Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ | ರೋಗಿಗಳ...

ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ | ರೋಗಿಗಳ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆ : ಸಚಿವ ಯು.ಟಿ. ಖಾದರ್

ವಾರ್ತಾಭಾರತಿವಾರ್ತಾಭಾರತಿ17 Oct 2026 11:12 PM IST
share
ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆ | ರೋಗಿಗಳ ಹಿತದೃಷ್ಟಿಯಿಂದ ಮಹತ್ವದ ಹೆಜ್ಜೆ : ಸಚಿವ ಯು.ಟಿ. ಖಾದರ್

ಮಂಗಳೂರು: ಕ್ಯಾನ್ಸರ್‌ನಂತಹ ಗಂಭೀರ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಚಿಕಿತ್ಸೆ ಪಡೆಯುವುದೇ ದೊಡ್ಡ ಸವಾಲಾಗಿದೆ. ಅದರಲ್ಲೂ ದುಬಾರಿ ಔಷಧಗಳ ವೆಚ್ಚವು ರೋಗಿಗಳು ಹಾಗೂ ಅವರ ಕುಟುಂಬಗಳಿಗೆ ಆರ್ಥಿಕವಾಗಿ ದೊಡ್ಡ ಹೊರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮವನ್ನು ಸ್ವಾಗತಿಸುತ್ತೇನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ (FDA) ನಡೆಸಿದ ಪರಿಶೀಲನೆಯ ವೇಳೆ, 254 ಔಷಧ ತಯಾರಿಕಾ ಕಂಪನಿಗಳ ಕ್ಯಾನ್ಸರ್ ಔಷಧಗಳ ಬೆಲೆಗಳಲ್ಲಿ ಗಮನಾರ್ಹ ವ್ಯತ್ಯಾಸವಿರುವುದು ನಮ್ಮ ಗಮನಕ್ಕೆ ಬಂದಿತ್ತು. ಕಡಿಮೆ ವೆಚ್ಚದಲ್ಲಿ ತಯಾರಾಗುವ ಔಷಧಗಳು ಗ್ರಾಹಕರಿಗೆ ತಲುಪುವ ವೇಳೆಗೆ ಹೆಚ್ಚಿನ ಗರಿಷ್ಠ ಚಿಲ್ಲರೆ ಮಾರಾಟ ದರದಲ್ಲಿ (MRP) ಲಭ್ಯವಾಗುತ್ತಿರುವುದರಿಂದ ರೋಗಿಗಳಿಗೆ ಆರ್ಥಿಕ ಹೊರೆ ಹೆಚ್ಚಾಗುತ್ತಿರುವು ದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೆವು. ಈ ವಿಚಾರವನ್ನು ನಿರ್ಲಕ್ಷಿಸದೆ, ಔಷಧಗಳ ಬೆಲೆ ವ್ಯತ್ಯಾಸವನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ FDA ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಅಲ್ಲದೆ, ಔಷಧ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (NPPA) ಹಾಗೂ ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಸೇರಿದಂತೆ ಸಂಬಂಧಪಟ್ಟ ಪ್ರಾಧಿಕಾರಗಳ ಗಮನಕ್ಕೆ ಈ ವಿಚಾರವನ್ನು ತರುವಂತೆ ತಿಳಿಸಲಾಗಿತ್ತು ಎಂದು ಖಾದರ್‌ ಮಾಹಿತಿ ನೀಡಿದ್ದಾರೆ.

ಸೆ. 9ರಂದು ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗಲೂ ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣದ ಅಗತ್ಯವನ್ನು ಪ್ರಸ್ತಾಪಿಸಿದ್ದೆ. ಕೇಂದ್ರ ಸರ್ಕಾರವು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ರೋಗಿಗಳ ಹಿತದೃಷ್ಟಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದೆ. ನಂತರ, ಸಂಬಂಧಪಟ್ಟ ಔಷಧಗಳ ಬೆಲೆಗಳಲ್ಲಿನ ವ್ಯತ್ಯಾಸ, ಔಷಧಗಳ ಲ್ಯಾಂಡಿಂಗ್ ಕಾಸ್ಟ್ ಹಾಗೂ ಗ್ರಾಹಕರಿಗೆ ಮಾರಾಟವಾಗುವ ದರಗಳ ಕುರಿತು ಲಭ್ಯವಿದ್ದ ಮಾಹಿತಿಯನ್ನು ದಾಖಲಾತಿಗಳೊಂದಿಗೆ ಸಂಬಂಧಪಟ್ಟ ಕೇಂದ್ರ ಪ್ರಾಧಿಕಾರಗಳ ಗಮನಕ್ಕೆ ತರಲಾಯಿತು. ಔಷಧಗಳ ಬೆಲೆ ನಿಯಂತ್ರಣದ ಅಗತ್ಯವನ್ನು ಸಾರ್ವಜನಿಕ ವಲಯದಲ್ಲಿಯೂ ಚರ್ಚೆಗೆ ತರುವಲ್ಲಿ ಮಾಧ್ಯಮಗಳು ಮಹತ್ವದ ಪಾತ್ರ ವಹಿಸಿವೆ ಎಂದು ಅವರು ಹೇಳಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಕೆಯಾಗಿ ರುವುದೂ ಮಹತ್ವದ ಬೆಳವಣಿಗೆಯಾಗಿದೆ. ಔಷಧಗಳ ಬೆಲೆ ವ್ಯತ್ಯಾಸದ ವಿಚಾರ ನ್ಯಾಯಾಂಗದ ಗಮನಕ್ಕೂ ಬಂದಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ (NPPA) ಕ್ರಮ ಕೈಗೊಂಡಿರುವುದು ರೋಗಿಗಳ ಹಿತದೃಷ್ಟಿಯಿಂದ ಮಹತ್ವದ ಬೆಳವಣಿಗೆಯಾಗಿದೆ ಎಂದು ಯುಟಿ ಖಾದರ್‌ ತಿಳಿಸಿದರು.

