Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ...

ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿಮೋಫೀಲಿಯಾ ಪೀಡಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ವಾರ್ತಾಭಾರತಿವಾರ್ತಾಭಾರತಿ9 May 2025 10:54 AM IST
share
ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಯಲ್ಲಿ ಹಿಮೋಫೀಲಿಯಾ ಪೀಡಿತ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಮಂಗಳೂರು : 175 ವರ್ಷಗಳ ಸುಂದರ ಇತಿಹಾಸವನ್ನು ಹೊಂದಿ ಸಂಭ್ರಮಾಚರಣೆಯಲ್ಲಿರುವ ಮಂಗಳೂರಿನ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಅಪರೂಪದ ಹಾಗೂ ಮಾರಣಾಂತಿಕವಾದ ಖಾಯಿಲೆಯನ್ನು ಹೊಂದಿದ ಗರ್ಭಿಣಿ ಸ್ತ್ರೀ ಒಬ್ಬರ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಿರ್ವಹಿಸಿ, ತಾಯಿ ಮಗುವಿನ ಪ್ರಾಣ ಸಂರಕ್ಷಣೆಯನ್ನು ಮಾಡಿ ದಾಖಲೆ ನಿರ್ಮಿಸಿದೆ.

ಹುಟ್ಟಿನಿಂದ ರಕ್ತಸಂಬಂಧಿತ ಕಾಯಿಲೆಯಾದ ಹಿಮೋಫೀಲಿಯಾ(Von-Willebrands disease) ಖಾಯಿಲೆಯನ್ನು ಹೊಂದಿದ ಮಹಿಳೆಯೊಬ್ಬರು, ಬಾಲ್ಯದಿಂದಲೇ ಇದಕ್ಕೆ ಸಂಬಂಧಿತ ಚಿಕಿತ್ಸೆಯನ್ನು ಖಾಸಗಿ ಆಸ್ಪತ್ರೆಯಿಂದ ಪಡೆದುಕೊಂಡು ಬರುತ್ತಿದ್ದರು. ಪ್ರಾಯ ಪ್ರಬುದ್ಧರಾಗಿ ವೈವಾಹಿಕ ಜೀವನವನ್ನು ಪ್ರಾರಂಭಿಸಿದ ನಂತರ ಸಹಜವಾಗಿ ಗರ್ಭವತಿಯಾದರು. ಆದರೆ, ಗರ್ಭಾವಸ್ಥೆಯಲ್ಲಿ ಹೀಮೋಫೀಲಿಯಾ(ವಾನ್ ವಿಲ್ಲಿ ಬ್ರಾಂಡ್ಸ್ ಖಾಯಿಲೆ)ಇದ್ದಲ್ಲಿ ಯಾವುದೇ ಸಮಯದಲ್ಲಿ ರಕ್ತಸ್ರಾವ ಆಗಿ ತಾಯಿ ಮರಣ ಆಗುವ ಸಾಧ್ಯತೆವಿರುತ್ತದೆ. ಸಾಮಾನ್ಯವಾಗಿ ದೇಹದಿಂದ ರಕ್ತಸ್ರಾವವಾಗುವ ಸಂದರ್ಭದಲ್ಲಿ ರಕ್ತಸ್ರಾವವನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವ ಫ್ಯಾಕ್ಟರ್ 8ರ ಕೊರತೆ ಈ ಖಾಯಿಲೆಯ ಬಹುಮುಖ್ಯ ಮೂಲ ಅಂಶ.

