Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ ಸಿ ಡಿ ಸಿ ಸಿ ಬ್ಯಾಂಕ್ ಗ್ರಾಹಕ...

ಎಸ್‌ ಸಿ ಡಿ ಸಿ ಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿರುವ ಕಾರಣ ಬೆಳೆದಿದೆ: ಡಾ.ರಾಜೇಂದ್ರ ಕುಮಾರ್

113 ನೆ ಶಾಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ31 Oct 2023 10:07 PM IST
share
ಎಸ್‌ ಸಿ ಡಿ ಸಿ ಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿರುವ ಕಾರಣ ಬೆಳೆದಿದೆ: ಡಾ.ರಾಜೇಂದ್ರ ಕುಮಾರ್

ಮಂಗಳೂರು(ಮಾಣಿ), ಅ.31; ಎಸ್ ಸಿ ಡಿ ಸಿ ಬ್ಯಾಂಕ್ ಗ್ರಾಹಕ ಸ್ನೇಹಿ ಬ್ಯಾಂಕ್ ಆಗಿರುವ ಕಾರಣ ಬೆಳೆದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ 113ನೇ ಶಾಖೆಯ ಉದ್ಘಾಟನಾ ಸಮಾರಂಭ ಮಂಗಳವಾರ ಮಾಣಿಯ ಲಕ್ಷ್ಮಿನಾರಾಯಣ ಕಾಂಪ್ಲೆಕ್ಸ್ ನ ಸಭಾಂಗಣ ದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು “ಮೊಳಹಳ್ಳಿ ಶಿವರಾಯರು ಪುತ್ತೂರಿನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಹುಟ್ಟುಹಾಕಿದರು. ಮಾಣಿ ಪರಿಸರದ ಜನತೆ ಬ್ಯಾಂಕ್ ಸ್ಥಾಪನೆಗೆ ಅಭೂತಪೂರ್ವ ಸಹಕಾರ ನೀಡಿದ್ದಾರೆ. ಒಂದು ಬ್ಯಾಂಕ್ ಉದ್ಘಾಟನೆಗೆ ಇಷ್ಟು ಜನರು ಸೇರಿರುವುದು ಸಹಕಾರಿ ಕ್ಷೇತ್ರ ಇಂದು ಯಾವ ಮಟ್ಟಕ್ಕೆ ಬೆಳೆದಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.ನಮ್ಮ ನಡುವಿನ ಅನೇಕ ಬ್ಯಾಂಕ್ ಗಳು ವಿಲೀನಗೊಂಡು ಕಾಣೆಯಾಗಿವೆ. ಆದರೆ ಎಸ್ ಸಿಡಿಸಿಸಿ ಬ್ಯಾಂಕ್ ಗ್ರಾಹಕ ಸ್ನೇಹಿಯಾಗಿ ತನ್ನ ಶಾಖೆಯನ್ನು ವಿಸ್ತರಿಸುತ್ತಿದೆ. ಎಂದರು.

ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, “ಸಹಕಾರಿ ಕ್ಷೇತ್ರದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್ ಬಹಳ ದೊಡ್ಡ ಸಾಧನೆ ಯನ್ನು ಮಾಡಿದೆ. ದೇಶದ ಬೇರೆ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕನ್ನಡ ಜಿಲ್ಲೆಯ ಜನರು ಮಾತ್ರ ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡುವ ಮೂಲಕ ಬ್ಯಾಂಕ್ ಅಭಿವೃದ್ಧಿಗೆ ನೆರವು ನೀಡುತ್ತಿದ್ದಾರೆ. ಎಸ್ ಸಿಡಿಸಿಸಿ ಬ್ಯಾಂಕ್ ಇಂದು ಜನ ರಿಂದ ಪ್ರಶಂಸೆಗೊಳಗಾಗಿದೆ. ಮಾಣಿ ಶಾಖೆಯ ಮೂಲಕ ಬ್ಯಾಂಕ್ ಇನ್ನಷ್ಟು ಎತ್ತರಕ್ಕೆ ಏರಲಿ” ಎಂದು ಶುಭ ಹಾರೈಸಿದರು.

