Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಜ್, ಉಮ್ರಾ ನಿರ್ವಾಹಕ ಖಾಸಗಿ...

ಹಜ್, ಉಮ್ರಾ ನಿರ್ವಾಹಕ ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿ ವಿಶೇಷ ಕಾನೂನು ಜಾರಿ: ಯು.ಟಿ.ಖಾದರ್

Meeladunnabi | ಕೋಟೆಪುರದಿಂದ ಉಳ್ಳಾಲ ದರ್ಗಾದ ವರೆಗೆ ಕಾಲ್ನಡಿಗೆ ಜಾಥಾ

ವಾರ್ತಾಭಾರತಿವಾರ್ತಾಭಾರತಿ25 Aug 2026 12:42 PM IST
share
ಹಜ್, ಉಮ್ರಾ ನಿರ್ವಾಹಕ ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿ ವಿಶೇಷ ಕಾನೂನು ಜಾರಿ: ಯು.ಟಿ.ಖಾದರ್

ಉಳ್ಳಾಲ, ಆ.25: ಹಜ್, ಉಮ್ರಾ ವ್ಯವಸ್ಥೆ ಮಾಡುವ ಖಾಸಗಿ ಸಂಸ್ಥೆಗಳು ಯಾತ್ರಾರ್ಥಿಗಳನ್ನು ಅರ್ಧದಾರಿಯಲ್ಲಿ ಬಿಟ್ಟು ಬಂದಿರುವ ಬಗ್ಗೆ ಆರೋಪಗಳು ಬಹಳಷ್ಟು ಇವೆ. ಈ ಹಿನ್ನೆಲೆಯಲ್ಲಿ ಹಜ್, ಉರ್ಮಾ ನಿರ್ವಾಹಕ ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿ ವಿಶೇಷ ಕಾನೂನು ಜಾರಿ ಮಾಡಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ..

ಅವರು ಮೀಲಾದುನ್ನಬಿ ಪ್ರಯುಕ್ತ ಉಳ್ಳಾಲ ದರ್ಗಾ ಅಧೀನದಲ್ಲಿ ಬರುವ 27 ಮೊಹಲ್ಲಾಗಳ ವ್ಯಾಪ್ತಿಯ 34 ಮದ್ರಸ ವಿದ್ಯಾರ್ಥಿಗಳನ್ನು ಒಳಗೊಂಡ ಮೀಲಾದ್ ಕಾಲ್ನಡಿಗೆ ಜಾಥಾಕ್ಕೆ ಕೋಟೆಪುರದಲ್ಲಿ ಚಾಲನೆ ನೀಡಿ ಮಾತನಾಡುತ್ತಿದ್ದರು.

ಈ ಬಾರಿ 11 ಸಾವಿರ ಮಂದಿ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಿದ್ದಾರೆ. ಹಜ್ ಜೊತೆ ಉಮ್ರಾವನ್ನು ಹಜ್ ಕಮಿಟಿಯ ಅಧೀನದಲ್ಲಿ ವ್ಯವಸ್ಥೆ ಮಾಡಲಾಗುವುದು. ಯಾತ್ರಾರ್ಥಿಗಳ ಮಾಹಿತಿ ಪಡೆಯಲು ವೆಬ್ ಪೋರ್ಟಲ್ ಆರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಲ್ಲಿ ಈಗಾಗಲೇ ಹಜ್ ಭವನ ನಿರ್ಮಾಣಗೋಂಡಿದ್ದು, ಬೆಂಗಳೂರು ಮೂಲಕ ಹಜ್ ಯಾತ್ರೆ ತೆರಳುವವರಿಗೆ ಈ ಭವನದಲ್ಲೇ ವ್ಯವಸ್ಥೆ ಮಾಡಲಾಗಿದೆ. ಮುಂದಿನ ಹಂತದಲ್ಲಿ ಬಜ್ಪೆಯಲ್ಲಿ ಹಜ್ ಭವನ ನಿರ್ಮಾಣ ಆಗಲಿದ್ದು, ಇಲ್ಲಿನ ಹಜ್ ಯಾತ್ರಾರ್ಥಿಗಳಿಗೆ ಮಂಗಳೂರಿನಿಂದ ನೇರ ಹಜ್ ಗೆ ತೆರಳುವ ವ್ಯವಸ್ಥೆ ಶೀಘ್ರ ಮಾಡಲಾಗುವುದು ಎಂದು ಖಾದರ್ ಭರವಸೆ ನೀಡಿದರು

