Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾದಕ ವ್ಯಸನ, ಸೈಬರ್ ಕ್ರೈಮ್ ವಿರುದ್ಧ...

ಮಾದಕ ವ್ಯಸನ, ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ29 Jan 2026 12:44 PM IST
share
ಮಾದಕ ವ್ಯಸನ, ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ

ಮಂಗಳೂರು, ಜ.28: ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ, ಮಂಗಳೂರು ನಗರ ಪೊಲೀಸ್ ಹಾಗೂ ರೋಶನಿ ನಿಲಯ ವಿದ್ಯಾಸಂಸ್ಥೆಗಳ ಸಹಯೋಗದಲ್ಲಿ ಸ್ಟೇಟ್ ಬ್ಯಾಂಕ್‌ನ ಕೇಂದ್ರ ಬಸ್ ನಿಲ್ದಾಣದ ಬಳಿ ಬುಧವಾರ ಮಾದಕ ದ್ರವ್ಯ ವ್ಯಸನ ಹಾಗೂ ಸೈಬರ್ ಕ್ರೈಮ್ ವಿರುದ್ಧ ಜನಜಾಗೃತಿ ಕಾರ್ಯಕ್ರಮ ನಡೆಯಿತು. ಮಂಗಳೂರು ನಗರ ಉಪ ಪೊಲೀಸ್ ಆಯುಕ್ತ ಪಿ. ಉಮೇಶ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಮಾರಂಭದಲ್ಲಿ ಎಸಿಪಿ ರವೀಶ್ ನಾಯ್ಕ್ ಮಾತನಾಡಿ, ಮಾದಕ ದ್ರವ್ಯ ಬಳಕೆಯಿಂದ ಸಮಾಜದ ಮೇಲೆ ಬೀರುವ ದುಷ್ಪರಿಣಾಮಗಳ ಕುರಿತು ವಿವರಿಸಿದರು. ಮಾದಕ ದ್ರವ್ಯ ಸೇವನೆ ಒಂದು ಗಂಭೀರ ಪಿಡುಗಾಗಿದ್ದು, ಮಕ್ಕಳು ಅಥವಾ ಯುವಕರು ಈ ವ್ಯಸನಕ್ಕೆ ಒಳಗಾಗಿರುವ ಕುರಿತು ಪೊಲೀಸರ ಬಳಿ ಬಂದಲ್ಲಿ, ಅವರ ಮಾಹಿತಿಯನ್ನು ಗೌಪ್ಯವಾಗಿಟ್ಟುಕೊಂಡು ಚಿಕಿತ್ಸೆಗಾಗಿ ಸಹಾಯ ಮಾಡಲಾಗುತ್ತದೆ ಎಂದರು. ನಗರದಲ್ಲಿ ಮಾದಕ ಪದಾರ್ಥಗಳ ಪೂರೈಕೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹೇಳಿದರು.

ಇದೇ ವೇಳೆ ಸೈಬರ್ ಕ್ರೈಮ್ ಇತ್ತೀಚಿನ ದಿನಗಳಲ್ಲಿ ವ್ಯಾಪಕವಾಗುತ್ತಿದೆ ಎಂದು ಎಚ್ಚರಿಸಿದ ಅವರು, ಸಾರ್ವಜನಿಕರು ಭಯಪಡದೆ ಧೈರ್ಯದಿಂದ ಎದುರಿಸಬೇಕು ಹಾಗೂ ಪೊಲೀಸರ ಸಹಾಯ ಪಡೆಯಬೇಕು ಎಂದು ಸಲಹೆ ನೀಡಿದರು. ಇದುವರೆಗೆ ಮಂಗಳೂರಿನಲ್ಲಿ ಸೈಬರ್ ಕ್ರೈಮ್ ಸಂಬಂಧ 6,500ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಮಾಹಿತಿ ನೀಡಿದರು.

ಲೋನ್ ಆ್ಯಪ್, ಗೇಮ್ ಆ್ಯಪ್ ಮೂಲಕ ಹಣ ವಂಚಿಸುವ ಜಾಲಗಳು, ಬ್ಲಾಕ್‌ಮೇಲ್, ಡಿಜಿಟಲ್ ಅರೆಸ್ಟ್, ಪೊಲೀಸ್ ವೇಷ ಧರಿಸಿ ಕರೆ ಮಾಡಿ ವಂಚಿಸುವ ಪ್ರಕರಣಗಳು ಹೆಚ್ಚಾಗಿವೆ. ಇದರಿಂದ ಅನೇಕ ಜನರ ಜೀವನಪೂರ್ತಿ ಉಳಿತಾಯ ನಷ್ಟವಾಗುತ್ತಿದೆ. ಈ ರೀತಿಯ ಸಮಸ್ಯೆ ಎದುರಾದರೆ 1930 ಸಂಖ್ಯೆಗೆ ಕರೆ ಮಾಡಿ ಪೊಲೀಸರ ಸಹಾಯ ಪಡೆಯಬಹುದು. ಇಂತಹ ಅನುಮಾನಾಸ್ಪದ ಕರೆಗಳ ಬಗ್ಗೆ ಆತ್ಮೀಯರೊಂದಿಗೆ ಚರ್ಚಿಸಿ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು.

ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಅವರು ಮಾದಕ ವ್ಯಸನದ ದುಷ್ಪರಿಣಾಮಗಳ ಕುರಿತು ಮಾಹಿತಿ ನೀಡಿದರು. ರೋಶನಿ ನಿಲಯ ಸಮಾಜಕಾರ್ಯ ಕಾಲೇಜಿನ ಉಪನ್ಯಾಸಕರಾದ ಸ್ಯಾಂಡ್ರೊ ಲೋಬೊ, ಸಾರಿಕಾ ಅಂಕಿತ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ ಅವರು ಜಾಗೃತಿ ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳು ಬೀದಿ ನಾಟಕದ ಮೂಲಕ ಜನಜಾಗೃತಿ ಮೂಡಿಸಿದರು.

ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾದಕ ದ್ರವ್ಯ ವ್ಯಸನದ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರೋಶನಿ ನಿಲಯದ ವಿದ್ಯಾರ್ಥಿಗಳು ವಿವಿಧ ಕಡೆ ಬೀದಿ ನಾಟಕ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಸಿಪಿ ಪ್ರತಾಪ್ ಸಿಂಗ್ ಥೋರಟ್, ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್., ದಕ್ಷಿಣ ಕನ್ನಡ ಬಸ್ ಮಾಲಕರ ಸಂಘದ ಪೂರ್ವಾಧ್ಯಕ್ಷ ಜಯರಾಮ ಶೇಖ್, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಜೊತೆ ಕಾರ್ಯದರ್ಶಿ ರಾಜೇಶ್ ಟಿ., ಕೋಶಾಧಿಕಾರಿ ಜೊಯೆಲ್ ದಿಲ್‌ರಾಜ್ ಫೆರ್ನಾಂಡೀಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್ ವಂದಿಸಿದರು.

Tags

Public awarenessdrug addictioncybercrime
share
ವಾರ್ತಾಭಾರತಿ
ವಾರ್ತಾಭಾರತಿ
Next Story
X