ಪುತ್ತೂರು ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಮಾತಾಡುತ್ತಾ, “ಈ ಹಿಂದೆ ಇಡಿ ಅಧಿಕಾರಿಗಳು ಬ್ಯಾಂಕ್ ಗೆ ಭೇಟಿ ಕೊಟ್ಟಿದ್ದರು. ಅವರಲ್ಲೊಬ್ಬ ಅಧಿಕಾರಿ ನನ್ನ ಬಳಿ ಹೇಳಿದ್ದ. ನಾವು ದೇಶದ ಎಲ್ಲಾ ಬ್ಯಾಂಕ್ ಗಳಲ್ಲಿ ಪರಿಶೀಲನೆ ನಡೆಸಿದ್ದೇವೆ. ಆದರೆ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಮಾತ್ರ ಯಾವುದೇ ರೀತಿಯ ಸಂಶಯಾಸ್ಪದ ಖಾತೆ ಸಿಕ್ಕಿಲ್ಲ. ಇದು ರಾಜೇಂದ್ರ ಕುಮಾರ್ ಅವರ ಹೆಗ್ಗಳಿಕೆ. ಕರಾವಳಿಯ ಕಂಬಳ, ಯಕ್ಷಗಾನ ಹೀಗೆ ಅನೇಕ ಕಲೆಗಳನ್ನು ಬೆಳೆಸಿ ಪ್ರೋತ್ಸಾಹಿಸುವ ಕೆಲಸವನ್ನು ರಾಜೇಂದ್ರ ಕುಮಾರ್ ಮಾಡುತ್ತಿದ್ದಾರೆ. ಹೆಣ್ಣುಮಕ್ಕಳ ಕೈಯನ್ನು ಸ್ವಸಹಾಯ ಸಂಘಗಳ ಮೂಲಕ ಬಲಪಡಿ ಸುವ ಕೆಲಸವನ್ನು ನಾವೆಲ್ಲರೂ ಮುಕ್ತ ಮನಸಿನಿಂದ ಸ್ವಾಗತಿಸಬೇಕಿದೆ. ಪುರುಷರಿಗೆ ದುಡ್ಡು ಸಿಕ್ಕಿದರೆ ಅದು ಖರ್ಚು ಆಗುತ್ತದೆ, ಮಹಿಳೆಯರ ಕೈಗೆ ಸಿಕ್ಕಲ್ಲಿ ಕುಟುಂಬ ಶಕ್ತಿಯುತವಾಗುತ್ತದೆ. ಇಂತಹ ಕಾರ್ಯವನ್ನು ಬ್ಯಾಂಕ್ ಅಧ್ಯಕ್ಷರು ಇನ್ನಷ್ಟು ಮಾಡಲಿ” ಎಂದು ಅವರು ಶುಭ ಹಾರೈಸಿದರು.ನೂತನ ಸ್ವಸಹಾಯ ಸಂಘಗಳ ಉದ್ಘಾಟನೆ, ಠೇವಣಿ ಪತ್ರ, ಸಾಲಪತ್ರ ವಿತರಣೆ ನಡೆಯಿತು.

ಸಮಾರಂಭದಲ್ಲಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ. ಮಾಣಿ, ನೇರಳಕಟ್ಟೆ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪುಷ್ಟರಾಜ ಚೌಟ, ಶಾಖಾ ಕಟ್ಟಡದ ಮಾಲಕ ಎಂ. ನಾರಾಯಣ ಪೈ, ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ.ರಾಜಾರಾಮ ಭಟ್, ಭಾಸ್ಕರ್‌ ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಎಸ್. ರಾಜು ಪೂಜಾರಿ, ಶಶಿಕುಮಾರ್ ರೈ ಬಿ.,ಎಸ್. ಬಿ. ಜಯರಾಮ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಎಂ. ಮಹೇಶ್ ಹೆಗ್ಡೆ, ಕೆ. ಜೈರಾಜ್ ಬಿ. ರೈ, ಬಿ. ಅಶೋಕ್ ಕುಮಾರ್ ಶೆಟ್ಟಿ, ರಾಜೇಶ್ ರಾವ್, ಸದಾಶಿವ ಉಳ್ಳಾಲ್, ಬ್ಯಾಂಕ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ., ರಮೇಶ್ ಹೆಚ್.ಎನ್. , ವತ್ಸಲ ಮತ್ತಿತರರು ಉಪಸ್ಥಿತರಿದ್ದರು.

ಬ್ಯಾಂಕ್ ನಿರ್ದೇಶಕ ಟಿ.ಜಿ. ರಾಜಾರಾಮ್ ಭಟ್ ಸ್ವಾಗತಿಸಿದರು. ಪ್ರಸನ್ನ ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X