Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಲಾನುಭವಿಗಳಿಗೆ ಸೌಲಭ್ಯಗಳನ್ನು ಸುಲಭವಾಗಿ...

ಫಲಾನುಭವಿಗಳಿಗೆ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಿ: ಬ್ಯಾಂಕ್‌ಗಳಿಗೆ ಸಂಸದ ಬ್ರಿಜೇಶ್ ಚೌಟ ನಿರ್ದೇಶನ

ವಾರ್ತಾಭಾರತಿವಾರ್ತಾಭಾರತಿ10 Sept 2024 5:58 PM IST
share
ಫಲಾನುಭವಿಗಳಿಗೆ ಸೌಲಭ್ಯಗಳನ್ನು ಸುಲಭವಾಗಿ ಒದಗಿಸಿ: ಬ್ಯಾಂಕ್‌ಗಳಿಗೆ ಸಂಸದ ಬ್ರಿಜೇಶ್ ಚೌಟ ನಿರ್ದೇಶನ

ಮಂಗಳೂರು: ಸರಕಾರದಿಂದ ಒದಗಿಸಲಾಗುವ ಸಬ್ಸಿಡಿ, ವಿವಿಧ ಯೋಜನೆಗಳು ಫಲಾನುಭವಿಗಳಿಗೆ ಸುಲಭವಾಗಿ ಸಿಗುವಂತಾಗಬೇಕು. ಅದಕ್ಕಾಗಿ ಅವರನ್ನು ಅಲೆದಾಡುವಂತೆ ಮಾಡಬಾರದು ಎಂದು ಸಂಸದ ಬ್ರಿಜೇಶ್ ಚೌಟರವರು ದ.ಕ. ಜಿಲ್ಲೆಯ ಬ್ಯಾಂಕ್‌ಗಳಿಗೆ ನಿರ್ದೇಶನ ನೀಡಿದ್ದಾರೆ.

ದ.ಕ. ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿ ಜಿಲ್ಲಾ ಬ್ಯಾಂಕ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯೋಜನೆಗಳನ್ನು ಪಡೆಯಲು ಫಲಾನುಭವಿಗಳು ಬ್ಯಾಂಕ್‌ಗೆ ಬಂದಾಗ ಅವರನ್ನು ಮುಕ್ತ ಮನದಿಂದ ಸ್ವಾಗತಿಸಿ, ಯೋಜನೆಗಳ ಬಗ್ಗೆ ಅರ್ಥ ಮಾಡಿಸಿ ಮನವರಿಕೆ ಮಾಡುವ ಕಾರ್ಯವನ್ನು ಬ್ಯಾಂಕ್‌ನ ಅಧಿಕಾರಿ ಸಿಬ್ಬಂದಿ ಮಾಡಬೇಕು. ಎಸ್‌ಸಿ ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ವಿಶೇಷ ಒತ್ತು ನೀಡಿ ಯೋಜನೆಗಳನ್ನು ಫಲಪ್ರದಗೊಳಿಸಲು ಆಸಕ್ತಿ ವಹಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ಬ್ಯಾಂಕ್‌ಗಳು ತಮ್ಮ ಅಧಿಕಾರಿ ಹಾಗೂ ಸಿಬ್ಬಂದಿಗೆ ಸ್ಥಳೀಯ ಭಾಷೆ, ಸಂಸ್ಕೃತಿಯ ಬಗ್ಗೆ ಆಸಕ್ತಿ, ಗೌರವ ಇರುವುದನ್ನು ಖಾತರಿಪಡಿಸಬೇಕು. ಬ್ಯಾಂಕ್‌ಗಳು ತಮ್ಮ ಸಿಎಸ್‌ಆರ್ ಚಟುವಟಿಕೆಗಳಿಗೆ ಒತ್ತು ನೀಡಬೇಕು ಎಂದು ಸಂಸದರು ಬ್ಯಾಂಕ್ ಅಧಿಕಾರಿಗಳಿಗೆ ಸಲಹೆ ನೀಡಿದರು.

