ಪ್ರೊ.ಪಟ್ಟಾಭಿರಾಮ ಸೋಮಯಾಜಿ ನಿಧನ

ಮಂಗಳೂರು, ಜು.1: ಚಿಂತಕ, ಲೇಖಕ, ನಿವೃತ್ತ ಉಪನ್ಯಾಸಕ ಪ್ರೊ.ಪಟ್ಟಾಭಿರಾಮ ಸೋಮಯಾಜಿ(65) ಶನಿವಾರ ಮುಂಜಾವ ನಿಧನರಾಗಿದ್ದಾರೆ.
ನಗರದ ದೇರೇಬೈಲು ಕೊಂಚಾಡಿಯ ಗಿರಿನಗರದಲ್ಲಿರುವ ಮನೆಯಲ್ಲಿ ಒಂಟಿಯಾಗಿದ್ದ ಅವರು ಮೃತಪಟ್ಟಿರುವುದು ಇಂದು ಬೆಳಗ್ಗೆ ತಿಳಿದುಬಂದಿದೆ.
ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿನ ನಿವೃತ್ತ ಉಪನ್ಯಾಸಕರಾಗಿದ್ದ ಪಟ್ಟಾಭಿರಾಮ ಸೋಮಯಾಜಿ ಕೋಮು ಸೌಹಾರ್ದ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು.
Next Story