Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು ಯುವತಿಗೆ ವಂಚನೆ ಪ್ರಕರಣ |...

ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಆರೋಪಿಯ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ

ವಾರ್ತಾಭಾರತಿವಾರ್ತಾಭಾರತಿ2 Jan 2026 3:40 PM IST
share
ಪುತ್ತೂರು ಯುವತಿಗೆ ವಂಚನೆ ಪ್ರಕರಣ | ಆರೋಪಿಯ ಜಾಮೀನು ರದ್ದುಗೊಳಿಸಲು ಅರ್ಜಿ: ಪ್ರತಿಭಾ ಕುಳಾಯಿ
"ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ"

ಮಂಗಳೂರು, ಜ.2: ಪುತ್ತೂರಿನಲ್ಲಿ ಯುವತಿಗೆ ಮಗು ಕರುಣಿಸಿ ಮದುವೆಗೆ ನಿರಾಕರಿಸುತ್ತಿರುವ ಆರೋಪಿ ಕೃಷ್ಣ ಜೆ. ರಾವ್‌ಗೆ ಕೋರ್ಟ್‌ನಿಂದ ನೀಡಲಾಗಿರುವ ಜಾಮೀನನ್ನು ರದ್ದುಗೊಳಿಸಲು ಅರ್ಜಿ ಸಲ್ಲಿಸಲಾಗುವುದು. ಸಂಧಾನದ ಬಾಗಿಲು ಮುಚ್ಚಿದ್ದು, ಜ. 24ರಂದು ಕಲ್ಲಡ್ಕದಲ್ಲಿ ಪ್ರತಿಭಟನಾರ್ಥವಾಗಿ ಮಗುವಿಗೆ ನಾಮಕರಣ ಶಾಸ್ತ್ರ ನಡೆಸುವುದಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸದಸ್ಯೆ ಪ್ರತಿಭಾ ಕುಳಾಯಿ ಹೇಳಿದ್ದಾರೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಅನ್ಯಾಯಕ್ಕೊಳಗಾದ ಯುವತಿ, ಮಗು ಹಾಗೂ ಯುವತಿಯ ಪೋಷಕರ ಜತೆ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಡಿಎನ್‌ಎ ಪರೀಕ್ಷೆಯಲ್ಲಿ ಸಂತ್ರಸ್ತೆಯು ಮಗುವಿನ ತಂದೆ ಕೃಷ್ಣ ಜೆ.ರಾವ್ ಎಂಬುದು ಸಾಬೀತಾದರೂ ಅವರು ಈಕೆಯನ್ನು ಮದುವೆಯಾಗಲು ಒಪ್ಪುತ್ತಿಲ್ಲ. ಬದಲಾಗಿ 50 ಲಕ್ಷ ರೂ.ಗಳ ಪರಿಹಾರ ನೀಡಿ ಸಂಧಾನ ಮಾತುಕತೆಗೆ ಮುಂದಾಗಿದ್ದಾರೆ. ಇದಕ್ಕೆ ಯುವತಿಯಾಗಲಿ ಆಕೆಯ ಕುಟುಂಬವಾಗಲಿ ಒಪ್ಪುವುದಿಲ್ಲ. ಅವರಿಗೆ ಬೆಂಬಲವಾಗಿ ಸಮಾಜದ ಎಲ್ಲಾ ವರ್ಗದ ಜನ ಅವರ ಜತೆಗಿದೆ ಎಂದರು.

ಕೃಷ್ಣ ಜೆ. ರಾವ್ ಯುವತಿ ಜತೆ ವಿವಾಹ ಆಗಿ ಆ ಮಗುವಿಗೆ ತಂದೆಯ ಸ್ಥಾನಮಾನ ನೀಡುವ ಆಶಾಭಾವನೆ ಯೊಂದಿಗೆ ಆತನಿಗೆ ಜಾಮೀನು ದೊರಕಿ ಆತ ಆರಾಮವಾಗಿ ಓಡಾಡಿಕೊಂಡಿದ್ದರೂ ನಾವು ಈವರೆಗೆ ಸುಮ್ಮನಿದ್ದೆವು. ಆತನ ತಾಯಿ ನನ್ನ ಮೇಲೆ ಹಾಗೂ ಯುವತಿಯ ತಾಯಿ ಮೇಲೆ ಮಾನ ಹರಾಜು ಪ್ರಕರಣ ದಾಖಲಿಸಿದ್ದಾರೆ. ಆದರೆ ವಾಸ್ತವದಲ್ಲಿ ಇಲ್ಲಿ ಓರ್ವ ಯುವತಿ ಮತ್ತು ಆಕೆಯ ಕಟುಂಬದವರ ಮಾನ ಹರಾಜು ಹಾಕಲಾಗಿದೆ ಎಂದವರು ಹೇಳಿದರು.