ಜೀವನ್‌ ಜ್ಯೋತಿ ಬಿಮಾ ಯೋಜನೆ, ಪಿಎಂ ಸ್ವ ನಿಧಿ ಯೋಜನೆ ಬಗ್ಗೆ ಬಗ್ಗೆ ಗ್ರಾಹಕರಿಗೆ ಜಾಗೃತಿ ಮೂಡಿಸಿ ಹೆಚ್ಚಿನ ಸಂಖ್ಯೆ ಯಲ್ಲಿ ಈ ಯೋಜನೆಯ ಪ್ರಯೋಜನ ಪಡೆಯಲು ಬ್ಯಾಂಕ್‌ಗಳು ಆಸಕ್ತಿ ವಹಿಸಬೇಕು. ಎಂದು ಜಿ.ಪಂ. ಸಿಇಒ ಡಾ. ಆನಂದ್ ನಿರ್ದೇಶನ ನೀಡಿದರು.

ಸ್ಟ್ಯಾಂಡ್ ಅಪ್ ಯೋಜನೆಯಡಿ ಜಿಲ್ಲೆಯ ವಿವಿಧ ಬ್ಯಾಂಕ್‌ಗಳಿಗೆ ಪ್ರಸಕ್ತ ಸಾಲಿಗೆ ಒಟ್ಟು 1300 ಗುರಿ ನೀಡಲಾಗಿದ್ದರೂ ಈವರೆಗೆ ಕೇವಲ 8 ಅರ್ಜಿಗಳು ಮಾತ್ರ ಸ್ವೀಕೃತವಾಗಿರುವ ಬಗ್ಗೆ ಸಂಸದ ಬ್ರಿಜೇಶ್ ಚೌಟ ಅಸಮಾಧಾನ ವ್ಯಕ್ತಪಡಿಸಿದರು.

ಪ್ರಧಾನ ಮಂತ್ರಿ ಜೀವನ್ ಬಿಮಾ ಯೋಜನೆಯಡಿ ಎಪ್ರಿಲ್ 2024ರಿಂದ ಜೂನ್ 2024ರವರೆಗೆ 6679 ಮಂದಿಯನ್ನು ನೋಂದಣಿ ಮಾಡಲಾಗಿದೆ. ಅಟಲ್ ಪಿಂಚಣಿ ಯೋಜನೆಯಡಿ ಈ ಅವಧಿಯಲಿಲ 12761, ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 18531 ಮಂದಿಯನ್ನು ನೋಂದಣಿ ಮಾಡಿರುವುದಾಗಿ ದ.ಕ. ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಕವಿತಾ ಶೆಟ್ಟಿ ವಿವರ ನೀಡಿದರು.

ಮುದ್ರಾ ಯೋಜನೆಯಡಿ ಈ ಅವಧಿಯಲ್ಲಿ 15239 ಖಾತೆಗಳಲ್ಲಿ 193.87 ಕೋಟಿ ರೂ. ಸಾಲ ವಿತರಣೆ ಮಾಡಲಾಗಿದೆ. ಜನಧನ್ ಯೋಜನೆಯಡಿ 16163 ಖಾತೆಗಳನ್ನು ತೆರೆಯಲಾಗಿದೆ. ಪಿಎಂ ಸ್ವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಆಗಸ್ಟ್ 31ರವರೆಗೆ ಪ್ರಥಮ ಹಂತದಲ್ಲಿ 12209, ದ್ವಿತೀಯ ಹಂತದಲ್ಲಿ 3449 ಹಾಗೂ ತೃತೀಯ ಹಂತದಲ್ಲಿ 1340 ಮಂದಿಗೆ ಸಾಲ ಮಂಜೂರಾಗಿದೆ ಎಂದು ಅವರು ವಿವರ ನೀಡಿದರು.

ಕೃಷಿ ಕ್ಷೇತ್ರದಲ್ಲಿ ಕಳೆದ ವರ್ಷವೂ ಜಿಲ್ಲೆಯು ತನ್ನ ಗುರಿ ಮೀರಿ ಸಾಧನೆ ಮಾಡಿದೆ ಎಂದು ನಬಾರ್ಡ್ ಡಿಜಿಎಂ ಸಂಗೀತ ತಿಳಿಸಿದರು. ಆರ್‌ಬಿಐ ಎಜಿಎಂ ಅರುಣ್ ಕುಮಾರ್ ಉಪಸ್ಥಿತರಿದ್ದರು.

