ಶಿವಮೊಗ್ಗ | ಮಹಿಳೆಯ ಬರ್ಬರ ಹತ್ಯೆ

ಶಿವಮೊಗ್ಗ: ಮಹಿಳೆಯೊಬ್ಬರನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಶಿವಮೊಗ್ಗ ತಾಲೂಕಿನ ದುಮ್ಮಳ್ಳಿಯ ಸಿದ್ದೇಶ್ವರ ನಗರದಲ್ಲಿ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಗಂಗಮ್ಮ (45) ಹತ್ಯೆಯಾದ ಮಹಿಳೆ.
ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿ ನಾಗೇಶ್ ನಾಯ್ಕ್ ಮತ್ತು ಹರೀಶ್ ಎಂಬವರನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story