ಲಭ್ಯವಿರುವ ಮಾಹಿತಿಯ ಪ್ರಕಾರ, 137 ಕ್ಯಾನ್ಸರ್ ಔಷಧಗಳ ವ್ಯಾಪಾರ ಲಾಭಾಂಶದ ಮೇಲೆ ಗರಿಷ್ಠ ಶೇ. 30ರ ಮಿತಿ ವಿಧಿಸುವ ಮೂಲಕ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಸಂಬಂಧಪಟ್ಟ ಔಷಧಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗುವ ನಿರೀಕ್ಷೆಯಿದೆ. ಹೊಸ ದರಗಳು ನ. 9ರಿಂದ ಜಾರಿಗೆ ಬರಲಿವೆ ಎಂಬ ಮಾಹಿತಿಯೂ ಲಭ್ಯವಾಗಿದೆ. ಕ್ಯಾನ್ಸರ್ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಔಷಧಗಳು ಲಭ್ಯವಾಗಬೇಕು ಎಂಬುದು ನಮ್ಮ ಆಶಯ. ಚಿಕಿತ್ಸೆಗಾಗಿ ಕುಟುಂಬಗಳು ತಮ್ಮ ಆಸ್ತಿ ಮಾರಾಟ ಮಾಡುವ ಅಥವಾ ಸಾಲದ ಹೊರೆ ಹೊರುವಂತಹ ಪರಿಸ್ಥಿತಿ ಸಾಧ್ಯವಾದಷ್ಟು ಕಡಿಮೆಯಾಗಬೇಕು. ಜೀವ ಉಳಿಸುವ ಔಷಧಗಳು ಜನಸಾಮಾನ್ಯರ ಕೈಗೆಟುಕುವ ದರದಲ್ಲಿ ದೊರೆಯುವುದು ಆರೋಗ್ಯ ವ್ಯವಸ್ಥೆಯ ಪ್ರಮುಖ ಜವಾಬ್ದಾರಿಯಾಗಿದೆ. ಕ್ಯಾನ್ಸರ್ ಔಷಧಗಳ ಬೆಲೆ ನಿಯಂತ್ರಣದ ಈ ಕ್ರಮವು ಕರ್ನಾಟಕ ಸೇರಿದಂತೆ ದೇಶದಾದ್ಯಂತದ ರೋಗಿಗಳಿಗೆ ಪ್ರಯೋಜನಕಾರಿ ಯಾಗಲಿದೆ ಎಂಬ ವಿಶ್ವಾಸವಿದೆ. ರೋಗಿಗಳ ಹಿತದೃಷ್ಟಿಯಿಂದ ಔಷಧಗಳ ಬೆಲೆಗಳಲ್ಲಿ ಪಾರದರ್ಶಕತೆ ತರಲು ಹಾಗೂ ಅನಗತ್ಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ದೊಂದಿಗೆ ನಿರಂತರ ಪ್ರಯತ್ನಗಳು ನಡೆಯಬೇಕಿದೆ ಎಂದು ಹೇಳಿದರು.

ರೋಗಿಗಳ ಆರೋಗ್ಯ, ಅವರ ಕುಟುಂಬಗಳ ಆರ್ಥಿಕ ಸುರಕ್ಷತೆ ಮತ್ತು ಕೈಗೆಟುಕುವ ಆರೋಗ್ಯ ಸೇವೆ ನಮ್ಮ ಆದ್ಯತೆ. ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಯಾವುದೇ ರೋಗಿಯೂ ಔಷಧಗಳ ದುಬಾರಿ ಬೆಲೆಯಿಂದ ಚಿಕಿತ್ಸೆ ಪಡೆಯುವುದನ್ನು ನಿಲ್ಲಿಸುವ ಪರಿಸ್ಥಿತಿ ಎದುರಾಗಬಾರದು. ಈ ನಿಟ್ಟಿನಲ್ಲಿ ಎಲ್ಲ ಸಂಬಂಧಪಟ್ಟ ಪ್ರಾಧಿಕಾರಗಳು ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತೇನೆ ಎಂದು ಸಚಿವ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ.

Tags

Reductionpricecancer drugssignificantpatientsMinister U.T. Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X