Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಪರಿಶಿಷ್ಟ ಜಾತಿ, ಪರಿಶಿಷ್ಟ...

ಮಂಗಳೂರು| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಮಾಸಿಕ ಸಭೆ : ವೆನ್‌ಲಾಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ ಆರೋಪ

ವಾರ್ತಾಭಾರತಿವಾರ್ತಾಭಾರತಿ28 Dec 2025 11:43 PM IST
share
ಮಂಗಳೂರು| ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕುಂದುಕೊರತೆ ಮಾಸಿಕ ಸಭೆ : ವೆನ್‌ಲಾಕ್ ಆಸ್ಪತ್ರೆಯಲ್ಲಿ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆ ಆರೋಪ

ಮಂಗಳೂರು: ನಗರದ ವೆನ್‌ಲಾಕ್ ಆಸ್ಪತ್ರೆಯಲ್ಲಿ ರೋಗಿಗಳ ಆರೈಕೆ ಮಾಡುತ್ತಿಲ್ಲ. ಬೆಡ್‌ಗೆ ನಂಬ್ರ ಇಲ್ಲ, ರೋಗಿಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಸರಿಯಾಗಿ ತೆಗದುಕೊಳ್ಳದೆ ಬೇಜವ್ದಾರಿಯುತವಾಗಿ, ಅಮಾನವೀಯವಾಗಿ ವರ್ತಿಸುತ್ತಿದ್ದಾರೆ ಎಂದು ದಲಿತ ಮುಖಂಡ ಮುಕೇಶ್ ದೂರಿದರು.

ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಡಿಸಿಪಿ ಮಿಥುನ್ ಅಧ್ಯಕ್ಷತೆಯಲ್ಲಿ ರವಿವಾರ ನಡೆದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ(ಎಸ್ಸಿ-ಎಸ್ಟಿ) ಕುಂದುಕೊರತೆ ಮಾಸಿಕ ಸಭೆಯಲ್ಲಿ ಆಸ್ಪತ್ರೆಯ ಅವ್ಯವಸ್ಥೆಯ ಗಮನ ಸೆಳೆದರು.

ಆಸ್ಪತ್ರೆಯಲ್ಲಿರುವ ಆಯುಷ್ಮಾನ್ ನೋಂದಣಿ ಕೇಂದ್ರದ ನೆರವು ಪಡೆಯಲು ಹೋದವರನ್ನು ಸತಾಯಿಸಲಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಾನು ಸ್ವತ: ಅನುಭವಿಸಿದ ಕಷ್ಟವನ್ನು ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದರು. ತನ್ನ ತಾಯಿಯನ್ನು ನ.3ರಂದು ಒಳರೋಗಿಯಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಆಯುಷ್ಮಾನ್ ಕಾರ್ಡ್‌ನ್ನು ತೆಗೆದುಕೊಳ್ಳದೆ ಸರಕಾರಿದಿಂದ ಸಿಗುವ ಸೌಲಭ್ಯ ಸಿಗದಂತೆ ಮಾಡಿದ್ದಾರೆ. ಫೈಲ್ ನೀಡದೆ ಸತಾಯಿಸುತ್ತಿದ್ದಾಗ ಡಿಸಿಪಿ ಅವರ ಮಧ್ಯಪ್ರವೇಶದಿಂದಾಗಿ ಫೈಲ್ ದೊರೆಯಿತು. ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ ಯಾಕೆ ಇಂತಹ ಕಷ್ಟ? ಎಂದು ಪ್ರಶ್ನಿಸಿದರು.

