Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳದಿ ರೋಗ, ಎಲೆಚುಕ್ಕೆ ರೋಗ...

ಹಳದಿ ರೋಗ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಕೃಷಿ ಸಚಿವ ಚೆಲುವರಾಯ ಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ15 Oct 2023 8:39 PM IST
share
ಹಳದಿ ರೋಗ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಕೃಷಿ ಸಚಿವ ಚೆಲುವರಾಯ ಸ್ವಾಮಿ

ಸುಬ್ರಹ್ಮಣ್ಯ: ಶಿವಮೊಗ್ಗ, ಮಂಗಳೂರು ಉಡುಪಿ ಭಾಗದಲ್ಲಿ ಅಡಿಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಸರಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ ಎಂದು ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಹೇಳಿದರು.

ಈ ರೋಗಗಳಿಂದ ಈ ಭಾಗದ ರೈತರು ಹೆಚ್ಚು ತೊಂದರೆಗೀಡಾಗಿದ್ದಾರೆ ಎಂದು ತಿಳಿದಿದೆ. ಆದುದರಿಂದ ಈ ರೋಗಗಳ ನಿಯಂತ್ರಣಕ್ಕೆ ಸರಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ.ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಾಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ಈಗಾಗಲೇ ಡಾ.ಜಗದೀಶ್ ನೇತೃತ್ವದ ನಿಯೋಗ ಈ ಬಗ್ಗೆ ಕಾರ್ಯ ಪ್ರವೃತ್ತವಾಗಿದೆ. ಅವರ ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಚೆಲುವರಾಯ ಸ್ವಾಮಿ ಹೇಳಿದರು.

ನಾಗಾರಾಧನೆಯ ಪುಣ್ಯ ತಾಣ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ರವಿವಾರ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ರೋಗಗಳನ್ನು ನಿಯಂತ್ರಣ ಮಾಡಲು ಕೃಷಿ ವಿಜ್ಞಾನಿಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಗ್ಗೆ ವೈಜ್ಞಾನಿಕವಾಗಿ ಅಧ್ಯಾಯನ ಮಾಡಿ ರೋಗ ನಿಯಂತ್ರಣದ ಸೂತ್ರಗಳನ್ನು ಕಂಡು ಹಿಡಿಯಲಾಗುವುದು. ಈ ಮೂಲಕ ಬೆಳೆಗಳಿಗೆ ಭಾದಿಸುವ ರೋಗಗಳಿಂದ ರೈತರು ಪಡುವ ಸಂಕಷ್ಟವನ್ನು ಹೋಗಲಾಡಿಸಲು ಸರಕಾರ ಕ್ರಮ ಕೈಗೊಳ್ಳಲಿದೆ ಎಂದರು.

