ರಂಗೋತ್ಸವ 2026 : ಕುಂಜತ್ತಬೈಲ್ ರಂಗ ಸ್ವರೂಪ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಕಾವೂರು: ರಂಗ ಸ್ವರೂಪ (ರಿ.) ಕುಂಜತ್ತಬೈಲ್ ಆಯೋಜಿಸಿದ ʼರಂಗೋತ್ಸವ 2026' 4ದಿನಗಳ ಕಾಲ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಮರಕಡ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು.
ಓಷಿಯನ್ ಕನ್ಸ್ಟ್ರಕ್ಷನ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಇನಾಯತ್ ಅಲಿ ʼರಂಗೋತ್ಸವ 2026' ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮರಕಡ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕಿ ಭವಾನಿ ಅವರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಸೇವೆಯನ್ನು ಗುರುತಿಸಿ "ರಂಗೋತ್ಸವ 2026' ಪ್ರಶಸ್ತಿ ಪ್ರದಾನ ಮಾಡಲಾಯಿತು.
ಪರಿಸರ ವಾದಿ ದಿನೇಶ್ ಹೊಳ್ಳಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ರಂಗ ಸ್ವರೂಪ ಸಂಸ್ಥೆಯ ಅಧ್ಯಕ್ಷ ರಹ್ಮಾನ್ ಖಾನ್ ಕುಂಜತ್ತಬೈಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಶರತ್ ಕುಮಾರ್, ಮರಕಡ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಶೋಭಾ ಅತಿಥಿಗಳಾಗಿ ಭಾಗವಹಿಸಿದರು.
ಝುಬೇರ್ ಖಾನ್ ಕುಡ್ಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಸುಬ್ರಹ್ಮಣ್ಯ ಕಾಸರಗೋಡು ವಂದಿಸಿದರು. ಪ್ರೇಮನಾಥ್ ಮರ್ಣೆ ಮತ್ತು ತಸ್ಲೀಮಾ ಬಾನು ಹನೀಷಾ ಸವಾದ್ ಕಾರ್ಯಕ್ರಮ ನಿರೂಪಿಸಿದರು.