ನಿರ್ಧಿಷ್ಟವಾದ ಈ ಫ್ಯಾಕ್ಟರ್ ಅನ್ನು ನಿರಂತರವಾಗಿ ಕೃತಕ ರೂಪದಲ್ಲಿ ಗರ್ಭಿಣಿಗೆ ಅಥವಾ ರೋಗಿಗೆ ನೀಡಬೇಕಾಗುತ್ತದೆ. ದುರಾದೃಷ್ಟವಶಾತ್ ಒಂದು ಲಕ್ಷಕ್ಕೆ ಒಂದರಂತೆ ಇರುವ ಅಪರೂಪದ ಈ ಖಾಯಿಲೆಗೆ ಚಿಕಿತ್ಸೆ ಅಷ್ಟು ಸುಲಭ ಸಾಧ್ಯವಲ್ಲ. ಚಿಕಿತ್ಸೆ ಇದ್ದರೂ ಪ್ಲಾಸ್ಮಾದಿಂದ ಸಂಸ್ಕರಿಸಿ ಉತ್ಪಾದಿಸಲ್ಪಡುವ ಇಂಥ ಇಂಜೆಕ್ಷನ್ ರೂಪದ ಔಷಧಿಗಳು ಮಾರುಕಟ್ಟೆಯಲ್ಲಿ ದುಬಾರಿಯಾಗಿರುವುದಂತೂ ವಾಸ್ತವ. ಖಾಸಗಿ ಆಸ್ಪತ್ರೆಗಳ ಮೊರೆಹೊಕ್ಕಿದ ಸದ್ರಿ ಗರ್ಭಿಣಿ ಮಹಿಳೆಗೆ, ಖಾಸಗಿ ವೈದ್ಯಕೀಯ ಸಂಸ್ಥೆಗಳು ಪೂರ್ವಭಾವಿಯಾಗಿ ವಿಧಿಸಿ ಉಲ್ಲೇಖಿಸಿದ ಖರ್ಚು ವೆಚ್ಚಗಳು ಆಕೆಯ ಊಹೆಗೂ ನಿಲುಕದ ವಿಚಾರ. ನಿಜಾರ್ಥದಲ್ಲಿ ಹೇಳಬೇಕೆಂದರೆ ಇಂಥಹ ಪ್ರಕರಣಗಳಲ್ಲಿ ತಾಯಿ ಮರಣ ಕಟ್ಟಿಟ್ಟ ಬುತ್ತಿ. ಈ ಸಂದರ್ಭದಲ್ಲಿ ಮಹಿಳೆಗೆ ಆಪ್ತಸಮಾಲೋಚನೆ ಮಾಡಿ ಗಂಭೀರತೆಯನ್ನು ತಿಳಿಹೇಳಲಾಯಿತಾದರೂ, ವಿವಿಧ ಕೌಟುಂಬಿಕ ಕಾರಣಗಳಿಗಾಗಿ ಸಂದಿಗ್ಧತೆಯಲ್ಲಿ ಸಿಲುಕಿದ ಮಹಿಳೆ ತನ್ನ ಬಲಿದಾನವಾದರೂ ಸರಿ ತಾನು ಒಂದು ಮಗುವಿನ ತಾಯಿಯಾಗಲೇಬೇಕು ಎನ್ನುವ ತೀರ್ಮಾನಕ್ಕೆ ಬದ್ಧತೆ ತೋರಿದರು.

ಇಂಥಹ ಅಸಹಾಯಕ ಪರಿಸ್ಥಿತಿಯಲ್ಲಿ ವೆನ್ಲಾಕ್ ಬ್ಲಡ್ ಬ್ಯಾಂಕ್ ನ ಡಾ.ಶರತ್ ಅವರನ್ನು ಭೇಟಿಯಾದ ಸಂಬಂಧಿಕರು, ಫ್ಯಾಕ್ಟರ್ 8 ಇಂಜೆಕ್ಷನ್ ಗಳ ಪೂರೈಕೆಯ ಬಗ್ಗೆ ಕೇಳಿಕೊಳ್ಳುತ್ತಾರೆ. ಆದರೆ, ಗರ್ಭಾವಸ್ಥೆಯ ಜೊತೆಯಲ್ಲಿ ಕ್ಲಿಷ್ಟಕರವಾದ ಪರಿಸ್ಥಿತಿ ಒಳಗೂಡಿರುವುದರಿಂದ, ತಾಯಿ ಮಗುವಿನ ಸಂರಕ್ಷಣೆಯ ವಿಶಿಷ್ಟ ಜವಾಬ್ದಾರಿಯನ್ನು ಹೊತ್ತಿರುವ ಸರಕಾರಿ ಲೇಡಿಗೋಷನ್ ಆಸ್ಪತ್ರೆ ಈ ಮಹಿಳೆಯ ಪ್ರಾಣ ರಕ್ಷಣೆಯನ್ನು ಮಾಡುವ ವೈದ್ಯಕೀಯ ಲೋಕದ ಈ ಸವಾಲನ್ನು ಮನಃಪೂರ್ವಕವಾಗಿ ಸ್ವೀಕರಿಸುತ್ತದೆ. ಆ ಮೂಲಕ ನಿಯಮಿತವಾಗಿ ಗರ್ಭಿಣಿ ಪರೀಕ್ಷೆಯನ್ನು ಸರಕಾರಿ ಲೇಡೀಗೋಶನ್ ಆಸ್ಪತ್ರೆಯಲ್ಲಿ ನಡೆಸಿಕೊಡಲಾಗುತ್ತದೆ. ಲೇಡಿಗೋಶನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ದುರ್ಗಾಪ್ರಸಾದ್ ಎಂ.ಆರ್. ಇವರು ವೆನ್ಲಾಕ್ ಬ್ಲಡ್ ಬ್ಯಾಂಕ್ ನ ನಿರಂತರ ಸಂಪರ್ಕದಲ್ಲಿದ್ದು, ಆರೋಗ್ಯ ಇಲಾಖೆಯ ರಾಜ್ಯಮಟ್ಟದ ಹಿರಿಯ ಅಧಿಕಾರಿಗಳವರ ಬೆಂಬಲ ಮತ್ತು ಅನುಮತಿಯನ್ನು ಡಾ.ಶರತ್ ಅವರ ಮುಖಾಂತರ ಪಡೆದು ಸರಕಾರದ ವತಿಯಿಂದ ಈ ಮಹಿಳೆಗೆ ವಾರಕ್ಕೆ ಒಂದಾವರ್ತಿ ಅಗತ್ಯತೆಯ ಈ ಇಂಜೆಕ್ಷನ್ ನ್ನು ನೀಡುವ ವ್ಯವಸ್ಥೆಯನ್ನು ಗರ್ಭಾವಸ್ಥೆಯ ಪೂರ್ಣ ಅವಧಿಯವರೆಗೂ ನಿರ್ವಹಿಸುವ ಕ್ರಮ ಹಾಗೂ ವಿಧಾನಗಳನ್ನು ನೆರವೇರಿಸಿಕೊಡಲಾಗುತ್ತದೆ.

