Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ...

ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ2 Sept 2026 3:15 PM IST
share
ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ: ಸಚಿವ ಖಾದರ್‌ರಿಂದ ಪೋಸ್ಟರ್ ಬಿಡುಗಡೆ

ಮಂಗಳೂರು, ಸೆ.2: ಕರ್ನಾಟಕ ಸರಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಅಧೀನದ ಕರ್ನಾಟಕ ವೃತ್ತಿ ಶಿಕ್ಷಣ ಅಭಿವೃದ್ಧಿ ನಿಗಮದ ವತಿಯಿಂದ ಅಂತಾರಾಷ್ಟ್ರೀಯ ನೇಮಕಾತಿ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿ. ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶ ಪರಿಚಯಿಸುವ ಉದ್ದೇಶದಿಂದ ಜಾರಿಗೆ ತರಲಾಗಿರುವ ‘ವಿದೇಶದಲ್ಲಿ ಅಧ್ಯಯನ’ ಕಾರ್ಯಕ್ರಮದ ಪೋಸ್ಟರನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವ ಯು.ಟಿ.ಖಾದರ್ ನೆರವೇರಿಸಿದರು.

ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ಪೋಸ್ಟರ್ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಈ ವರ್ಷ ಸೆ. 6ರಂದು ವಿದೇಶದಲ್ಲಿ ಅಧ್ಯಯನ ಕಾರ್ಯಕ್ರಮ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದೆ ಎಂದರು.

ಪದವಿ ಮತ್ತು ಮೇಲ್ಪಟ್ಟ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಬಹುದು. ಆಸ್ಟ್ರೇಲಿಯಾ, ಅಮೆರಿಕ, ಇಂಗ್ಲೆಂಡ್, ಜರ್ಮನಿ, ಸಿಂಗಾಪುರ, ಯುಎಇ, ಐರ್ಲೆಂಡ್, ನ್ಯೂಝಿಲೆಂಡ್‌ ಹಾಗೂ ಇತರ ದೇಶಗಳಲ್ಲಿ 75ಕ್ಕೂ ಅಧಿಕ ಜಾಗತಿಕ ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡುವ ಅವಕಾಶವಿದೆ. ಶೇ. 50ರಷ್ಟು ವಿದ್ಯಾರ್ಥಿ ವೇತನ ದೊರೆಯಲಿದ್ದು, ಕಾರ್ಯಕ್ರಮದಲ್ಲಿ ಅಧ್ಯಯನದ ಬಗ್ಗೆ ವೈಯಕ್ತಿಕ ಸಮಾಲೋಚನೆ, ಲಭ್ಯವಿರುವ ವಿದ್ಯಾರ್ಥಿ ವೇತನ ಮತ್ತು ಸ್ಥಳದಲ್ಲೇ ಅರ್ಹತಾ ಮೌಲ್ಯಮಾಪನ, ವಿವಿ ಪ್ರವೇಶ, ವೀಸಾ, ಹಣಕಾಸು, ಆರೋಗ್ಯ ವಿಮೆ ಕುರಿತು ಮಾರ್ಗದರ್ಶನ, ಭಾಷಾ ನೈಪುಣ್ಯತೆಯ ಮಾರ್ಗದಶನ ಹಾಗೂ ಅರ್ಜಿ ಸಲ್ಲಿಕೆಯ ಸಹಾಯ ಪಡೆಯಬಹುದು ಎಂದು ಅವರು ಹೇಳಿದರು.

ಆಸಕ್ತ ಅಭ್ಯರ್ಥಿಗಳು https:studyabroad.ksdckarnataka.com ಮೂಲಕ ಸೆ.6ರೊಳಗೆ ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗೆ 7338674791ಗೆ ಕರೆ ಮಾಡಬಹುದು.

Tags

UT KhaderStudy abroad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X