Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೌಜನ್ಯ ಪ್ರಕರಣ:ಜಿಲ್ಲಾ ಮಟ್ಟದ ಧರಣಿ...

ಸೌಜನ್ಯ ಪ್ರಕರಣ:ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 Sept 2023 4:02 PM IST
share
ಸೌಜನ್ಯ ಪ್ರಕರಣ:ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹಕ್ಕೆ ಚಾಲನೆ

ಮಂಗಳೂರು,ಸೆ.12:ಸೌಜನ್ಯ ಅತ್ಯಾಚಾರ ಮತ್ತು ಕೊಲೆ ನಡೆಸಿದ ನೈಜ ಆರೋಪಗಳನ್ನು ಪತ್ತೆಹಚ್ಚಬೇಕು ಎಂದು ಆಗ್ರಹಿಸಿ ಜಿಲ್ಲಾ ಒಕ್ಕಲಿಗರ ಹೋರಾಟ ಸಮಿತಿ ವತಿಯಿಂದ ಎರಡು ದಿನಗಳ ಜಿಲ್ಲಾ ಮಟ್ಟದ ಧರಣಿ ಸತ್ಯಾಗ್ರಹ ನಗರದ ಕ್ಲಾಕ್ ಟವರ್ ಬಳಿ ಮಂಗಳವಾರ ಬೆಳಿಗ್ಗೆ ಆರಂಭಗೊಂಡಿತು.

ಧರಣಿ ಸತ್ಯಾಗ್ರಹವನ್ನು ಸೌಜನ್ಯ ತಾತ ಬಾಬು ಗೌಡ ಉದ್ಘಾಟಿಸಿದರು. ಬಳಿಕ ಮಹಾತ್ಮಾ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹೋರಾಟಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಹೋರಾಟ ಸಮಿತಿಯ ಪ್ರಧಾನ ಸಂಚಾಲಕ ಬಾಲಕೃಷ್ಣ ಗೌಡ ಡಿಬಿ ಅವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಅಪರಾಧಿಗಳನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷಿಸಬೇಕು, ಈಗಾಗಲೇ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಮತ್ತು ವೈದ್ಯರನ್ನು ಮಂಪರು ಪರೀಕ್ಷೆಗೊಳಪಡಿಸಬೇಕು ಎಂದು ಆಗ್ರಹಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯ ಜನರು ಸೌಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಮತ್ತು ಈ ಹೋರಾಟಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನಾವು ಒಂದು ವಾರ ಧರಣಿ ನಡೆಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದೆವು. ಆದರೆ ನಮಗೆ ಎರಡು ದಿನಗಳ ಕಾಲ ಹೋರಾಟ ನಡೆಸಲು ಅನುಮತಿ ಸಿಕ್ಕಿದೆ. ಜಿಲ್ಲೆಯ ಆರು ತಾಲೂಕುಗಳ ಒಕ್ಕಲಿಗರ ಯಾನೆ ಗೌಡರ ಯಾನೆ ಸಂಘಟನೆಯ ಸದಸ್ಯರು ಭಾಗವಹಿಸುತ್ತಿದ್ದಾರೆ. ಇವತ್ತು ಮೂರು ತಾಲೂಕುಗಳ ಮತ್ತು ನಾಳೆ ಮೂರು ತಾಲೂಕುಗಳ ಸಂಘದ ಧುರೀಣರು ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ಆಯುಕ್ತ ರು ಸ್ಥಳಕ್ಕೆ ಆಗಮಿಸಿ ನಮ್ಮ ಮನವಿಯನ್ನು ಸ್ವೀಕರಿಸಬೇಕು ಎಂದು ಆಗ್ರಹಿಸಿದರು.

ಮಂಗಳೂರು ಒಕ್ಕಲಿಗರ ಸಮಾಜದ ಅಧ್ಯಕ್ಷ ಗುರುದೇವ್ ಯು ಬಿ ಅವರು ಸೌಜನ್ಯ ಪ್ರಕರಣದಲ್ಲಿ 11 ವರ್ಷಗಳ ವಿಚಾರಣೆ ನಡೆದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.ಅಂದು ಆರೋಪಿಯಾಗಿ ಗುರುತಿಸಿಕೊಂಡಿದ್ದ ವ್ಯಕ್ತಿ ನಿರಪರಾಧಿ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ. ಆದರೆ ಸೌಜನ್ಯ ಮೇಲೆ ಅತ್ಯಾಚಾರ ನಡೆಸಿದ ಮತ್ತು ಆಕೆಯನ್ನು ಕೊಲೆಗೈದ ನೈಜ ಅಪರಾಧಿ ಮತ್ತು ಇದಕ್ಕೆ ನೆರವು ನೀಡಿದವರು ಯಾರು ಎಂಬ ವಿಚಾರ ತನಿಖೆಯಿಂದ ಹೊರ ಬಂದಿಲ್ಲ ಎಂದರು. ಯಾವುದೇ ಹೆಣ್ಣಿಗೂ ಸೌಜನ್ಯಳಿಗೆ ಆಗಿರುವ ಸ್ಥಿತಿ ಬರಬಾರದು. ಸೌಜನ್ಯ ಪ್ರಕರಣ ತಾರ್ಕಿಕವಾದ ಅಂತ್ಯ ತಲುಪಬೇಕು ಎನ್ನುವುದು ನಮ್ಮ ಹೋರಾಟವಾಗಿದೆ ಎಂದು ಹೇಳಿದರು.

ಧರಣಿಯಲ್ಲಿ ಗೌಡರ ಯಾನೆ ಒಕ್ಕಲಿಗರ ಸಂಘದ ವಿವಿಧ ತಾಲೂಕುಗಳ ಧುರೀಣರಾದ ಕುಶಾಲಪ್ಪ ಗೌಡ ಪೂವಾಜೆ ,ಪದ್ಮನಾಭ ಗೌಡ ಬೆಳ್ತಂಗಡಿ, ಚಂದ್ರ ಕೊಳ್ಚಾರ್ ಸುಳ್ಯ, ಸುರೇಶ್ ಬೈಲ್ ಕಡಬ, ಮೋನಪ್ಪ ಗೌಡ ವಿಟ್ಲ, ಧರ್ಮಾವತಿ ಗೌಡ,ಕಿರಣ್ ಬುಡ್ಲೆಗುತ್ತು,ರಕ್ಷಿತ್ ,ನಾಗೇಶ ಗೌಡ ಮತ್ತಿತರರು ಭಾಗವಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X