Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. SIR ಕರಡು ಪಟ್ಟಿ | ದಕ್ಷಿಣ ಕನ್ನಡ...

SIR ಕರಡು ಪಟ್ಟಿ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,50,153 ಮತದಾರರಿಗೆ ನೋಟೀಸ್: ಜಿಲ್ಲಾಧಿಕಾರಿ ದರ್ಶನ್

ಕರಡು ಪಟ್ಟಿಯಲ್ಲಿ 16,46,387 ಮತದಾರರು

ವಾರ್ತಾಭಾರತಿವಾರ್ತಾಭಾರತಿ24 Aug 2026 2:29 PM IST
share
SIR ಕರಡು ಪಟ್ಟಿ | ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,50,153 ಮತದಾರರಿಗೆ ನೋಟೀಸ್: ಜಿಲ್ಲಾಧಿಕಾರಿ ದರ್ಶನ್

ಮಂಗಳೂರು, ಆ.24: ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಡಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದ್ದು, ಅದರಂತೆ ದ.ಕ. ಜಿಲ್ಲೆಯಲ್ಲಿ 16,46,387 ಮತದಾರರಿದ್ದಾರೆ. ಮ್ಯಾಪಿಂಗ್ ಆಗದಿರುವ ಮತ್ತು ಹೆಸರು ಬದಲಾವಣೆ, ಪೋಷಕರ ಹೆಸರು ಬದಲಾವಣೆ, ವಯಸ್ಸಿನ ಅಂತರ ಸೇರಿದಂತೆ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ 1,50,153 ಮತದಾರರಿಗೆ ಬಿಎಲ್‌ಒಗಳ ಮೂಲಕ ನೋಟೀಸು ಹಂಚಿಕೆಯಾಗಲಿದೆ.

ದ.ಕ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ.ಯವರು ಸೋಮವಾರ ಪಡೀಲ್‌ನ ಪ್ರಜಾಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯ ಕರಡು ಮತದಾರರ ಮಾಹಿತಿಯನ್ನು ನೀಡಿದರು.

ಆ. 24ರಿಂದ ಆರಂಭಗೊಂಡು ಸೆಪ್ಟಂಬರ್ 23ರ ಅವಧಿಯಲ್ಲಿ ಕರಡು ಮತದಾರರ ಪಟ್ಟಿಯಿಂದ ಹೊರಗುಳಿದಿರುವ 1,50,153 ಮತದಾರರಿಗೆ ನೋಟೀಸು ಹಂಚಿಕೆಯಾಗಿ ಆ ಅವಧಿಯಲ್ಲಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ.

ವಿಚಾರಣೆಯ ದಿನಾಂಕ, ಸಮಯ ಮತ್ತು ಸ್ಥಳದ ವಿವರ ನೋಟೀಸಿನಲ್ಲಿ ಇರಲಿದ್ದು, ಬಿಎಲ್‌ಒಗಳು ನಿಗದಿತ ಅವಧಿಯೊಳಗೆ ನೋಟೀಸು ಮತದಾರರ ಮನೆಗಳಿಗೆ ತಲುಪಿಸಲಿದ್ದಾರೆ. ನೋಟೀಸಿನಲ್ಲಿ ತಿಳಿಸಲಾದ ನಿಗದಿತ ಅವಧಿಯೊಳಗೆ ಮತದಾರರು ಲಿಖಿತ ಮನವಿಯೊಂದಿಗೆ ಮತದಾರರ ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಯನ್ನು ಭೇಟಿಯಾಗಲು ಸಾಧ್ಯವಾಗದಿದ್ದಲ್ಲಿ ಮತ್ತೊಂದು ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿಯೂ ಮತದಾರರು ವಿಚಾರಣೆಗೆ ಹಾಜರಾಗದಿದ್ದರೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲಾಗುತ್ತದೆ ಎಂದು ಅವರು ಹೇಳಿದರು.

ಮತದಾರರು ವಿಚಾರಣೆಗೆ ಹಾಜರಾಗುವ ಸಂದರ್ಭ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿಕೊಂಡು ಬರಬೇಕು. ಮತದಾರರು ಆನ್‌ಲೈನ್ ಮೂಲಕ ದಾಖಲೆಗಳನ್ನು ಅಪ್‌ಲೋಡ್ ಮಾಡಬಹುದು. ಆದರೆ ಭೌತಿಕವಾಗಿ ಮತದಾರ ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿ ಎದುರು ಹಾಜರಾಗುವುದು ಕಡ್ಡಾಯ ಎಂದು ಜಿಲ್ಲಾಧಿಕಾರಿ ದರ್ಶನ್ ಸ್ಪಷ್ಟಪಡಿಸಿದರು.

ಈಗಾಗಲೇ ಚುನಾವಣಾ ಆಯೋಗವು ತಿಳಿಸಿರುವಂತೆ, 1987ರ ಜುಲೈ 1ಕ್ಕಿಂತ ಮೊದಲು ಜನಿಸಿದವರಾಗಿದ್ದರೆ ಸ್ವಂತಕ್ಕೆ ಸಂಬಂಧಿಸಿದಂತೆ ಜನ್ಮ ದಿನಾಂಕ ಮತ್ತು ಅಥವಾ ಜನ್ಮ ಸ್ಥಳವನ್ನು ದೃಢೀಕರಿಸುವ ದಾಖಲೆಯನ್ನು ಒದಗಿಸಬೇಕು.

