Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪುತ್ತೂರು | ರಾಷ್ಟ್ರ ಮಟ್ಟದ...

ಪುತ್ತೂರು | ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ವಾರ್ತಾಭಾರತಿವಾರ್ತಾಭಾರತಿ26 Nov 2023 11:58 AM IST
share
ಪುತ್ತೂರು | ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲ: ಬೇಸರಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಪುತ್ತೂರು, ನ.26: ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡುವಲ್ಲಿ ವಿಫಲವಾದ ಬೇಸರದಲ್ಲಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸಂಪ್ಯದಲ್ಲಿ ನಡೆದಿದೆ.

ಆರ್ಯಾಪು ಗ್ರಾಮದ ಸಂಪ್ಯ ನಿವಾಸಿ, ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ(17) ಮೃತಪಟ್ಟವರು.

ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆದರೆ ಸ್ಪರ್ಧೆಯಲ್ಲಿ ಯಾವುದೇ ಸಾಧನೆ ಮಾಡುವಲ್ಲಿ ವಿಫಲರಾದ ಕಾರಣ ಬೇಸರಗೊಂಡಿದ್ದರು ಎನ್ನಲಾಗಿದೆ. ಇದೇ ವಿಚಾರವಾಗಿ ಖಿನ್ನತೆಗೆ ಒಳಗಾಗಿದ್ದ ನಿಶಾ ನ.13ರಂದು ಮನೆಯಲ್ಲಿದ್ದ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿ ಆತ್ಮಹತ್ಯೆ ಗೆ ಯತ್ನಿಸಿದ್ದರೆನ್ನಲಾಗಿದೆ.

ಅಸ್ವಸ್ಥಗೊಂಡಿದ್ದ ನಿಶಾರನ್ನು ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿರುವ ವಿಚಾರ ಬೆಳಕಿಗೆ ಬಂದಿತ್ತು. ತಕ್ಷಣವೇ ಅವರನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags

committed suicide
share
ವಾರ್ತಾಭಾರತಿ
ವಾರ್ತಾಭಾರತಿ
Next Story
X