ಪಿಎಂಇಜಿಪಿಯಡಿ ಸಬ್ಸಿಡಿಗೆ ವಿಳಂಬ

ಪ್ರಧಾನ ಮಂತ್ರಿಯವರ ಉದ್ಯೋಗ ಸೃಷ್ಟಿ ಕಾರ್ಯಕ್ರಮ (ಪಿಎಂಇಜಿಪಿ) ದಡಿ ಕಿರು ಮತ್ತು ಮಧ್ಯಮ ಕೈಗಾರಿಕಾ ಚಚುವಟಿಕೆಗಳಿಗೆ ಸಾಲ ಪಡೆದು ಮರುಪಾವತಿಸಿದ್ದರೂ ನೂರಾರು ಉದ್ದಿಮೆದಾರರಿಗೆ ಸಿಗಬೇಕಾಗಿರುವ ಸಬ್ಸಿಡಿ ಹಲವು ವರ್ಷಗಳಿಂದ ದೊರೆತಿಲ್ಲ ಎಂಬ ಮಾಹಿತಿ ಬಗ್ಗೆ ಸಂಸದ ಬ್ರಿಜೇಶ್ ಚೌಟ ಕಳವಳ ವ್ಯಕ್ತಪಡಿಸಿದರು.

2019ರಿಂದೀಚೆಗೆ ಪಿಎಂಇಜಿಪಿಯಡಿ ಸಾಲ ಪಡೆದವರು ಮರುಪಾವತಿ ಮಾಡಿದ್ದರೂ ಸಬ್ಸಿಡಿ ದೊರಕಿಲ್ಲ. ಇದರಿಂದಾಗಿ ಈ ಉದ್ದಿಮೆದಾರರು ಬೇರೆ ಯಾವುದೇ ರೀತಿಯ ಸಾಲ ಪಡೆಯಲು ಸಾಧ್ಯವಾಗದೆ ಉದ್ಯಮವನ್ನೇ ಮುಚ್ಚುವಂತಹ ಸ್ಥಿತಿಯೂ ಎದುರಾಗಿದೆ ಎಂದು ಸಭೆಯಲ್ಲಿ ಸಂಸದರ ಆಪ್ತ ಸಹಾಯಕರೊಬ್ಬರು ಮಾಹಿತಿ ನೀಡಿದರು.

ಸಾಲ ಪಡೆಯುವ ಉದ್ದಿಮೆದಾರರಿಗೆ ಅವರ ಖಾತೆಗೆ ಸಬ್ಸಿಡಿ ಹಣವನ್ನು ವರ್ಗಾಯಿಸಲಾಗುತ್ತದೆ. ಆದರೆ ಸಾಲ ಮರು ಪಾವತಿ ಬಳಿಕ ತರ್ಡ್ ಪಾರ್ಟಿಯ ಪರಿಶೀಲನೆ ಆಗಬೇಕಾಗುತ್ತದೆ. ಹಿಂದೆ ಜೆನೆಸಿಸ್ ಸಂಸ್ಥೆ ನಡೆಸುತ್ತಿದ್ದ ಪರಿಶೀಲನೆಯನ್ನು ಇದೀಗ ಕೇಂದ್ರ ಸರಕಾರವು ಪೋಸ್ಟಲ್ ಇಲಾಖೆಗೆ ವರ್ಗಾಯಿಸಿದೆ. ಎಲ್ಲಾ ರಾಜ್ಯಗಳಲ್ಲೂ ಇದೀಗ ಈ ಬಗ್ಗೆ ಪ್ರಕ್ರಿಯೆಗಳು ನಡೆಯುತ್ತಿದ್ದು ಇದರಿಂದಾಗಿ ಸಬ್ಸಿಡಿ ವಿತರಣೆ ವಿಳಂಬವಾಗಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರಗಳ ಸಹಾಯಕ ವ್ಯವಸ್ಥಾಪಕ ಅನಿಲ್‌ಕುಮಾರ್ ಮಾಹಿತಿ ನೀಡಿದರು.

ಕಳೆದ ಒಂದೂವರೆ ವರ್ಷದಿಂದ ಈ ಸಮಸ್ಯೆಯಾಗುತ್ತಿದ್ದರೂ ಇದನ್ನು ಸಂಬಂಧಪಟ್ಟವರ ಗಮನಕ್ಕೆ ತಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದ ಬ್ರಿಜೇಶ್ ಚೌಟ, ಇಂತಹ ಸಮಸ್ಯೆಗಳ ಕುರಿತಂತೆ ಅಧಿಕಾರಿಗಳು ಸೂಕ್ತ ಸಮಯ ದಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿ ಬಗೆಹರಿಸಲು ಸಹಕರಿಸಬೇಕು ಎಂದು ತಾಕೀತು ಮಾಡಿದರು.

Tags

Provide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X