ಎರಡನೇ ಮಹಡಿಯಲ್ಲಿರುವ ಆಸ್ಪತ್ರೆಗಳ ಮೂರು ವಾರ್ಡ್‌ಗಳಲ್ಲಿ ಸುಮಾರು 100ರಿಂದ 150 ಬೆಡ್‌ಗಳಿದ್ದರೂ, ಎಲ್ಲ ಬೆಡ್‌ಗಳ ಫೈಲ್‌ಗಳು ಒಂದೇ ಕೌಂಟರ್‌ನಲ್ಲಿದೆ. ಬೆಡ್‌ಗೆ ನಂಬರ್‌ ಇಲ್ಲದ ಕಾರಣದಿಂದಾಗಿ ಯಾವ ಹೆಸರಿನ ರೋಗಿ ಯಾವ ನಂಬರ್‌ ಬೆಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ವಿಚಾರ ಗೊತ್ತಾಗುತ್ತಿಲ್ಲ. ರೋಗಿಯ ಹೆಸರು ಕರೆದು ಚಿಕಿತ್ಸೆ ನೀಡಲಾಗುತ್ತಿದೆ. ಒಂದೇ ಹೆಸರಿನ ಇಬ್ಬರು ರೋಗಿಗಳು ಇದ್ದರೆ ಒಬ್ಬ ರೋಗಿಗೆ ನೀಡಬೇಕಾದ ಇಂಜೆಕ್ಷನ್ ಮತ್ತು ಔಷಧವನ್ನು ಇನ್ನೊಬ್ಬರಿಗೆ ನೀಡುವ ಪರಿಸ್ಥಿತಿ ಇದೆ ಆತಂಕ ವ್ಯಕ್ತಪಡಿಸಿದರು. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆದರೂ ಸಮಸ್ಯೆ ಸರಿಯಾಗಿಲ್ಲ ಎಂದು ದಲಿತ ಮುಖಂಡ ಮುಕೇಶ್ ಅಸಮಾಧಾನ ವ್ಯಕ್ತಡಿಸಿದರು.

ದಲಿತರ ಕುಂದುಕೊರತೆ ದೂರುಗಳಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ(ಡಿಸಿಆರ್‌ಇ)ಸರಿಯಾದ ಸ್ಪಂದನ ನೀಡುತ್ತಿಲ್ಲ ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಹಿಂದಿನ ಸಭೆಯ ಪಾಲನಾ ವರದಿ ಮಂಡನೆ ವೇಳೆ ಮಾತನಾಡಿದ ದಲಿತ ಮುಖಂಡ ಆನಂದ ಅವರು ಕಾರ್ಕಳದ ಅಭಿಷೇಕ್ ಆಚಾರ್ಯ ಆತ್ಮಹತ್ಯೆ ವಿಚಾರವನ್ನು ಹನಿಟ್ರ್ಯಾಪ್ ಎಂದು ಜಾಲತಾಣಗಳಲ್ಲಿ ಬಿಂಬಿಸಲಾಗಿದೆ. ಅದು ಹನಿಟ್ರ್ಯಾಪ್ ಅಲ್ಲ ಎಂದು ಉಡುಪಿ ಎಸ್ಪಿಯೇ ಹೇಳಿಕೆ ನೀಡಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಯುವತಿಯೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ಅಪಪ್ರಚಾರ ನಡೆಸಲಾಗುತ್ತಿದೆ. ಈ ವಿಚಾರದಲ್ಲಿ ನ್ಯಾಯಕೋರಿ ಡಿಸಿಆರ್‌ಇ ಮೊರೆ ಹೋದರೆ ಸರಿಯಾದ ಸ್ಪಂದನ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಡಿಸಿಆರ್‌ಇ ಅಧೀಕ್ಷಕರು ಕಚೇರಿಯಲ್ಲಿ ಇರುವುದಿಲ್ಲ. ಯಾವಾಗಲೂ ಎಸ್‌ಐಟಿ ತನಿಖೆಯಲ್ಲಿದ್ದೇನೆ ಎನ್ನುತ್ತಿದ್ದಾರೆ. ಡಿಸಿಆರ್‌ಇನಲ್ಲಿ ಹುದ್ದೆಗಳು ಖಾಲಿ ಇದ್ದು, ಪೂರ್ಣ ನೇಮಕಾತಿ ವಿನಃ ಸಮಸ್ಯೆ ಬಗೆಹರಿಯುವುದಿಲ್ಲ. ಹೀಗಾಗಿ ದಲಿತರಿಗೆ ನ್ಯಾಯ ಸಿಗಬೇಕಾದರೆ ಪೂರ್ಣಕಾಲಿಕೆ ಅಧಿಕಾರಿಗಳ ನೇಮಿಸಬೇಕು. ಹಳೆ ಡಿಸಿ ಕಚೇರಿಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಕಚೇರಿಯನ್ನು ಸ್ಥಳಾಂತರಿಸಬೇಕು ಎಂದು ದಲಿತ ಮುಖಂಡರು ಆಗ್ರಹಿಸಿದರು

