Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ :...

ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : ಪೊಲೀಸರ ವಿರುದ್ಧ ದ.ಕ. ಮೊಗವೀರ ಸಂಯುಕ್ತ ಸಭಾದ ಆಕ್ರೋಶ

ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆ ದಾಖಲಿಸಲು ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ2 Nov 2026 3:44 PM IST
share
ಸೋಮನಾಥ್ ಪುತ್ರನ್ ಆತ್ಮಹತ್ಯೆ ಪ್ರಕರಣ : ಪೊಲೀಸರ ವಿರುದ್ಧ ದ.ಕ. ಮೊಗವೀರ ಸಂಯುಕ್ತ ಸಭಾದ ಆಕ್ರೋಶ

ಮಂಗಳೂರು : ಮೀನುಗಾರ ಸಮುದಾಯದ ಸೋಮನಾಥ ಪುತ್ರನ್ ಅವರ ಆತ್ಮಹತ್ಯೆಗೆ ಸುರತ್ಕಲ್ ಪೊಲೀಸ್ ಠಾಣೆಯ ಪೊಲೀಸ ದೌರ್ಜನ್ಯ ಕಾರಣ ಎಂದು ಆರೋಪಿಸುವ ದ.ಕ.ಮೊಗವೀರ ಸಂಯುಕ್ತ ಸಭಾ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಬಿಎನ್‌ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅಮಾನತು ಮಾಡಬೇಕು ಎಂದು ಆಗ್ರಹಿಸಿದೆ.

ಮಂಗಳೂರು ಉರ್ವಾ ಮಾರಿಗುಡಿ ದೇವಸ್ಥಾನದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಈ ಆರೋಪ ಮಾಡಿದ ಸಂಯುಕ್ತ ಸಭಾದ ಅಧ್ಯಕ್ಷ ಭರತ್ ಉಳ್ಳಾಲ್, ಮೃತರು ಕುಟುಂಬದ ಏಕೈಕ ದುಡಿಯುವ ವ್ಯಕ್ತಿಯಾಗಿದ್ದು, ಅಪರಾ ಹಿನ್ನೆಲೆ ಹೊಂದದ ವ್ಯಕ್ತಿ. ಈ ಪ್ರಕರಣದ ಸೂಕ್ತ ನ್ಯಾಯಾಂಗ ತನಿಖೆ ನಡೆಸಲು ಒತ್ತಾಯಿಸಿ ಮುಖ್ಯಮಂತ್ರಿ, ಗೃಹ ಹಾಗೂ ಉಸ್ತುವಾರಿ ಸಚಿವರು, ಹಾಗೂ ಮಾನವ ಹಕ್ಕುಗಳ ಆಯೋಗಕ್ಕೆ ಮನವಿ ಸಲ್ಲಿಸುವುದಾಗಿ ಹೇಳಿದರು.

ಸೋಮನಾಥ್ ಪುತ್ರನ್‌ರವರ ಪತ್ನಿ ತನ್ನ ಪತಿ ಆತ್ಮಹತ್ಯೆಗೆ ಕಾರಣವಾದ ಜೋಡಿ ವಿರುದ್ಧ ದೂರು ನೀಡಿದ್ದರೂ ಈವರೆಗೆ ಬಂಧಿಸಿಲ್ಲ. ಪ್ರಕರಣದ ಜೋಡಿಯ ಹೆಸರನ್ನು ಎಫ್ ಐಆರ್ ನಲ್ಲಿ ನಮೂದಿಸದೆ ಇರುವುದು ಅನುಮಾನ ತಂದಿದೆ. 48 ಗಂಟೆಯೊಳಗೆ ಬಂಧಿಸಬೇಕು. ಪೊಲೀಸ್ ಇಲಾಖೆಯಿಂದ ತಖೆ ನಿಷ್ಪಕ್ಷಪಾತವಾಗಿ ನಡೆಯಲು ಸಾಧ್ಯವಿಲ್ಲದ ಕಾರಣ, ನಿವೃತ್ತ/ಹಾಲಿ ಜಿಲ್ಲಾ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ಅಥವಾ ಇಐಈ ತನಿಖೆ ನಡೆಸಬೇಕು ಮತ್ತು 30 ದಿನದೊಳಗೆ ವರದಿ ಸಾರ್ವಜನಿಕಗೊಳಿಸಬೇಕು. ಪೊಲೀಸ್ ಠಾಣೆಯ ಸಿಸಿಟಿವಿ ದೃಶ್ಯಾವಳಿ, ಜನರಲ್ ಡೈರಿ ಹಾಗೂ ದಾಖಲೆಗಳನ್ನು ಕೂಡಲೇ ವಶಪಡಿಸಿಕೊಳ್ಳಬೇಕು. ಮೃತ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಕೋಟಿ ರೂ. ಪರಿಹಾರ ನೀಡಬೇಕು. ಮೃತರ ಪತ್ನಿಗೆ ಅನುಕಂಪದ ಆಧಾರದ ಮೇಲೆ ಸರಕಾರಿ ನೌಕರಿ ನೀಡಬೇಕು. ಮೃತರ ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಬೇಕು ಎಂದು ಬೇಡಿಕೆಗಳನ್ನು ಮೊಗವೀರ ಸಂಯುಕ್ತ ಸಭಾ ಸರಕಾರದ ಮುಂದಿಟ್ಟಿರುವುದಾಗಿ ಅವರು ಹೇಳಿದರು.

