನು ಯಾರೂ ಕಂಡಿಲ್ಲ. ವೈದ್ಯಕೀಯ ಕ್ಷೇತ್ರದ ಕಾರ್ಪೊರೇಟೀಕರಣ ದ.ಕ.ಜಿಲ್ಲೆಯಲ್ಲಿ ಉಂಟು ಮಾಡಿರುವ ತಲ್ಲಣಗಳ ಕುರಿತು, ಮುನೀರ್ ಕಾಟಿಪಳ್ಳ ವಿರುದ್ಧ ಸಮರ ಸಾರಿರುವ ವೈದ್ಯರ ಸಂಘದ ಪ್ರಮುಖರು ಒಂದು ಹೇಳಿಕೆಯನ್ನೂ ಈವರಗೆ ನೀಡಿಲ್ಲ. ವೈದ್ಯಕೀಯ ಕ್ಷೇತ್ರದಿಂದ ತೊಂದರೆಗೊಳಗಾದ ಸಂತ್ರಸ್ತರು ನ್ಯಾಯಕ್ಕಾಗಿ ಧ್ವನಿ ಎತ್ತುವುದನ್ನು ಹತ್ತಿಕ್ಕುವುದರಲ್ಲಷ್ಟೇ ವೈದ್ಯರ ಸಂಘದ ಈಗಿನ ನಾಯಕತ್ವ ತೊಡಗಿಸಿಕೊಂಡಿದೆ. ಮುನೀರ್ ಕಾಟಿಪಳ್ಳರ ಮೇಲಿನ ಮೊಕದ್ದಮೆಯು ಈ ಹಿನ್ನಲೆಯನ್ನು ಹೊಂದಿದೆ. ಈ ಎಲ್ಲಾ ಆಯಾಮಗಳನ್ನು ಒಳಗೊಂಡು ಪಕ್ಷವು, ವೈದ್ಯರ ಸಂಘದ ದಬ್ಬಾಳಿಕೆ ಮತ್ತು ಸುಳ್ಳು ಮೊಕದ್ದಮೆಯ ವಿರುದ್ಧ ಬಲವಾದ ಹೋರಾಟ ನಡೆಸಲಿದೆ ಎಂದು ಸಿಪಿಐ(ಎಂ) ದ.ಕ.ಜಿಲ್ಲಾ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X