Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. Surathkal | ಪೊಲೀಸ್ ದೌರ್ಜನ್ಯದ ಆರೋಪ;...

Surathkal | ಪೊಲೀಸ್ ದೌರ್ಜನ್ಯದ ಆರೋಪ; ಹೊಸಬೆಟ್ಟುವಿನಲ್ಲಿ ವ್ಯಕ್ತಿ ಆತ್ಮಹತ್ಯೆ

► ಮೃತದೇಹವಿಟ್ಟು ಪ್ರತಿಭಟನೆ; ತನಿಖೆಗೆ ಅಧಿಕಾರಿಗಳ ಭರವಸೆ

ವಾರ್ತಾಭಾರತಿವಾರ್ತಾಭಾರತಿ27 Oct 2026 11:04 PM IST
share
Surathkal | ಪೊಲೀಸ್ ದೌರ್ಜನ್ಯದ ಆರೋಪ; ಹೊಸಬೆಟ್ಟುವಿನಲ್ಲಿ ವ್ಯಕ್ತಿ ಆತ್ಮಹತ್ಯೆ

ಸುರತ್ಕಲ್: ಹೊಸಬೆಟ್ಟು ನಿವಾಸಿ ಸೋಮನಾಥ (45) ಎಂಬವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಹೊಸಬೆಟ್ಟು ಜಟ್ಟಿ ಬಳಿ ನಡೆದಿದೆ.

ಅವರ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಮೃತದೇಹವಿದ್ದ ಆ್ಯಂಬುಲೆನ್ಸ್ ಅನ್ನು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು.

ಗಿರೀಶ್ ಎಂಬವರು ಸೋಮನಾಥ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸದಿದ್ದರಿಂದ, ಅವರ ಅಕ್ಕನ ಪತಿ ಗುಡ್ಡಕೊಪ್ಲ ನಿವಾಸಿ ನೀಲಾದರ ಎಂಬವರಿಗೆ ಮಾಹಿತಿ ನೀಡಿದ್ದರು. ಅವರು ಸೋಮನಾಥರ ಮನೆಗೆ ತೆರಳಿ ನೋಡಿದಾಗ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮನಾಥ ಅವರು ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಹೊಸಬೆಟ್ಟುವಿನಲ್ಲಿ ವಾಸವಾಗಿದ್ದರು. ಅವರು ಪತ್ನಿ ಹಾಗೂ ಏಳು ವರ್ಷದ ಪುತ್ರನನ್ನು ಅಗಲಿದ್ದಾರೆ.

►ಯುವತಿ ನೀಡಿದ್ದ ದೂರಿನ ಸಂಬಂಧ ವಿಚಾರಣೆ

ಅ.25ರಂದು ರಾತ್ರಿ 11.30ರ ಸುಮಾರಿಗೆ ಕುಳಾಯಿ ಮೀನುಗಾರಿಕಾ ಜಟ್ಟಿ ಬಳಿ ಗೆಳೆಯರೊಂದಿಗೆ ಇದ್ದಾಗ, ದಿಲ್ಲಿ ಮೂಲದ ಯುವತಿ ಮತ್ತು ಕೇರಳ ಮೂಲದ ಯುವಕನೊಬ್ಬ ಅಲ್ಲಿರುವುದನ್ನು ಸೋಮನಾಥ ಮತ್ತಿತರರು ಗಮನಿಸಿದ್ದರು. ಬಳಿಕ ಅವರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.

ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಸೋಮನಾಥರನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಅವರ ಮೊಬೈಲ್ ಫೋನ್ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ ನಡೆಸಿ, ವೀಡಿಯೊ ಚಿತ್ರೀಕರಿಸಿ ವಿಚಾರಣೆ ಬಳಿಕ ಕಳುಹಿಸಿದ್ದರು ಎನ್ನಲಾಗಿದೆ.

ಇದೇ ವಿಚಾರವಾಗಿ ಸೋಮವಾರ ಬೆಳಿಗ್ಗೆ ಮತ್ತೆ ಠಾಣೆಗೆ ಕರೆಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ತಡರಾತ್ರಿ ಮನೆಗೆ ಕಳುಹಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಮತ್ತೆ ಠಾಣೆಗೆ ಬರುವಂತೆ ಸೂಚಿಸಲಾಗಿತ್ತು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಗೆ ಮರಳಿದ್ದ ಸೋಮನಾಥ ಅವರು ಮನನೊಂದು ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

►ತನಿಖೆ ನಡೆಸುವ ಭರವಸೆ

ಸೋಮನಾಥ ಅವರ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು, ಮೃತದೇಹವಿದ್ದ ಆ್ಯಂಬುಲೆನ್ಸ್ ಅನ್ನು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಬಳಿಕ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ, ಪಣಂಬೂರು ಉಪವಿಭಾಗದ ಎಸಿಪಿ, ಪಣಂಬೂರು ಪೊಲೀಸ್ ನಿರೀಕ್ಷಕ ಹಾಗೂ ಸುರತ್ಕಲ್ ಪೊಲೀಸ್ ನಿರೀಕ್ಷಕರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

ಯುವತಿ ಮತ್ತು ಯುವಕನ ವಿರುದ್ಧ ಕ್ರಮ ಕೈಗೊಳ್ಳುವುದು, ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಪೊಲೀಸರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದು ಹಾಗೂ ಹೊಸಬೆಟ್ಟು ಗ್ರಾಮಸ್ಥರಿಗೆ ಪೊಲೀಸರು ನೀಡುತ್ತಿರುವ ಕಿರುಕುಳಕ್ಕೆ ಕಡಿವಾಣ ಹಾಕುವುದು ಸೇರಿದಂತೆ ಹಲವು ಭರವಸೆಗಳನ್ನು ಅಧಿಕಾರಿಗಳು ನೀಡಿದರು. ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು ಎಂದು ತಿಳಿದು ಬಂದಿದೆ.

"ಸೋಮನಾಥ ಅವರ ಸಾವಿಗೆ ಮಹಿಳೆ ಮತ್ತು ಆಕೆಯ ಗೆಳೆಯ ಕಾರಣ‌ವಾಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಪ್ರತಿಭಟನಾನಿರತರು ಆರೋಪಿಸಿದ್ದಾರೆ. ಆ ಬಗ್ಗೆ ದೂರು ನೀಡಿದರೆ ಪ್ರಕರಣ‌ ದಾಖಲಿಸಿಕೊಳ್ಳಲಾಗುವುದು ಎಂದು ಪ್ರತಿಭಟನಾ‌ನಿರತರಿಗೆ ಮನವರಿಕೆ ಮಾಡಲಾಯಿತು.‌ ಬಳಿಕ ಅವರು ಪ್ರತಿಭಟನೆಯನ್ನು ಹಿಂಪಡೆದುಕೊಂಡರು"

- ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ‌








Tags

SurathkalallegationspoliceHosbettu
share
ವಾರ್ತಾಭಾರತಿ
ವಾರ್ತಾಭಾರತಿ
Next Story
X