ಸಾಕ್ಷಿದಾರರು ಮತ್ತು ಮೃತ ಕುಟುಂಬದವರ ಮೇಲೆ ಯಾವುದೇ ಸುಳ್ಳು, ಪ್ರಕರಣ ದಾಖಲಿಸುವುದಿಲ್ಲ ಎಂಬ ಭರವಸೆ, ಈ ಪ್ರಕರಣದ ಬಗ್ಗೆ ಪೊಲೀಸರಿಗೆ ನಿರ್ದೇಶನ ನೀಡಿದ ಉನ್ನತಾಧಿಕಾರಿಯ ವಿರುದ್ಧ ಇಲಾಖಾ ಕ್ರಮ ಹಾಗೂ ಕರಾವಳಿಯ ಪೊಲೀಸ್ ಠಾಣೆಗಳಲ್ಲಿ ಮೀನುಗಾರರ ರಕ್ಷಣಾ ಕೋಶ ರಚಿಸಿ, ಪೊಲೀಸರಿಗೆ ಮೀನುಗಾರರೊಂದಿಗೆ ವ್ಯವಹರಿಸುವ ಬಗ್ಗೆ ತರಬೇತಿ ನೀಡಬೇಕು ಎಂದು ಭರತ್ ಉಳ್ಳಾಲ್ ಅವರು ಒತ್ತಾಯಿಸಿದರು.

ಮೀನುಗಾರ ಸಮುದಾಯದ ವಿವಿಧ ಸಂಘಟನೆಗಳ ಮುಖಂಡರಾದ ಜಯ ಸಿ. ಕೋಟ್ಯಾನ್, ಶರಣ್, ಉದಯ್ ಕುಮಾರ್, ಚಂದ್ರಕಾಂತ್, ವಿನಯ್ ಸೇರಿದಂತೆ ಇತರ ಅನೇಕರು ಉಪಸ್ಥಿತರಿದ್ದರು.

ನಮ್ಮ ಜಾಗಕ್ಕೆ ಬಂದವರಿಗೆ ಬುದ್ಧಿವಾದ ಹೇಳುವುದು ಅನೈತಿಕ ಪೊಲೀಸ್‌ಗಿರಿಯೇ? :

‘ರಾತ್ರಿ ಹೊತ್ತಿನಲ್ಲಿ ಸುರತ್ಕಲ್ ಬೀಚ್‌ನಿಂದ ದೂರವಿರುವ ಸೋಮನಾಥ ಅವರ ಮನೆಯ ಸಮೀಪದಲ್ಲಿ ಜೋಡಿಯೊಂದು ಅನುಚಿತವಾಗಿ ವರ್ತಿಸಿದ್ದ ಬಗ್ಗೆ ಪ್ರಶ್ನಿಸಿದ್ದಾರೆ. ಸೋಮನಾಥ ಅವರು ಮದ್ಯ ಸೇವನೆ ಮಾಡಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಯುವತಿ ಡ್ರಗ್ಸ್ ಸೇವನೆ ಮಾಡಿದ್ದರೇ ಎಂಬುದನ್ನು ಪರಿಶೀಲನೆ ಮಾಡಿದ್ದಾರೆಯೇ? ಆಕೆ ದಿಲ್ಲಿಯಿಂದ ಡ್ರಗ್ಸ್ ಮಾರಾಟ ಮಾಡಲು ಬಂದಿರುವ ಅನುಮಾನ ನಮಗಿದೆ’ ಎಂದು ಆರೋಪಿಸಿದ ಭರತ್ ಉಳ್ಳಾಲ್, ಸೋಮನಾಥ ಪುತ್ರನ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೀನುಗಾರ ಸಮುದಾಯದ ಪ್ರಮುಖ ಐದು ಬೇಡಿಕೆಗಳನ್ನು 48 ಗಂಟೆಯೊಳಗೆ ಈಡೇರಿಸದಿದ್ದರೆ, ಕರಾವಳಿಯ ಮೀನುಗಾರ ಸಮುದಾಯ ಎಂಆರ್‌ಪಿಎಲ್ ವಿರುದ್ಧ ನಡೆದ ಪ್ರತಿಭಟನೆಗಿಂತ ತೀವ್ರವಾಗಿ ಪ್ರತಿಭಟನೆ ನಡೆಸಲಿದೆ’ಎಂದು ಎಚ್ಚರಿಕೆ ನೀಡಿದ್ದಾರೆ.

‘ಕರಾವಳಿಯ ಭದ್ರತೆಗೆ ಸಂಬಂಧಿಸಿ ಮೀನುಗಾರ ಸಮುದಾಯ ರಕ್ಷಣಾ ಕವಚವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಂತಹ ಮೀನುಗಾರ ಸಮುದಾಯ ವ್ಯಕ್ತಿಯೊಬ್ಬರಿಗೆ ಪೊಲೀಸರಿಂದ ಅನ್ಯಾಯವಾಗಿದೆ. ಈ ಬಗ್ಗೆ ಸಮರ್ಪಕ ನ್ಯಾಯಾಂಗ ತನಿಖೆ ಆಗಲಿ ಎಂಬುದು ನಮ್ಮ ಆಗ್ರಹ. ಸೋಮನಾಥ ಅವರ ತಪ್ಪಿದ್ದರೆ ನಾವು ಹೋರಾಟ ನಿಲ್ಲಿಸುತ್ತೇವೆ. ಇಲ್ಲವಾದಲ್ಲಿ ಈ ಹೋರಾಟ ಉಗ್ರ ರೂಪದಲ್ಲಿ ಮುಂದುವರಿಯಲಿದೆ’ ಎಂದು ಮೀನುಗಾರ ಮುಖಂಡ ಯತೀಶ್ ಬೈಕಂಪಾಡಿ ಹೇಳಿದರು.

Tags

policeMogaveera Samyukta SabhaDakshina Kannadasuicide case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X