Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರೀ ಮಳೆ: ದ.ಕ. ಜಿಲ್ಲೆಗೆ...

ಭಾರೀ ಮಳೆ: ದ.ಕ. ಜಿಲ್ಲೆಗೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ಆಗಮನ

ಮುಂದಿನ ಐದು ದಿನ ದ.ಕ. ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ25 May 2025 6:20 PM IST
share
ಭಾರೀ ಮಳೆ: ದ.ಕ. ಜಿಲ್ಲೆಗೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡ ಆಗಮನ

ಮಂಗಳೂರು: ದ.ಕ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ತಂಡಗಳನ್ನು ಬಳಸಿಕೊಳ್ಳಲಾಗುವುದು. ಈಗಾಗಲೆ ಎರಡೂ ತಂಡಗಳು ಜಿಲ್ಲೆಗೆ ಆಗಮಿಸಿವೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ. ಆನಂದ್ ತಿಳಿಸಿದ್ದಾರೆ.

ಜಿಲ್ಲೆಯ ಮಳೆ ಪರಿಸ್ಥಿತಿಯ ಬಗ್ಗೆ ರವಿವಾರ ತನ್ನ ಅಧೀನ ಅಧಿಕಾರಿಗಳೊಂದಿಗೆ ಆನ್‌ಲೈನ್ ಸಭೆ ನಡೆಸಿ ಅವರು ಮಾತನಾಡಿದರು.

ರಾಷ್ಟ್ರೀಯ ವಿಪತ್ತು ದಳದ ಒಂದು ತಂಡವು ಆಗಮಿಸಿದೆ. ಅದನ್ನು ಪುತ್ತೂರಿನಲ್ಲಿಡಲಾಗುವುದು. ರಾಜ್ಯ ವಿಪತ್ತು ದಳದ ಎರಡು ತಂಡವು ಆಗಮಿಸಿದ್ದು, ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇಡಲಾಗುವುದು. ಈ ದಳಗಳು ಎಲ್ಲ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿದೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭ ಕಾರ್ಯಾಚರಿಸಲಿದೆ ಎಂದರು.

ವಿಪತ್ತು ನಿರ್ವಹಣೆಗೆ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಮತ್ತು ಗ್ರಾಪಂ ಪಿಡಿಒಗಳು ತಮ್ಮ ವ್ಯಾಪ್ತಿಯಲ್ಲಿ ಕಟ್ಟೆಚ್ಚರದಿಂದ ಇರಬೇಕು. ಯಾವುದೇ ಪ್ರಾಕೃತಿಕ ದುರಂತಗಳು ಸಂಭವಿಸಿದರೆ ತಕ್ಷಣ ಸ್ಪಂದಿಸಬೇಕು. ಜೀವ ಹಾನಿ ತಪ್ಪಿಸಲು ಆದ್ಯತೆ ನೀಡಬೇಕು. ತಾಲೂಕು ಆಡಳಿತದೊಂದಿಗೆ ಸಮನ್ವಯದಿಂದ ಕಾರ್ಯಾಚರಿಸಿ ದುರಂತದ ತೀವ್ರತೆ ತಗ್ಗಿಸಬೇಕು. ಮೆಸ್ಕಾಂ, ಅರಣ್ಯ ಸಹಿತ ಸಂಬಂಧಿಸಿದ ಇಲಾಖೆಗಳು ತಕ್ಷಣ ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿಗಳಿಂದ ಕೆಲವು ಜನವಸತಿ ಪ್ರದೇಶಗಳಲ್ಲಿ ತೀವ್ರ ತೊಂದರೆಯಾಗಿರುವ ಬಗ್ಗೆ ದೂರು ಬಂದಿದೆ. ಈ ಬಗ್ಗೆ ಕೂಡಲೇ ಸ್ಪಂದಿಸಿ ಕ್ರಮ ಕೈಗೊಳ್ಳಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಸೂಚಿಸಿದರು.

ಹವಾಮಾನ ಇಲಾಖೆಯು ಮುಂದಿನ 5 ದಿನಗಳ ಕಾಲ ದ.ಕ.ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಹಾಗಾಗಿ ಈ ಹಿಂದೆ ದುರ್ಘಟನೆ ಆಗಿರುವ ಸ್ಥಳಗಳಲ್ಲಿ ಎಚ್ಚರಿಕೆಯಿಂದ ಇರಬೇಕು. ಜೆಸಿಬಿ, ಬೋಟುಗಳನ್ನು ಸಿದ್ಧವಾಗಿಡಬೇಕು. ಶಾಲೆಗಳು ಶುರು ಆಗುವ ಮೊದಲು ಶಿಥಿಲಗೊಂಡಿರುವ ಅಂಗನವಾಡಿ ಮತ್ತು ಶಾಲಾ ಕೊಠಡಿಗಳನ್ನು ತೆರವುಗೊಳಿಸಲು ಡಾ. ಕೆ. ಆನಂದ್ ಸೂಚಿಸಿದರು.

ಮಳೆಗಾಲ ಶುರುವಾಗುವ ಮೊದಲೇ ಮೀನುಗಾರಿಕೆ ತೆರಳಿದ್ದ ಬೋಟುಗಳು ಹವಾಮಾನ ವೈಪರೀತ್ಯಗಳಿಂದ ಹಿಂದಿರುಗಿ ಬರುತ್ತಿದ್ದು, ಈ ಬೋಟುಗಳಿಗೆ ಎನ್‌ಎಂಪಿಎ ಬಂದರಿಗೆ ಪ್ರವೇಶಿಸಲು ಅನುಮತಿ ನೀಡಲು ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಭೆಯಲ್ಲಿ ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು, ತಹಶೀಲ್ದಾರರು ಉಪಸ್ಥಿತರಿದ್ದರು.

Tags

Dakshina KannadaRain
share
ವಾರ್ತಾಭಾರತಿ
ವಾರ್ತಾಭಾರತಿ
Next Story
X