ಪ್ರವಾದಿ ಜನ್ಮ ದಿನವಾದ ಇಂದು ನಾವು ಮೀಲಾದುನ್ನಬಿ ಆಚರಣೆಯ ಜೊತೆಗೆ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಮೈಗೂಡಿಸಿಕೊಳ್ಳಬೇಕು ಎಂದು ಯು.ಟಿ.ಖಾದರ್ ಕರೆ ನೀಡಿದರು.

ಉಳ್ಳಾಲ ದರ್ಗಾ ಆಡಳಿತ ಸಮಿತಿಯ ಅಧ್ಯಕ್ಷ ಹನೀಫ್ ಹಾಜಿ ಅಧ್ಯಕ್ಷತೆ ವಹಿಸಿದ್ದರು.

ಸಮಿತಿಯ ಕೋಶಾಧಿಕಾರಿ ನಾಝಿಮ್ ಮುಕ್ಕಚ್ಚೇರಿ ಅಬ್ದುಲ್ ಖಾದರ್ ಕೋಡಿ, ಕಾರ್ಯದರ್ಶಿ ಮುಸ್ತಫ ಮದನಿ ನಗರ, ಕಣಚೂರು ಮೋನು, ಕೋಟೆಪುರ ಮಸೀದಿಯ ಅಧ್ಯಕ್ಷ ಫಾರೂಕ್ ಅಬ್ಬಾಸ್ ಕೋಟೆಪುರ, ಅಬ್ಬಾಸ್ ಕೋಟೆಪುರ, ಮದನಿ ಕಾಲೇಜು ಅಹ್ಮದ್ ಕುಟ್ಟಿ ಮುಸ್ಲಿಯಾರ್, ಮೋನು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಬೋಳಿಯಾರ್, ಅರಬಿಕ್ ಟ್ರಸ್ಟ್ ಉಪಾಧ್ಯಕ್ಷ ಅಶ್ರಫ್ ಹಾಜಿ ಕೋಡಿ, ದರ್ಗಾ ಅಧೀನದ 27 ಮೊಹಲ್ಲಾ ಗಳ ವ್ಯಾಪ್ತಿಯ 34 ಮದ್ರಸ, ಮಸೀದಿಗಳ ಖತೀಬರು ಮುಅಲ್ಲಿಂಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕೋಟೆಪುರ ಮಸೀದಿ ಖತೀಬ್ ಇರ್ಷಾದ್ ಸಖಾಫಿ ದುಆ ನೆರವೇರಿಸಿದರು. ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ ಸ್ವಾಗತಿಸಿದರು.

ಕೋಟೆಪುರದಿಂದ ಹೊರಟ ಜಾಥಾ ಮುಕ್ಕಚ್ಚೇರಿ, ಆಝಾದ್ ನಗರ ರಸ್ತೆಯಾಗಿ ಮೇಲಂಗಡಿ ಮೂಲಕ ಸಾಗಿ ಉಳ್ಳಾಲ ಸೈಯದ್ ಮದನಿ ದರ್ಗಾದಲ್ಲಿ ಸಮಾಪನಗೊಂಡಿತು.

Tags

Special LawHaj and UmrahUT Khader
share
ವಾರ್ತಾಭಾರತಿ
ವಾರ್ತಾಭಾರತಿ
Next Story
X