ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆ ಶೀಘ್ರ ದುರಸ್ತಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ಪ್ರತಿಭಟನೆ

ಬೆಳ್ತಂಗಡಿ; ಸಂಪೂರ್ಣ ಹದಗೆಟ್ಟು ಹೋದ ಗುರುವಾಯನಕೆರೆ - ಉಪ್ಪಿನಂಗಡಿ ರಸ್ತೆಯನ್ನು ಶೀಘ್ರ ದುರಸ್ತಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕಣಿಯೂರು ಬ್ಲಾಕ್ ಸಮಿತಿಯು ತಣ್ಣೀರುಪಂತ ಗ್ರಾಮ ಪಂಚಾಯತ್ ಸದಸ್ಯರಾದ ನಿಸಾರ್ ಕುದ್ರಡ್ಕ ನೇತೃತ್ವದಲ್ಲಿ ಕಲ್ಲೇರಿ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿತು.
ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪಕ್ಷದ ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ವರ್ಷಗಳಿಂದ ಈ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು, ದಿನನಿತ್ಯ ನೂರಾರು ವಾಹನಗಳು ಓಡಾಡುತ್ತವೆ. ರಸ್ತೆಯಲ್ಲಿ ಗುಂಡಿ ಬಿದ್ದಿದ್ದರಿಂದ ದ್ವಿಚಕ್ರ ವಾಹನ ಸವಾರರು ಅಪಘಾತಕ್ಕೀಡಾಗಿ ಸಾವನ್ನಪ್ಪಿರುವ ಉದಾಹರಣೆಗಳಿವೆ. ದಿನನಿತ್ಯ ಈ ಮಾರ್ಗದಲ್ಲಿ ಶಾಲಾ- ಕಾಲೇಜು ಮಕ್ಕಳು ಓಡಾಡುತ್ತಿದ್ದು, ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಇತ್ತ ಗಮನ ಹರಿಸಿ ರಸ್ತೆ ದುರಸ್ತಿ ಮಾಡಿಕೊಡಬೇಕು. ಕೋಮು ದ್ವೇಷ ಭಾಷಣ ಮಾಡುವುದನ್ನು ಬಿಟ್ಟು ಅಭಿವೃದ್ಧಿಯ ಕಡೆಗೆ ಗಮನಹರಿಸಿ ಮೂಲಭೂತ ಸೌಕರ್ಯಗಳಾದ ರಸ್ತೆಯ ಬಗ್ಗೆ ಹೆಚ್ಚು ಗಮನಹರಿಸಿ. ಇಲ್ಲವಾದರೆ ಮುಂದಿನ ಚುನಾವಣೆಯಲ್ಲಿ ತಮ್ಮನ್ನು ಈ ಕ್ಷೇತ್ರದ ಜನರು ಮನೆಗೆ ಕಳುಹಿಸುತ್ತಾರೆ ಎಂದರು.
ಪ್ರತಿಭಟನೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಸದಸ್ಯರಾದ ಹನೀಫ್ ಪುಂಜಾಲಕಟ್ಟೆ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಅಶ್ಫಾಕ್ ಪುಂಜಾಲಕಟ್ಟೆ, ಪಂಚಾಯತ್ ಸದಸ್ಯರಾದ ಫೈಝಲ್ ಮೂರುಗೋಳಿ, ಅನ್ವರ್ ತೆಕ್ಕಾರು, ಬ್ಲಾಕ್ ನಾಯಕರುಗಳಾದ ಸಾದಿಕ್ ಕುದ್ರಡ್ಕ, ರಝಕ್ ಬಿ.ಎಂ, ರಝಕ್ ಕುದ್ರಡ್ಕ, ಶುಕೂರ್ ಕುಪ್ಪೆಟ್ಟಿ, ರೌಫ್ ಪುಂಜಾಲಕಟ್ಟೆ, ಬ್ರಾಂಚ್ ಪದಾಧಿಕಾರಿಗಳು, ಕಾರ್ಯಕರ್ತರು, ನಾಗರೀಕರು ಪಾಲ್ಗೊಂಡಿದ್ದರು