ರೈತರ ವಿಶೇಷ ಅನುಕೂಲತೆಗಾಗಿ ಕೃಷಿ ಭಾಗ್ಯ ಯೋಜನೆಯನ್ನು ಸ್ಥಾಪನೆ ಮಾಡಲಾಗಿದೆ.ಈ ಮೂಲಕ ರೈತರಗೆ ವಿಶೇಷ ಅನುಕೂಲತೆಗಳನ್ನು ಒದಗಿಸಲಾಗಿದೆ. ಹಾರ್ವೆಸ್ಟ್ ಹೈಟೆಕ್ ಹಬ್ ಅನ್ನುವ ವಿನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ.ಇದಕ್ಕೆ 100 ಕೋಟಿ ರೂ ಅನುದಾನ ಬಿಡುಗಡೆಗೊಳಿಸಲಾಗಿದೆ. ಇದರ ಮೂಲಕ ಕಬ್ಬು, ಭತ್ತ ಇತ್ಯಾದಿ ಬೆಳೆಯುವ ರೈತರಿಗೆ ಯಂತ್ರ ಖರೀದಿಗೆ ಅನುಕೂಲತೆ ಒದಗಿಸಲಾಗಿದೆ ರೈತರಿಗೆ ಹೆಚ್ಚಿನ ಆದ್ಯತೆಯನ್ನು ಸರಕಾರ ನೀಡುತ್ತಿದೆ. ಈಗಾಗಲೇ ರೈತರ ಹಿತಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದೆ.ಕಾಂಗ್ರೆಸ್ ಸರಕಾರ ಬಂದ ನಂತರ ರೈತರ ಆತ್ಮಹತ್ಯೆಗಳಂತಹ ಪ್ರಕರಣಗಳು ಕಡಿಮೆಯಾಗಿದೆ. ಅನೇಕ ವಿನೂತನ ಯೋಜನೆಗಳನ್ನು ಕಾಂಗ್ರೆಸ್ ಸರಕಾರ ಬಂದ ನಂತರ ರೈತರ ಅನುಕೂಲತೆಗೆ ಮಾಡಲಾಗಿದೆ.ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕರ್ನಾಟಕ ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇಲ್ಲ.ಇವುಗಳು ಹೇರಳವಾಗಿ ಸಂಗ್ರಹವಾಗಿದೆ. ರಾಜ್ಯದ ರೈತರಿಗೆ ಬೇಕಾದಷ್ಟು ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಿಸಲಾಗಿದೆ.ಕಳಪೆ ಬಿತ್ತನೆ ಬೀಜ ವಿತರಣೆಗೆ ಕಡಿವಾಣ ಹಾಕಲಾಗಿದೆ. ಗುಲ್ಬರ್ಗ ವ್ಯಾಪ್ತಿಯಲ್ಲಿ ನಿಟ್ಟೆ ರೋಗದಿಂದಾಗಿ ಬೆಳೆ ನಷ್ಟ ಉಂಟಾಗಿತ್ತು.ಈ ಹಿಂದಿನ ಸರಕಾರ ಪರಿಹಾರ ಘೋಷಣೆ ಮಾಡಿದ್ದರೂ ನೀಡಿರಲಿಲ್ಲ. ನಮ್ಮ ಸರಕಾರ ಬಂದ ತಕ್ಷಣ ಈ ಭಾಗದ ರೈತರಿಗೆ ಬೆಳೆ ನಷ್ಟ ಪರಿಹಾರವಾಗಿ ರೂ.150 ಕೋಟಿ ಬಿಡುಗಡೆಗೊಳಿಸಿ ನೀಡಲಾಗಿದೆ ಎಂದು ಕೃಷಿ ಸಚಿವರು ಹೇಳಿದರು.

ಸಾವಯವ ಕೃಷಿ ಯೋಜನೆಯಡಿಯಲ್ಲಿ ರೈತರಿಗೆ ಒಂದು ಹೆಕ್ಟೇರ್‍ಗೆ 10ಸಾವಿರ ರೂ ಸಹಾಯಧನ ನೀಡಲಾಗುತ್ತಿದೆ.1 ಅಥವಾ 2 ಹೆಕ್ಟೇರ್ ಭೂಮಿ ಹೊಂದಿದ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ.ರೈತರಿಗೆ ರೂ.20 ಲಕ್ಷ ನೀಡುತ್ತಿದ್ದ ಸಾಲದ ಮೊತ್ತವನ್ನು 50ಲಕ್ಷ ರೂಗೆ ಏರಿಸಲಾಗಿದೆ.ಈ ಸಾಲದ ಮೇಲೆ 4% ಬಡ್ಡಿ ರಿಯಾಯಿತಿಯನ್ನು ನೀಡಲಾಗಿದೆ.ರೈತರು ತೆಗೆದುಕೊಂಡ ಸಾಲದ ಮೇಲಿನ ಬಡ್ಡಿಯಲ್ಲಿ 4%ನ್ನು ಸರಕಾರ ಭರಿಸಲಿದೆ ಎಂದು ಅವರು ಹೇಳಿದರು.

ರಾಜ್ಯದ 195 ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ.ಹೆಚ್ಚುವರಿಯಾಗಿ ಮತ್ತೆ 21 ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಸರಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು.ಇಲ್ಲಿನ ರೈತರಿಗೆ ರೂ.5 ಲಕ್ಷ ಬಡ್ಡಿ ರಹಿತ ಸಾಲ ನೀಡಲು ತೀರ್ಮಾನಿಸಲಾಗಿದೆ. ಈಗಾಗಲೇ ರಾಜ್ಯದ 90% ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಿಸಲಾಗಿದೆ.ಇನ್ನು ಕೇವಲ 20 ತಾಲೂಕು ಗಳನ್ನು ಮಾತ್ರ ಬರ ಪೀಡಿತ ಎಂದು ಘೋಷಿಸಲಾಗಿಲ್ಲ. ಅಲ್ಲೂ ಬರದ ಛಾಯೆ ಇದೆ ಎಂದು ತಿಳಿದು ಬಂದಲ್ಲಿ ಮುಂದಿನ ಹಂತದಲ್ಲಿ ಈ ತಾಲೂಕುಗಳನ್ನು ಕೂಡಾ ಬರ ಪೀಡಿತ ತಾಲೂಕುಗಳು ಎಂದು ಘೋಷಿಸಲಾಗುತ್ತದೆ.ಈ ತಾಲೂಕುಗಳಲ್ಲಿ ರೈತರ ಸಂಕಷ್ಟ ನಿವಾರಣೆಗೆ ಬೇಕಾದ ಸೂಕ್ತ ಕ್ರಮವನ್ನು ಸರಕಾರ ತೆಗೆದುಕೊಳ್ಳಲಿದೆ ಎಂದು ಎನ್.ಚೆಲುವರಾಯ ಸ್ವಾಮಿ ನುಡಿದರು.

ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ.ಹಾಲಿಗೆ ಲೀಟರ್‍ಗೆ 3 ರೂ ಅನ್ನು ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಲು ತೀರ್ಮಾನಿಸಲಾಗಿದೆ.ಈ ಮೂಲಕ ಹೈನುಗಾರಿಕೆಯ ಅಭಿವೃದ್ದಿಗೆ ವಿಶೇಷ ಕಾಳಜಿ ವಹಿಸಲಾ ಗಿದೆ. ಹೈನುಗಾರಿಕೆಯು ನಮ್ಮ ರಾಜ್ಯದ ವಿಶೇಷ ಸ್ವ ಉದ್ಯೋಗವಾಗಿದ್ದು ಇದರ ಪ್ರಗತಿಗೆ ಇನ್ನಷ್ಟು ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ನೇತೃತ್ವದಲ್ಲಿ ರಾಜ್ಯದ ಜನತೆಯ ಸಮಗ್ರ ಅಭಿವೃದ್ದಿಗೆ ಬೇಕಾದ ಯೋಜನೆಗಳನ್ನು ನೆರವೇರಿಸಲಾಗುತ್ತಿದೆ.ಈಗಾಗಲೇ ಅನೇಕ ಅಭಿವೃದ್ದಿ ಕಾರ್ಯಗಳು ನೆರವೇರಿದೆ. ಇದರಲ್ಲಿ ಪ್ರಮುಖ ವಾಗಿ ಜನತೆಯ ಅನುಕೂಲತೆಗೆ 5 ಗ್ಯಾರಂಟಿಗಳನ್ನು ಘೋಷಿಸಲಾಗಿದೆ.ಇದರಲ್ಲಿ 4 ಗ್ಯಾರಂಟಿಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. ಯುವನಿಧಿ ಗ್ಯಾರಂಟಿ ಯೋಜನೆಯು ಶೀಘ್ರವೇ ಅನುಷ್ಠಾನಗೊಳ್ಳಲಿದೆ.ಈ 4 ಯೋಜನೆ ಗಳಿಂದ ಪ್ರತಿ ಕುಟುಂಬಕ್ಕೆ 6 ಸಾವಿರ ರೂ ದೊರಕುವಂತ ವ್ಯವಸ್ಥೆ ಆಗಿದೆ.ನಮ್ಮ ಗ್ಯಾರಂಟಿ ಯೋಜನೆಗಳು ಈಗಾಗಲೇ ಗ್ರಾಮೀಣ ಭಾಗ ಸೇರಿದಂತೆ ರಾಜ್ಯದ 99% ಜನತೆಗೆ ತಲುಪಿದೆ ಮತ್ತು ಇದರ ಅನುಕೂಲತೆಗಳನ್ನು ಜನತೆ ಪಡೆದು ಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಸಾಮಾನ್ಯ ಜನತೆಯ ಅನುಕೂಲತೆಗೆ ಬೇಕಾದ ಕಾರ್ಯಗಳನ್ನು ಅನುಷ್ಠಾನಗೊಳಿಸಿ ಅದು ಗ್ರಾಮ ಗ್ರಾಮಗಳ ಜನತೆಗೆ ತಲುಪುವ ವ್ಯವಸ್ಥೆ ಮಾಡಲಾಗಿದೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ನಿಕಟಪೂರ್ವ ತಾ.ಪಂ.ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾಂಗ್ರೆಸ್ ಯುವ ಮುಖಂಡರಾದ ಶೇಷಕುಮಾರ್ ಶೆಟ್ಟಿ, ಮನೋಜ್ ಕೈಕಂಬ, ಶ್ರೀ ದೇವಳದ ಎಇಒ ರಾಜಣ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು ಉಪಸ್ಥಿತರಿದ್ದರು.

Tags

control
share
ವಾರ್ತಾಭಾರತಿ
ವಾರ್ತಾಭಾರತಿ
Next Story
X