1987 ಜುಲೈ 1ರಿಂದ 2004ರ ಡಿಸೆಂಬರ್ 2ರೊಳಗೆ ಜನಿಸಿದ್ದವರು ಜನ್ಮ ದಿನಾಂಕ, ಅಥವಾ ಜನ್ಮ ಸ್ಥಳವನ್ನು ದೃಢೀಕರಿಸುವ ದಾಖಲೆ ಜತೆಗೆ ತಂದೆ ಅಥವಾ ತಾಯಿಗೆ ಸಂಬಂಧಿಸಿದಂತೆ ಅವರ ಜನ್ಮ ದಿನಾಂಕ ಅಥವಾ ಜನ್ಮ ಸ್ಥಳವನ್ನು ದೃಢೀಕರಿಸುವ ದಾಖಲೆಗಳನ್ನು ಸಲ್ಲಿಸಬೇಕು ಎಂದು ಅವರು ಹೇಳಿದರು.

ಜಿಲ್ಲೆಯ ಎಸ್‌ಐಆರ್ ಪ್ರಕ್ರಿಯೆಯ ವಿವರ

*2026ರ ಜೂ.16ರಂತೆ ಜಿಲ್ಲೆಯಲ್ಲಿರುವ ಮತದಾರರು: 18,03,766

* ಹಂಚಿಕೆ ಮಾಡಲಾದ ಎನುಮರೇಶನ್ ಫಾರಂಗಳ ಸಂಖ್ಯೆ: 18,03,766

*ಡಿಜಿಟೈಸ್ ಮಾಡಿದ ಎನುಮರೇಶನ್ ಫಾರಂಗಳ ಸಂಖ್ಯೆ: 16,46,387 (ಶೇ.91.27)

*ಎಎಸ್‌ಡಿಡಿ ಮಾರ್ಕ್ ಮಾಡಿರುವ ಸಂಖ್ಯೆ: 1,57,379 (ಶೇ.8.73)

*ಗೈರು ಮತದಾರರು: 11,124 (ಶೇ.0.62)

*ಶಾಶ್ವತವಾಗಿ ವಲಸೆ ಹೋಗಿರುವ ಮತದಾರರು: 82988(ಶೇ.4.60)

* ಮರಣ ಹೊಂದಿರುವ ಮತದಾರರು: 45,318 (ಶೇ.2.51)

* ಬೇರೆಡೆ ಮತಪತ್ರ ಹೊಂದಿರುವವರು: 15,395 (ಶೇ.0.85)

*ಇತರೆ: 2,554 (ಶೇ.0.14)

154 ಹೆಚ್ಚುವರಿ ಸಹಾಯಕ ನೋಂದಣಾಧಿಕಾರಿಗಳಿಗೆ ಗೆ ಪ್ರಸ್ತಾವ

ದ.ಕ.ಜಿಲ್ಲೆಯಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಸದ್ಯ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚುವರಿಯಾಗಿ 154 ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ನೇಮಿಸಲು ಚುನಾವಣಾ ಆಯೋಗಕ್ಕೆ ಪ್ರಸ್ತಾವ ಸಲ್ಲಿಕೆಯಾಗಿದ್ದು, ಒಂದೆರಡು ದಿನಗಳಲ್ಲಿ ಸಮ್ಮತಿ ಸಿಗಲಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.

ಗೋಷ್ಟಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ., ನಗರಾಭಿವೃದ್ಧಿ ಯೋಜನಾ ನಿರ್ದೇಶಕ ಡಾ. ಸಂತೋಷ್ ಕುಮಾರ್, ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಅಕ್ಷತಾ ಮೊದಲಾದವರು ಉಪಸ್ಥಿತರಿದ್ದರು.

ನೋಟೀಸ್ ಬಂದರೆ ಕೈಬಿಡುವುದು ಎಂದರ್ಥವಲ್ಲ

2026ರ ಜೂನ್‌ವರೆಗಿನ ಮತದಾರರ ಪಟ್ಟಿಯಲ್ಲಿ ಹೆಸರಿದ್ದರೂ, 2002ರ ಮತದಾರರ ಪಟ್ಟಿಗೆ ಮ್ಯಾಪಿಂಗ್ ಸಂದರ್ಭ ಹೆಸರು ಬಿಟ್ಟು ಹೋಗಿದ್ದಲ್ಲಿ ಅತವಾ ಹೆಸರಿನಲ್ಲಿನ ಬದಲಾವಣೆ ಹಾಗೂ ಇತರ ಕಾರಣದಿಂದ ಕರಡು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿರುವ ಮತದಾರರಿಗೆ ನೋಟೀಸ್ ಬಂದರೆ ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದು ಎಂದರ್ಥವಲ್ಲ. ಈ ಬಗ್ಗೆ ಯಾವುದೇ ರೀತಿಯ ಅನಗತ್ಯ ಭಯ ಮತದಾರರಿಗೆ ಬೇಡ. ದಾಖಲೆಗಳನ್ನು ಪಡೆದು ಮತ್ತೆ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ಮೂಲಕ ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಪ್ರಕಟವಾಗುವಂತೆ ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದರು.

Tags

SIRD.Kvotersdraft list
share
ವಾರ್ತಾಭಾರತಿ
ವಾರ್ತಾಭಾರತಿ
Next Story
X