ಈ ವೇಳೆ ಮಾತನಾಡಿದ ಡಿಸಿಪಿ ಮಿಥುನ್, ಖಾಲಿ ಹುದ್ದೆ ಭರ್ತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆಯಲಾಗುವುದು ಎಂದರು.

ಪೊಲೀಸ್ ಅಧಿಕಾರಿಗಳ ವಿರುದ್ಧ ಆಕ್ರೋಶ: ಪಣಂಬೂರು ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಗಳು ನಾಗರಿಕ ಸ್ನೇಹಿ ಆಗದೆ ಅಲ್ಲಿನ ಅಧಿಕಾರಿಗಳು ಬೇಕಾಬಿಟ್ಟಿ ಕಾರುಭಾರು ನಡೆಸುತ್ತಿದ್ದಾರೆ. ಎಸಿಪಿ ಶ್ರೀಕಾಂತ್ ಮತ್ತು ಇನ್‌ಸ್ಪೆಕ್ಟರ್ ಸಂದೇಶ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

ಠಾಣೆಗೆ ದೂರು ನೀಡಲು ಆಗಮಿಸುವವರ ಜೊತೆ ಅನುಚಿತವಾಗಿ ವರ್ತಿಸುತ್ತಿದ್ದಾರೆ. ಪೊಲೀಸ್ ಆಯುಕ್ತರು, ಡಿಸಿಪಿ ಅವರ ಬಗ್ಗೆ ಒಳ್ಳೆಯ ಹೆಸರು ಇದೆ. ಆದರೆ ಇವರ ಹೆಸರನ್ನು ಕೆಲವು ಅಧಿಕಾರಿಗಳ ಕೆಡಿಸುತ್ತಿದ್ದಾರೆ. ಇಂತಹ ಅಧಿಕಾರಿಗಳನ್ನು ವರ್ಗಾವಣೆಗೊಳಿಸಬೇಕು ಎಂದು ದಲಿತ ಮುಖಂಡೆ ಸುಮತಿ ಒತ್ತಾಯಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಪಿ ಮಿಥುನ್, ಈ ಆರೋಪಗಳ ಕುರಿತಂತೆ ಇಲಾಖೆಯಿಂದ ಸತ್ಯಾಂಶ ತಿಳಿಯಲಾಗುವುದು. ಪೊಲೀಸ್ ಠಾಣೆಗಳು ನಾಗರಿಕ ಸ್ನೇಹಿಯಾಗಿ ಇರಬೇಕಾಗಿದ್ದು, ಯಾವುದೇ ಕಾರಣಕ್ಕೂ ನಾಗರಿಕರ ದೂರು ವ್ಯಕ್ತವಾಗದಂತೆ ನೋಡಿಕೊಳ್ಳಬೇಕು. ಹಾಗೇನಾದರೂ ಕಂಡುಬಂದರೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಬಹುದು ಎಂದರು.

ಅಂಬೇಡ್ಕರ್ ಸರ್ಕಲ್ ನಿರ್ಮಾಣವಾಗದಿರುವ ವಿಚಾರದ ಬಗ್ಗೆ ಚಂದ್ರ ಕುಮಾರ್ ಗಮನ ಸೆಳೆದರು. ಮುಖಂಡರಾದ ಗಿರೀಶ್ ಕುಮಾರ್ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದರು. ದಕ್ಷಿಣ ಎಸಿಪಿ ವಿಜಯಕ್ರಾಂತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X