ದ.ಕ. ಜಿಲ್ಲಾದ್ಯಂತ ಮೇ 5ವರೆಗೆ ನಿಷೇಧಾಜ್ಞೆ ಜಾರಿ

ಮಂಗಳೂರು ನಗರ
ಮಂಗಳೂರು: ಬಜ್ಪೆಯಲ್ಲಿ ಕಳೆದ ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬಳಿಕ ಮಂಗಳೂರು ಕಮಿಷನರೇಟ್ ವ್ಯಾಪ್ತಿಗೆ ಸೀಮಿತವಾಗಿ ಜಾರಿಗೊಳಿಸಲಾಗಿದ್ದ ನಿಷೇಧಾಜ್ಞೆಯನ್ನು ದಕ್ಷಿಣ ಕನ್ನಡ ಜಿಲ್ಲಾದ್ಯಂತ ವಿಸ್ತರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಮೇ 5ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.
ಬಜ್ಪೆ ಪರಿಸರದಲ್ಲಿ ನಡೆದ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ 5ರವರೆಗೆ ದ.ಕ. ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ಈ ಮಧ್ಯೆ ಸಂಘ ಪರಿವಾರದ ಕರೆಯ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಬಹುತೇಕ ಅಂಗಡಿಮುಂಗಟ್ಟುಗಳು ಮುಚ್ಚಿವೆ. ಅಟೋ ರಿಕ್ಷಾ ಹಾಗೂ ಖಾಸಗಿ ವಾಹನಗಳ ಹೊರತಾಗಿ ಇತರ ವಾಹನಗಳ ಸಂಚಾರ ಬಹುತೇಕ ಸ್ಥಗಿತಗೊಂಡಿದೆ.
Next Story