Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಾಸ್ಟೆಲ್, ಕಾಲೇಜು ಲೈಬ್ರರಿಗಳಲ್ಲಿ...

ಹಾಸ್ಟೆಲ್, ಕಾಲೇಜು ಲೈಬ್ರರಿಗಳಲ್ಲಿ ಸಂವಿಧಾನ ಕೃತಿ ಒದಗಿಸಿ: ಸಮಾಜ ಕಲ್ಯಾಣ ಇಲಾಖೆಗೆ ಸ್ಪೀಕರ್ ಯು.ಟಿ.ಖಾದರ್ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ26 Nov 2025 2:33 PM IST
share
UT Khader spoke at the inauguration of the Constitution Day celebration program.

ಮಂಗಳೂರು, ನ.26: ಜಿಲ್ಲೆಯ ಎಲ್ಲಾ ವಿದ್ಯಾರ್ಥಿ ನಿಲಯಗಳು ಹಾಗೂ ಸರಕಾರಿ ಕಾಲೇಜುಗಳ ಗ್ರಂಥಾಲಯದಲ್ಲಿ ಸಂವಿಧಾನ ಕೃತಿ ಲಭ್ಯವಾಗುವಂತೆ ಮಾಡಿ ಮಕ್ಕಳು ಅದನ್ನು ಓದುವಂತೆ ಪ್ರೋತ್ಸಾಹಿಸಬೇಕು ಎಂದು ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್ ನಿರ್ದೇಶನ ನೀಡಿದ್ದಾರೆ.

ಉರ್ವಾಸ್ಟೋರ್‌ನ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬುಧವಾರ ಸಂವಿಧಾನ ದಿನಾಚರಣೆಯ ಪ್ರಯುಕ್ತ ಆಯೋಜಿಸಲಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಯಾರು ಇತಿಹಾ ತಿಳಿಯುತ್ತಾರೆಯೋ ಅವರಿಂದ ಇತಿಹಾಸ ನಿರ್ಮಾಣ ಸಾಧ್ಯವಾಗುತ್ತದೆ. ಇತಿಹಾಸ ನಿರ್ಮಾಮದ ವ್ಯಕ್ತಿತ್ವ ಬರಬೇಕಾದರೆ ಇತಿಹಾಸವನ್ನು ಕಲಿತುಕೊಳ್ಳುವುದು ಅಗತ್ಯ. ದೇಶದ ರೈತರು, ಬಡವರು, ಕಾರ್ಮಿಕರು, ಮಹಿಳೆಯರು, ನಿರ್ಗತಿಕರು, ವಿದ್ಯಾರ್ಥಿಗಳು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಿರ್ಭೀತಿಯಿಂದ ಓಡಾಡಲು ಕಾರಣ ಸಂವಿಧಾನ ನಮಗೆ ನೀಡಿರುವ ಹಕ್ಕುಗಳು. ಆ ಹಕ್ಕುಗಳನ್ನು ಅರಿತುಕೊಂಡು ಸಮಾಜ ಹಾಗೂ ದೇಶದ ಒಳಿತಿಗೆ ಪೂರಕವಾಗಿ ಅವುಗಳನ್ನು ಬಳಸಿಕೊಳ್ಳಬೇಕಾಗಿದೆ. ಅದಕ್ಕಾಗಿ ಸಂವಿಧಾನವನ್ನು ಅರಿತುಕೊಳ್ಳುವುದು ಬಹು ಮುಖ್ಯ ಎಂದವರು ಹೇಳಿದರು.

ದೇಶದಲ್ಲಿ ಯಾವುದೇ ಸರಕಾರ ಆಡಳಿತದಲ್ಲಿದ್ದರೂ ಸಂವಿಧಾನದ ತತ್ವಕ್ಕೆ ಅನುಗುಣವಾಗಿ ಕಾರ್ಯ ನಿರ್ವಹಿಸಿದಾಗ ದೇಶ ಬಲಿಷ್ಟವಾಗುತ್ತದೆ. ಸಂವಿಧಾನವನ್ನು ಅರ್ಥ ಮಾಡಿಕೊಳ್ಳುವ ಜತೆಗೆ ಮಹಾತ್ಮ ಗಾಂಧಿ ಹಾಗೂ ಬಿ.ಆರ್. ಅಂಬೇಡ್ಕರ್ ಓದಿದರೆ ವಿದ್ಯಾರ್ಥಿಗಳು ಭವಿಷ್ಯದ ಸತ್ಪ್ರಜೆಗಳಾಗಲು ಸಾಧ್ಯ. ಇಂದು ಅತ್ಯಧಿಕ ಶಿಕ್ಷಣ ಪಡೆದವರೇ ಭ್ರಷ್ಟಾಚಾರ, ಉಗ್ರ ಹಣೆಪಟ್ಟಿಯನ್ನು ಕಟ್ಟಿಕೊಳ್ಳುವಂತಾಗಿದೆ. ಇದಕ್ಕೆ ಕಾರಣ ಈ ಮಹಾತ್ಮರ ಜತೆಗೆ ಸಂವಿಧಾನದ ಪುಸ್ತಕಗಳನ್ನು ಓದಲು ಅವಕಾಶ ನೀಡದಿರುವುದು ಎಂದವರು ಹೇಳಿದರು.

ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ ಇದೆ ಎಂಬ ಕಾರಣಕ್ಕೆ ನಾವು ಬಾಯಿಗೆ ಬಂದಂತೆ ಮಾತನಾಡುದಲ್ಲ. ಇಂತಹ ಅಸಂಬಂಧ ಮಾತುಗಳಿಂದಲೇ ಇಂದು ಸಮಸ್ಯೆಗಳು ಸೃಷ್ಟಿಯಾಗಿ ಅವುಗಳನ್ನು ಬಗೆಹರಿಸುವುದರಲ್ಲಿಯೇ ಕಾಲಹರಣವಾಗುತ್ತಿದೆ. ನಾವು ಆಡುವ ಹಾಗೂ ಮಾಡುವ ಪ್ರತಿಯೊಂದು ಮಾತು ಹಾಗೂ ಕಾರ್ಯಗಳು ದೇಶದ ಹಿತರಕ್ಕೆ ಪೂರಕವಾಗಿದ್ದರೆ ದೇಶ ಪ್ರಪಂಚದಲ್ಲಿಯೇ ಮೊದಲ ಸ್ಥಾನದಲ್ಲಿರಲಿದೆ. ಆ ಜವಾಬ್ಧಾರಿಯುತ ಕೆಲಸವನ್ನು ನಾವು ಮಾಡಬೇಕು ಎಂದು ಕಾರ್ಯಕ್ರಮದಲ್ಲಿ ಸೇರಿದ್ದ ವಿದ್ಯಾರ್ಥಿಗಳು ಹಾಗೂ ಅಧಿಕಾರಿ ವರ್ಗಕ್ಕೆ ಕಿವಿಮಾತು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಸಂವಿಧಾನ ದಿನಾಚರಣೆಯ ಅಂಗವಾಗಿ ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಭಾಷಣ, ಚಿತ್ರಕಲೆ ಹಾಗೂ ಫೋಟೋಗ್ರಫಿ ಸ್ಪರ್ಧೆಗಳ ವಿಜೇತರಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ಸಭಾ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾ ಪಂಚಾಯತ್ ಆವರಣದಿಂದ ಡಾ. ಅಂಬೇಡ್ಕರ್ ಭವನದವರೆಗೆ ‘ಸಂವಿಧಾನ ಜಾಥಾ’ ನಡೆಯಿತು. ಭಾರತ ಮಾತೆ, ಕೈಯ್ಯಲ್ಲಿ ಸಂವಿಧಾನ ಹಿಡಿದ ಅಂಬೇಡ್ಕರ್, ಮಹಾತ್ಮಗಾಂಧಿ ಸಹಿತ ಹಿರಿಯ ಸ್ವಾತಂತ್ರ್ಯ ಹೋರಾಟಗಾರರ ಪಾತ್ರಗಳೊಂದಿಗೆ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದ್ದರು.

ಸಭಾ ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಒ ವಿನಾಯಕ ನರ್ವಾಡೆ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರನಾಥ ಗಟ್ಟಿ, ಉಪ ವಿಭಾಗಾಧಿಕಾರಿ ಮೀನಾಕ್ಷಿ ಆರ್ಯ, ಗೋಕರ್ಣನಾಥ ಕಾಲೇಜು ಪ್ರಾಂಶುಪಾಲ ರಘುರಾಜ್ ಕದ್ರಿ ಉಪಸ್ಥಿತರಿದ್ದರು.

ಆರಂಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಅವರು ಸಂವಿಧಾನ ಪೀಠಿಕೆಯ ಪ್ರತಿಜ್ಞೆ ಬೋಧಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಡಾ. ಹೇಮಲತಾ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X