Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು. 22 ರಿಂದ ಕೂಳೂರು ಹಳೇ ಸೇತುವೆಯ ಬಳಿ...

ಜು. 22 ರಿಂದ ಕೂಳೂರು ಹಳೇ ಸೇತುವೆಯ ಬಳಿ ರಸ್ತೆ ದುರಸ್ಥಿ ಕಾಮಗಾರಿ; ಸಂಚಾರ ಮಾರ್ಗದಲ್ಲಿ ಬದಲಾವಣೆ

ವಾರ್ತಾಭಾರತಿವಾರ್ತಾಭಾರತಿ22 July 2025 1:15 PM IST
share
ಜು. 22 ರಿಂದ ಕೂಳೂರು ಹಳೇ ಸೇತುವೆಯ ಬಳಿ ರಸ್ತೆ ದುರಸ್ಥಿ ಕಾಮಗಾರಿ; ಸಂಚಾರ ಮಾರ್ಗದಲ್ಲಿ ಬದಲಾವಣೆ

ಮಂಗಳೂರು: ನಗರದ ರಾಷ್ಟ್ರೀಯ ಹೆದ್ದಾರಿ-66 ರ ಕೂಳೂರು ಹಳೇ ಸೇತುವೆಯ ಬಳಿಯ ಕೆ.ಐ.ಓ.ಸಿ.ಎಲ್ ಜಂಕ್ಷನ್‌ನಿಂದ ಅಯ್ಯಪ್ಪ ಗುಡಿಯವರೆಗೆ ಜು. 22 ಮಂಗಳವಾರ ರಾತ್ರಿ 8-00 ಗಂಟೆಯಿಂದ ಜು. 25 ಗುರುವಾರ ಬೆಳಿಗ್ಗೆ 8-00 ರವರೆಗೆ ರಸ್ತೆ ದುರಸ್ಥಿ ಕಾಮಗಾರಿ ನಡೆಯಲಿದೆ. ಆದ್ದರಿಂದ ವಾಹನ ಸವಾರರು ಕೆಳಗಿನ ಆದೇಶವನ್ನು ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಬರುವ ಕೂಳೂರು ಹೊಸ ಸೇತುವೆಯಲ್ಲಿ ದ್ವಿಪಥ ರಸ್ತೆಯನ್ನಾಗಿ ಪರಿವರ್ತಿಸಲಾಗುತ್ತದೆ. ಆದರಿಂದ ಕೋಡಿಕಲ್ ಕ್ರಾಸ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಹಾಗೂ ಪಣಂಬೂರು ಜಂಕ್ಷನ್‌ನಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್‌ವರೆಗೆ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ಕೆ.ಐ.ಓ.ಸಿ.ಎಲ್ ಜಂಕ್ಷನ್ ಬಳಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಹೋಗುವ ಹೊಸ ಸೇತುವೆ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸುವುದು ಹಾಗೂ ಪೀಕ್ ಅವರ್ಸ್ ನಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು ಈ ಕೆಳಗೆ ನಮೂದಿಸಿದ ಬದಲಿ ಮಾರ್ಗಗಳನ್ನು ಬಳಸಬೇಕು.

ವಾಹನ ಚಾಲಕರು ಮತ್ತು ಸಾರ್ವಜನಿಕರು ಉಪಯೋಗಿಸಬಹುದಾದ ಇತರ ಮಾರ್ಗಗಳು

ಉಡುಪಿ ಕಡೆಯಿಂದ ಬೆಂಗಳೂರು, ಮೈಸೂರು ಕಡೆಗೆ ಚಲಿಸುವ ಎಲ್ಲಾ ವಿಧದ ಲಘು ವಾಹನ ಹಾಗೂ ಲಾರಿಗಳು ಪಡುಬಿದ್ರೆ ಕಡೆಯಿಂದ ಕಾರ್ಕಳ ಮೂಡಬಿದ್ರೆ ಮಾರ್ಗವಾಗಿ ಸಂಚರಿಸುವುದು.

ಉಡುಪಿ/ಮುಲ್ಕಿ ಕಡೆಯಿಂದ ಮಂಗಳೂರು ನಗರ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಮುಲ್ಕಿ ವಿಜಯ ಸನ್ನಿಧಿ ಬಳಿ ಎಡಕ್ಕೆ ತಿರುವು ತೆಗೆದುಕೊಂಡು ಕಿನ್ನಿಗೋಳಿ - ಕಟೀಲು - ಬಜಪೆ - ಮರವೂರು - ಕಾವೂರು ಮೂಲಕ ಮಂಗಳೂರು ಕಡೆಗೆ ಸಂಚರಿಸುವುದು.

ಮಂಗಳೂರು ನಗರ / ಕೊಟ್ಟಾರ ಚೌಕಿ ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಎಲ್ಲಾ ಲಘು ವಾಹನಗಳು ಕಾವೂರು - ಮರವೂರು - ಬಜಪೆ - ಕಟೀಲು - ಕಿನ್ನಿಗೋಳಿ - ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

ಬಿ.ಸಿ.ರೋಡ್, ಬೆಂಗಳೂರು ಹಾಗೂ ಮೈಸೂರು ಕಡೆಯಿಂದ ಉಡುಪಿ ಕಡೆಗೆ ಸಂಚರಿಸುವ ಲಾರಿ ಹಾಗೂ ಲಘು ವಾಹನಗಳು ಬಿಕರ್ನಕಟ್ಟೆ- ಕುಲಶೇಖರ - ವಾಮಂಜೂರು - ಕೈಕಂಬ - ಬಜಪೆ - ಕಟೀಲು - ಕಿನ್ನಿಗೋಳಿ - ಮುಲ್ಕಿ ವಿಜಯ ಸನ್ನಿಧಿ ಮೂಲಕ ಉಡುಪಿ ಕಡೆಗೆ ಸಂಚರಿಸುವುದು.

MCF, ONGC, HPCL, BPCL, IOCL, Total Gas, BASF, ರಫ್ತಾರ್, ಏಜಿಸ್ ಇತ್ಯಾದಿ ಕಂಪೆನಿಗಳಿಗೆ ಬರುವ ಹಾಗೂ ಕಂಪೆನಿಯಿಂದ ಹೊರಡುವ ಎಲ್ಲಾ ರೀತಿಯ ಗ್ಯಾಸ್ ಟ್ಯಾಂಕರ್, ಡಿಸೇಲ್/ಪೆಟ್ರೋಲ್ ಟ್ಯಾಂಕರ್ ಹಾಗೂ ಇತರ ಘನ ವಾಹನಗಳು ಕೂಳೂರು ಹೊಸ ಸೇತುವೆಯಲ್ಲಿ ಸಂಚಾರ ದಟ್ಟಣೆಯ ಸಮಯವನ್ನು ಹೊರತುಪಡಿಸಿ ಉಳಿದ ಸಮಯದಲ್ಲಿ ಸಂಚರಿಸಬೇಕು ಎಂದು ಪ್ರಕಟನೆ ತಿಳಿಸಿದೆ..

share
ವಾರ್ತಾಭಾರತಿ
ವಾರ್ತಾಭಾರತಿ
Next Story
X