ಕರಾವಳಿಯಲ್ಲಿ ಹಿಂದು ಸಮಾಜದ ಬಗ್ಗೆ ಮುಖಂಡರು, ರಾಜಕೀಯ ನೇತಾರರು ಒಗ್ಗಟ್ಟಿನ ಬಗ್ಗೆ ಮಾತನಾಡುತ್ತಾರೆಯೇ ವಿನಃ ಇಂತಹ ಸನ್ನಿವೇಶದಲ್ಲಿ ಸಿಲುಕಿದವರನ್ನು ಪಾರು ಮಾಡುವ ಬಗ್ಗೆ ನೆರವಿಗೆ ಧಾವಿಸುತ್ತಿಲ್ಲ. ಹಾಗಾಗಿ ನಾವು ಬೇರೆ ಸಮುದಾಯದವರನ್ನೂ ಧ್ವನಿ ಎತ್ತಲು ಆಹ್ವಾನಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ರಾಜಕೀಯ ಹಾಗೂ ಸಂಘಟನಾತ್ಮಕವಾಗಿ ಶಕ್ತಿ ಕೇಂದ್ರ ಆಗಿರುವ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರ ಊರಿನಿಂದಲೇ ಹೋರಾಟ ಆರಂಭಿಸುತ್ತಿದ್ದೇನೆ. ಇದೇ ಕಾರಣಕ್ಕೆ ಜನವರಿ 24 ರಂದು ಕಲ್ಲಡ್ಕದಲ್ಲೇ ಮಗುವಿಗೆ ನಾಮಕರಣ ಶಾಸ್ತ್ರ ನೆರವೇರಿಸುವುದಾಗಿ ಪ್ರತಿಭಾ ಕುಳಾಯಿ ಹೇಳಿದರು.

ಮಗುವಿನ ತಂದೆ ಕೃಷ್ಣ ಜೆ.ರಾವ್ ಯಾವ ಕಾರಣಕ್ಕೆ ಯುವತಿಯನ್ನು ತಿರಸ್ಕರಿಸುತ್ತಿದ್ದಾನೆ ಎಂದು ಅರ್ಥವಾಗುತ್ತಿಲ್ಲ. ಎಂಟು ವರ್ಷಗಳಿಂದ ಪರಸ್ಪರ ಪ್ರೀತಿಸಿ ಅರ್ಥಮಾಡಿಕೊಂಡಿದ್ದ ಇವರಿಬ್ಬರ ಸರಸದಲ್ಲಿ ಮಗು ಜನಿಸಿದ ಬಳಿಕ ಮತ್ತೆ ಆಕೆಯನ್ನು ದೂರ ಮಾಡುವುದರಲ್ಲಿ ಅರ್ಥ ಇಲ್ಲ. ಆಕೆ ಯಾವುದೇ ಕಾರಣಕ್ಕೂ ಅಬಲೆ ಅಲ್ಲ, ಆಕೆಯೂ ನಿತ್ಯವೂ ನೊಂದುಕೊಳ್ಳುತ್ತಿದ್ದು, ಆತ್ಮಹತ್ಯೆಗೂ ಯೋಚಿಸಿದ್ದಾಳೆ. ಅವಳ ಬದುಕಿಗೆ ನಾವೆಲ್ಲ ಬೆಂಬಲವಾಗಿ ನಿಲ್ಲುತ್ತಿದ್ದು, ಮುಂದೆ ಕೋರ್ಟ್ ತೀರ್ಮಾನಕ್ಕೆ ಬದ್ಧವಾಗಿ ಮುಂದುವರಿಯುತ್ತೇವೆ ಎಂದು ಪ್ರತಿಭಾ ಕುಳಾಯಿ ಹೇಳಿದರು.