ಮಹಿಳೆಗೆ ನಿರಂತರವಾದ ಆರೈಕೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ನಡೆದು, ಆಕೆಯ ನಿರೀಕ್ಷಿತ ಹೆರಿಗೆ ದಿನಾಂಕಕ್ಕೆ ಸರಿಯಾಗಿ ಇಪ್ಪತ್ತು ದಿನಗಳ ಮುಂಚಿತವಾಗಿ ದಾಖಲು ಮಾಡಿಕೊಳ್ಳಲಾಗುತ್ತದೆ. ಸದ್ರಿ ಫ್ಯಾಕ್ಟರ್ V III (8) ಇಂಜೆಕ್ಷನ್ ಗಳ ಪೂರೈಕೆಯನ್ನು ಖಾತ್ರಿಪಡಿಸಿಕೊಂಡು ಸರ್ವವ್ಯವಸ್ಥೆ ಮತ್ತು ಸಿದ್ಧತೆಗಳೊಂದಿಗೆ ಸರಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ಸುರಕ್ಷಿತವಾಗಿ ಸಿಸೇರಿಯನ್ ಶಸ್ತ್ರಚಿಕಿತ್ಸೆಯ ಮೂಲಕ ಹೆರಿಗೆ ನಡೆಸಿಕೊಡಲಾಗಿದೆ. ತಾಯಿ ಮಗುವಿಗೆ ಪುನರ್ಜನ್ಮದ ನವಚೈತನ್ಯದ ಬಾಳನ್ನು ಸರಕಾರಿ ವ್ಯವಸ್ಥೆಯಲ್ಲಿ ನೀಡಲಾಗಿರುವುದು ಎಲ್ಲರೂ ಹೆಮ್ಮೆ ಪಡುವ ವಿಚಾರ. ಗರ್ಭಿಣಿಯ ಆರೈಕೆಯ ಅವಧಿಯಲ್ಲಿ ಲಕ್ಷಾಂತರ ರೂಪಾಯಿ ಬೆಲೆಯುಳ್ಳ 25,000 ಯೂನಿಟ್ ಅಪರೂಪದ ಈ ಇಂಜೆಕ್ಷನ್ ನ್ನು ಸರ್ಕಾರದ ವತಿಯಿಂದ ನೀಡಲಾಗಿರುವುದು ಉಲ್ಲೇಖನೀಯ ಅಂಶ.

ಕೆ.ಎಂ.ಸಿ.ಯ ತಜ್ಞ ವೈದ್ಯರುಗಳು ಹಾಗೂ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರುಗಳಾದ ಡಾ.ಅನುಪಮಾ ರಾವ್, ಡಾ.ಸಿರಿಗಣೇಶ್, ಡಾ.ನಮಿತಾ ಅಲ್ಲದೇ ಅರಿವಳಿಕೆ ತಜ್ಞರುಗಳಾದ ಡಾ.ಸುಮೇಶ್ ರಾವ್, ಡಾ.ರಂಜನ್ ಹಾಗೂ ಲೇಡಿಗೋಷನ್ ನ ಶುಶ್ರೂಷಕ ವೃಂದದ ಸೇವೆ ಸ್ಮರಣೀಯ.

ಪ್ರಸವೋತ್ತರವಾಗಿ ಸುಮಾರು ಹತ್ತು ದಿವಸಗಳ ಆಸ್ಪತ್ರೆ ಆರೈಕೆಯ ಬಳಿಕ ಸುಖಕರವಾಗಿ ಮನೆ ಸೇರಿದ ಈ ಮಹಿಳೆ ಸಂತಸದ ಅಶ್ರುಧಾರೆಯ ಮೂಲಕ ಲೇಡಿಗೋಷನ್ ಆಸ್ಪತ್ರೆ ಮತ್ತು ಉತ್ಕೃಷ್ಟ ಸರಕಾರಿ ವ್ಯವಸ್ಥೆಗೆ ಕೃತಜ್ಞತೆ ಸಲ್ಲಿಸಿರುವುದು ಗುಣಮಟ್ಟದ ತಾಯಿ ಮಗುವಿನ ಆರೋಗ್ಯ ಸೇವೆಗೆ ಹಿಡಿದ ಕೈಗನ್ನಡಿ ಎಂದೇ ವಿಶ್ಲೇಷಿಸಲ್ಪಟ್ಟಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X