ದ್ವಿತೀಯ ಪಿಯುಸಿ ಪರೀಕ್ಷೆ | ಹಝ್ರತ್ ಸೈಯ್ಯದ್ ಮದನಿ ಮಹಿಳಾ ಪದವಿ ಪೂರ್ವ ಕಾಲೇಜಿಗೆ 100% ಫಲಿತಾಂಶ

ಉಳ್ಳಾಲ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹಝ್ರತ್ ಸೈಯ್ಯದ್ ಮದನಿ ಮಹಿಳಾ ಪದವಿ ಪೂರ್ವ ಕಾಲೇಜು ಸತತವಾಗಿ 5ನೇ ವರ್ಷವೂ ಶೇ.100 ಫಲಿತಾಂಶ ಸಾಧಿಸಿದೆ.
ಪರೀಕ್ಷೆ ಬರೆದ 58 ವಿದ್ಯಾರ್ಥಿಗಳಲ್ಲಿ 12 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ, 43 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಹಾಗೂ 3 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತೀರ್ಣರಾಗಿದ್ದಾರೆ.
ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಆಯಿಶಾ ನದಿಯಾ 600 ಅಂಕಗಳಲ್ಲಿ 581 ಅಂಕಗಳನ್ನು ಗಳಿಸಿ ಕಾಲೇಜಿಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಸೈಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
Next Story







