ಸ್ಪೀಕರ್ ಸೂಚನೆ: ನೇತ್ರಾವತಿ ಸೇತುವೆಯ ಗುಂಡಿಗಳಿಗೆ ಕಾಯಕಲ್ಪ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 17ರ ನೇತ್ರಾವತಿ ಸೇತುವೆಯಲ್ಲಿ ಕಾಣಿಸಿಕೊಂಡಿರುವ ಗುಂಡಿಗಳನ್ನು ಮುಚ್ಚಲು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್ ಸೂಚನೆಯ ಹಿನ್ನೆಲೆಯಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ.
ಮಂಗಳೂರು ನೇತ್ರಾವತಿ ಸೇತುವೆಯಲ್ಲಿ ರಸ್ತೆ ಗುಂಡಿ ಕಾಣಿಸಿಕೊಂಡಿರುವ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಕಂಡ ಸಭಾಧ್ಯಕ್ಷ ಯು.ಟಿ.ಖಾದರ್ ತಕ್ಷಣ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಅದರಂತೆ ಇಂದು ಸೇತುವೆ ಸರಿಪಡಿಸುವ ಕಾರ್ಯ ಪ್ರಾರಂಭಗೊಂಡಿದ್ದು, ವಾಹನ ಚಾಲಕರು ನಿರಾಳರಾಗಿದ್ದಾರೆ.
Next Story