ಪುತ್ತಿಲ ಪೂಜಾ ಕಲ್ಯಾಣ ಮಾಡಿಸಲಿ

ಪುತ್ತೂರಿನ ಅರುಣ್ ಕುಮಾರ್ ಪುತ್ತಿಲರ ಬಗ್ಗೆ ನನಗೆ ತುಂಬಾ ಗೌರವ ಇದೆ. ಅವರು ಶ್ರೀನಿವಾಸ ದೇವರಿಗೆ ಕಲ್ಯಾಣ ಅದ್ದೂರಿಯಾಗಿ ನೆರವೇರಿಸಿದ್ದಾರೆ. ಶ್ರೀನಿವಾಸ ದೇವರಿಗೆ ಯಾವಾಗಲೋ ಕಲ್ಯಾಣ ಆಗಿದೆ. ಈಗ ವಿವಾಹ ಆಗಬೇಕಾಗಿರುವುದು ಸಂತ್ರಸ್ತ ಯುವತಿಗೆ. ಅವಳಿಗೆ ಕೃಷ್ಣ ಜೆ.ರಾವ್ ಜೊತೆ ಕಲ್ಯಾಣ ಮಾಡಿಸುವ ಬಗ್ಗೆ ಪುತ್ತಿಲ ಮನಸ್ಸು ಮಾಡಲಿ. ಮದುವೆ ವಿಚಾರದಲ್ಲಿ ಸಂಧಾನ ಮಾತುಕತೆ ವೇಳೆ ಆತನ ಪೋಷಕರು ಈಡೇರಿಸಲಾಗದ ಷರತ್ತು ಇಟ್ಟಿದ್ದಾರೆ. ಮಗುವನ್ನು ಸಾಂತ್ವನ ಕೇಂದ್ರಕ್ಕೆ ಸೇರಿಸಬೇಕು. ಹಾಗಾದರೆ ಮಾತ್ರ ಯುವತಿಯನ್ನು ಆತ ವಿವಾಹವಾಗಿ ವಿಚ್ಛೇದನ ನೀಡಲಾಗುವುದು. ಅಲ್ಲದೆ ಈ ವೇಳೆ 50 ಲಕ್ಷ ಪರಿಹಾರ ನೀಡಲಾಗುವುದು. ಇದಕ್ಕಾಗಿ ಮೊದಲು ಆತನ ವಿರುದ್ಧದ ಎಲ್ಲಾ ಪ್ರಕರಣವನ್ನು ವಾಪಸ್ ಪಡೆಯಬೇಕು ಎಂಬೆಲ್ಲಾ ಷರತ್ತುಗಳನ್ನು ವಿಧಿಸಲಾಗಿದೆ. ನಮಗೆ ಹಣ ಬೇಡ, ಸಾಮಾಜಿಕ ನ್ಯಾಯ ಬೇಕು. ಆತ ಸಂತ್ರಸ್ತೆಯನ್ನು ವಿವಾಹವಾಗಿ ಮನೆ ಅಳಿಯನಾದರೆ ನಾನೇ ಅವರಿಗೆ 50 ಲಕ್ಷ ರು. ಕೊಡುತ್ತೇನೆ ಎಂದು ಪ್ರತಿಭಾ ಕುಳಾಯಿ ಸವಾಲು ಹಾಕಿದರು.

"ನಾನು ತಪ್ಪು ಮಾಡಿದ್ದೇನೆ. ಹೇಗೂ ತಪ್ಪಾಗಿ ಹೋಗಿದೆ. ಈಗ ಮಗುವಿನ ತಂದೆ ಯಾರು ಎಂದು ಯಾರಾದರೂ ಕೇಳಿದರೆ ನಾನು ಏನೆಂದು ಹೇಳಲಿ, ಅದನ್ನು ನೆನೆಸುವಾಗ ಸಾಯುವ ಎಂದಾಗುತ್ತಿದೆ."

-ಸಂತ್ರಸ್ತೆ ಯುವತಿ

"ನನ್ನ ಮಗಳಿಂದ ತಪ್ಪಾಗಿದೆ, ಆತನೂ ತಪ್ಪು ಮಾಡಿದ್ದಾನೆ. ಇದು ಅವರದೇ ಮಗು ಎಂಬುದು

ಡಿಎನ್‌ಎ ಪರೀಕ್ಷೆಯಲ್ಲೂ ಸಾಬೀತಾಗಿದೆ. ನಮಗೆ ನ್ಯಾಯ ಬೇಕು. ಆತ ಮಗಳನ್ನು ಮದುವೆ ಆಗಿ ಒಳ್ಳೆಯದರಲ್ಲಿ ಸಂಸಾರ ನಡೆಸಬೇಕು".

-ಸಂತ್ರಸ್ತೆಯ ತಾಯಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X